Goat sheep unit purchase subsidy ಕುರಿ / ಮೇಕೆ ಸಾಕಾಣಿಕೆಗೆ ಘಟಕಕ್ಕೆ 50 ಸಾವಿರ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Admin

Published on:

Spread the love

Goat sheep unit purchase subsidy : ಕುರಿ ಸಾಕಾಣಿಕೆಗೆ  50 ಸಾವಿರ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಅಡಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕೆ ನಿಗಮದಿಂದ ಸಹಾಯಧನ ಹಾಗೂ ನೇರ ಸಾಲ ಮಂಜೂರು ಮಾಡಲಾಗುತ್ತದೆ. ಕುರಿ ಸಾಕಾಣಿಕೆ ಘಟಕದ ವೆಚ್ಚ 1 ಲಕ್ಷ ರೂಪಾಯಿ ಇರುತ್ತದೆ. ಇದರಲ್ಲಿ 50 ಸಾವಿರ ರೂಪಾಯಿ ಸಹಾಯಧನ (ಸಬ್ಸಿಡಿ) ಇರುತ್ತದೆ. ಉಳಿದ 50 ಸಾವಿರ ರೂಪಾಯಿಯನ್ನು ಶೇ. 4 ರಹಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.

Goat sheep unit purchase subsidy ಇದರೊಂದಿಗೆ ನೇರ ಸಾಲ ಯೋಜನೆ ಅಡಿಯಲ್ಲಿ ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ನಿಗಮದಿಂದ ಸಹಾಯಧನ ಹಾಗೂ ನೇರ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ 1 ಲಕ್ಷ ರೂಪಾಯಿ ಹಾಗೂ 50 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. 50 ಸಾವರ ರೂಪಾಯಿಯನ್ನು ಶೇ. 4 ರಷ್ಟು ಬಡ್ಡಿದರದಲ್ಲಿ ಸಾಲ ನೀಡಲಾಗುವುದು.

Goat sheep unit purchase subsidy

ಈ ಮೇಲಿನ ಸೌಲಭ್ಯವನ್ನು  ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು 2026-27ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

Goat sheep unit purchase subsidy ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಸಹಯೋಗದೊಂದಿಗೆ) ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ರೈತರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್ ಮೂಲಕ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

Goat sheep unit purchase subsidy ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು. ಆದಿ ಕರ್ನಾಟಕ, ಆದಿ ಆಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿದ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

Goat sheep unit purchase subsidy ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

ಅರ್ಜಿ ಸಲ್ಲಿಸಲು ಭಾವಚಿತ್ರ ಬೇಕು. ಜಾತಿ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆದಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು), ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು.

Goat sheep unit purchase subsidy

ಹಸು ಎಮ್ಮೆ ಖರೀದಿಸಲು ತೆಗೆದುಕೊಂಡ ಸಾಲಗಳ ಮೇಲೆ ಬಡ್ಡಿ ಸಬ್ಸಿಡಿ ಮತ್ತು ಜಾನುವಾರುಗಳಿಗೆ ವಿಮಾ ರಕ್ಷಣೆಯೂ ದೊರೆಯುತ್ತದೆ.

Goat sheep unit purchase subsidy ಏನಿದು ಹೈನುಗಾರಿಕೆ ಯೋಜನೆ

Goat sheep unit purchase subsidy  ಕರ್ನಾಟಕ ಹೈನುಗಾರಿಕೆ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಿ ಹೈನುಗಾರರನ್ನು ಬೆಂಬಲಿಸುವ ಮತ್ತು ಹೈನುಗಾರಿಕೆ ವಲಯವನ್ನು ಉತ್ತೇಜಿಸಲು ಗುರಿಯನ್ನು ಹೊಂದಿದೆ. ಇದು ಡೈರಿ ಘಟಕಗಳನ್ನು ಸ್ಥಾಪಿಸಲು, ಪ್ರಾಣಿಗಳನ್ನು ಖರೀದಿಸಲು ಮತ್ತು ಸಾಲಗಳನ್ನು ಪಡೆಯಲು ಸಹಾಯಧನಗಳನ್ನು ಒಳಗೊಂಡಂತೆ ಡೈರಿ ರೈತರಿಗೆ ಹಣಕಾಸಿನ ನೆರವು, ತರಬೇತಿ ಮತ್ತು ಮಾರುಕಟ್ಟೆ ಬೆಂಬಲವನ್ನು ಒದಗಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಹೈನುಗಾರಿಕೆಯ ಘಟಕಗಳನ್ನು ಸ್ಥಾಪಿಸಲು ಮತ್ ಅಭಿವೃದ್ಧಿಪಡಿಸಲು 1.25 ಲಕ್ಷ ರೂಪಾಯಿಗಳ ಸಹಾಯಧನವನ್ನು ನೀಡಲಾಗುತ್ತದೆ. ಇದು ಸ್ಥಿರ ಜೀವನೋಪಾಯ ಮತ್ತು ಹಾಲು ಉತ್ಪಾದನೆಗೆ ನೆರವಾಗುತ್ತದೆ.

Goat sheep unit purchase subsidy

ಈ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶದ ರೈತರಿಗೆ ಸ್ಥಿರ ಆದಾಯದ ಮೂಲವನ್ನು ಒದಗಿಸುವುದು ಮತ್ತು ಹೈನುಗಾರಿಕೆ ಕ್ಷೇತ್ರವನ್ನು ಬಲಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ.

Leave a Comment