Cyclone Heavy rain alert three days ಮತ್ತೆ ಚಂಡಮಾರುತದ ಭೀತಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 3 ದಿನ ಮಳೆ ಎಚ್ಚರಿಕೆ

Written by Admin

Published on:

Spread the love

Cyclone Heavy rain alert three days : ವಾಯುಭಾರ ಕುಸಿತದಿಂದಾಗಿ ಮತ್ತೆ ಚಂಡಮಾರುತ ಉಂಟಾಗುವ ಸಾಧ್ಯತೆಯಿರುವುದರಿಂದ ಆಂದ್ರಪ್ರದೇಶ, ಕೇರಳ ಸೇರಿದಂತೆ ಕರ್ನಾಟಕದಲ್ಲಿಯೂ ಮಳೆಯ ಎಚ್ಚರಿಕೆ ನೀಡಲಾಗಿದೆ.

ಇತ್ತೀಚೆಗೆ ದಕ್ಷಿಣ ಭಾರತದಲ್ಲಿ ಆಂಧ್ರಪ್ರದೇಶ ಓರಿಸ್ಸಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅರ್ನಾಬ್ ಅವಾಂತರ ಸೃಷ್ಟಿ ಮಾಡಿದ ಚಂಡಮಾರುತದ ಬೆನ್ನಲ್ಲೆ ಆಂಧ್ರಪ್ರದೇಶಕ್ಕೆ ಮತ್ತೊಂದು ಆತಂಕ ಶುರುವಾಗಿದೆ.

ಹೌದು, ನವೆಂಬರ್ 2 ರಂದು ಅಂದರೆ ನಾಳೆಯಿಂದ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಬಂಗಾಳ ಕೊಲ್ಲಿಯಲ್ಲಿ ಇನ್ನೊಂದು ಚಂಡಮಾರುತ ಅಪ್ಪಳಿಸಲಿದೆ. ದಕ್ಷಿಣ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚೀಮ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ನವೆಂಬರ್ 2 ರ ವೇಳೆಗೆ ಆಂಧ್ರಪ್ರದೇಶ ಕರಾವಳಿಯ ಸಮೀಪ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ತೀವ್ರವಾಗುವ ಸಾಧ್ಯತೆಯಿದೆ.

Cyclone Heavy rain alert three days ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ?

ಸೋಮವಾರ (ನವೆಂಬರ್ 2) ರಂದು ಆಂಧ್ರ ಕರಾವಳಿಯನ್ನು ಚಂಡಮಾರುತ ಅಪ್ಪಳಿಸಲಿದ್ದು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಸಾಯಂಕಾಲದ ವೇಳೆಗೆ ಆಂದ್ರಪ್ರದೇಶ ಕರಾವಳಿಯನ್ನು ತಲುಪುವ ಸಾಧ್ಯತೆಯಿದೆ.

ಕೇರಳ, ತಮಿಳುನಾಡು, ಪುದುಚೇರಿ ಹಾಗೂ ಕ್ಯಾರಿಕಲ್ ನಲ್ಲಿ ನವೆಂಬರ್ 5 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿಯೂ ಮಳೆಯಾಗಲಿದೆ. ಹೌದು, ಚಂಡಮಾರುತದ ಪರಿಣಾಮವಾಗಿ ಈಗಾಗಲೇ ಮೋಡ ಕವಿದ ವಾತಾವರಣ ಉಂಟಾಗಿದೆ. ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ನವೆಂಬರ್ 3 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.

ಚಿಕ್ಕಮಗಳೂರು, ದಾವಣಗೆರೆ, ತುಮಕೂರುನಲ್ಲಿ ನವೆಂಬರ್ 3 ರಂದು ಮಳೆಯಾಗಲಿದೆ. ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ನವೆಂಬರ್ 4 ರಂದು ಮಳೆಯಾಗಲಿದೆ. ಹಾಗಾಗಿ ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Cyclone Heavy rain alert three days ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

Cyclone Heavy rain alert three days ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : Cow buffalo purchase subsidy ಎರಡು ಎಮ್ಮೆ ಅಥವಾ ಹಸುಗಳ ಸಾಕಾಣಿಕೆಗೆ 1.25 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ  ಪಡೆಯಬಹುದು.

Leave a Comment