Bara parihara 1st installment released : ಬರದಿಂದ ಅಪಾರ ಪ್ರಮಾಣದಲ್ಲಿ ಹಾನಿ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು, ಬರಗಾಲದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಅನುಭವಿಸುತ್ತಿರುವ ರೈತರಿಗೆ ಸಹಾಯವಾಗಲೆಂದು ಮೊದಲ ಕಂತಿನ ಹಣ 2500 ರೂಪಾಯಿ ನೇರವಾಗಿ ರೈತರ ಖಾತೆಗೆ ಜಮೆ ಮಾಡಲು ಹಣ ಬಿಡುಗಡೆ ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ತಿಳಿಸಿದ್ದಾರೆ.
ಬರದಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ರೈತರಿಗೆ ಮೊದಲ ಕಂತಿನ ಇನ್ ಪುಟ್ ಸಬ್ಸಿಡಿ ನೆರವು ಬಿಡುಗಡೆಗೆ ಮುಖ್ಯಮಂತ್ರಿ ಡಿಕೆ. ಶಿವಕುಮಾರ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಚಾಲನೆ ನೀಡಿದರು.
Bara parihara 1st installment released ಬರದಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ನೆರವಾಗಲು ಎನ್.ಡಿ.ಆರ್.ಎಫ್ ನಿಯಮಗಳಂತೆ ರಾಜ್ಯ ಸರ್ಕಾರವು ಪ್ರತಿ ರೈತರಿಗೆ ಗರಿಷ್ಠ ಎರಡು ಹೆಕ್ಟೇರಿಗೆ ಮಿತಿಗೊಳಿಸಿ 5000 ರೂಪಾಯಿ ಪರಿಹಾರ ನೀಡಲು ತೀರ್ಮಾನಿಸಿದೆ. ಅದರಂತೆ ಮೊದಲ ಕಂತಿನಲ್ಲಿ 2500 ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದ. ಎರಡು ಕಂತಿನ ಹಣ ಮುಂದಿನ ಮೂರು ವಾರದೊಳಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದು ಮೊದಲ ಕಂತಿನ ಹಣ ವಾಗಿದೆ. ಮುಂದಿನ ಕಂತು ಇನ್ನೂ ಮೂರು ವಾರದ ನಂತರ ರೈತರ ಖಾತೆಗೆ ಜಮೆಯಾಗಲಿದೆ.
Bara parihara 1st installment released ರಾಜ್ಯದ 226 ತಾಲೂಕುಗಳಲ್ಲಿ ಬರ ಪರಿಸ್ಥಿತಿ
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಮಳೆಯ ತೀವ್ರ ಕೊರತೆಯಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಬೆಳೆಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಒಟ್ಟು 226 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಅಧಿಕೃತವಾಗಿ ಘೋಷಿಸಿದೆ. ಹೀಗಾಗಿ ರಾಜ್ಯದ ಬಹುತೇಕ ಜಿಲ್ಲೆಗಳು ಅಪಾರ ಪ್ರಮಾಣದಲ್ಲಿ ಹಾನಿ ಅನುಭವಿಸಿದ್ದರಿಂದ ರೈತರಿಗೆ ನೆರವಾಗಲೆಂದು ಮೊದಲ ಕಂತಿನ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಈಗಾಗಲೇ ಮೊದಲ ಕಂತಿನ ಜಮೆ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ ಕಂತು ಅತೀ ಶೀಘ್ರದಲ್ಲಿ ರೈತರ ಖಾತೆಗೆ ಜಮೆಯಾಗಲಿದೆ.
Bara parihara 1st installment released ಬೆಳೆ ಹಾನಿ ಪರಿಹಾರ ಯಾರು ಯಾರಿಗೆ ಜಮೆಯಾಗಿದೆ
ಬೆಳೆ ಹಾನಿ ಪರಿಹಾರ ಹಣ ಯಾವ ಯಾವ ರೈತರ ಖಾತೆಗೆ ಜಮೆಯಾಗಿದೆ ಎಂಬುದನ್ನು ಇಲ್ಲೇ ಚೆಕ್ ಮಾಡಬಹುದು. ಹೌದು, ಇಲ್ಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಪರಿಹಾರ ಪೇಜ್ ತೆರೆದುಕೊಳ್ಳುತ್ತದೆ.
https://parihara.karnataka.gov.in/BatchWisePayment/
ಅಲ್ಲಿ ನೀವು ಜಿಲ್ಲಾವಾರು ವರದಿ ಯಾವ ಜಿಲ್ಲೆಯ ಎಷ್ಟು ರೈತರಿಗೆ ಬೆಳೆ ಹಾನಿ ಪರಿಹಾರ ಮಂಜೂರಾಗಿದೆ. ಎಷ್ಟು ರೈತರು ಹಾಗೂ ಎಷ್ಟು ಜಮೆಯಾಗಿದೆ. ಒಠ್ಟು ಫಲಾನುಭವಿಗಳು ಹಾಗೂ ಹಣ ಸಂದಾಯ ಸೇರಿದಂತೆ ಇನ್ನಿತರ ಮಾಹಿತಿ ಅಲ್ಲಿ ಕಾಣಿಸುತ್ತದೆ.
Bara parihara 1st installment released ಕೇಂದ್ರ ಸರ್ಕಾರಕ್ಕೆ 22400 ಕೋಟಿ ಪರಿಹಾರ ಮನವಿ
ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ಪ್ರಮಾಣವನ್ನು ವಿವರಿಸಿ ಎನ್.ಡಿ.ಆರ್.ಎಪ್ ಅಡಿಯಲ್ಲಿ 22400 ಕೋಟಿ ರೂಪಾಯಿ ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಸಲಾಗಿದೆ.
ಇದನ್ನೂ ಓದಿ Village Land map ನಿಮ್ಮೂರಿನ ಎಲ್ಲಾ ಜಮೀನುಗಳ ಮ್ಯಾಪ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿ 2024
ಪರಿಹಾರ ವಿತರಣೆಯಲ್ಲಿ ವಿಳಂಬ, ಅಕ್ರಮ ತಪ್ಪಿಸಲು ಅನಗತ್ಯ ತೊಂದರೆಗಳನ್ನು ತಪ್ಪಿಸಲು ಸಂಪೂರ್ಣ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ. ಪರಿಹಾರ ಪೋರ್ಟಲ್ ಡಿಜಿಟಲ್ ಬೆಳೆ ಸಮೀಕ್ಷೆ ಹಾಗೂ ಫ್ರೂಟ್ಸ್ ದತ್ತಾಂಶಗಳನ್ನು ಸಂಯೋಜಿಸಿ ಅರ್ಹ ರೈತರ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.
Bara parihara 1st installment released ಪರಿಹಾರ ಪಡೆಯಲು ರೈತರು ಯಾವುದೇ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಥವಾ ಹೊಸದಾಗಿ ಭೌತಿಕವಾಗಿ ದಾಖಲೆಗಳನ್ನು ಸಲ್ಲಿಸಬೇಕಿಕ್ಲ. ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಆಧಾರಿತ ನೇರ ನಗದು ವರ್ಗಾವಣೆ ಡಿಬಿಟಿ ಮೂಲಕ ಪರಿಹಾರದ ಜಮೆಯಾಗಲಿದೆ.





