Self-employment scheme subsidy ಮಹಿಳೆಯರಿಗೆ 3 ಲಕ್ಷ ರೂಪಾಯಿಯವರೆಗೆ ಸಾಲ 2 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ನವೆಂಬರ್ 31 ಕೊನೆಯ ದಿನ

Written by Admin

Published on:

Spread the love

Self-employment scheme subsidy  : ಸ್ವಯಂ ಉದ್ಯೋಗ ಪ್ರಾರಂಭಿಸಲು ಮಹಿಳೆಯರಿಗೆ 1 ರಿಂದ 3 ಲಕ್ಷ ರೂಪಾಯಿಯವರೆಗೆ ಬ್ಯಾಂಕ್ ಸಾಲ ಮತ್ತು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಯೋಜನೆ ಅಡಿಯಲ್ಲಿ 2 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.

ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಿಸಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನವನ್ನು ನೀಡಲಾಗುವುದು.

21 ರಿಂದ 55 ವಯೋಮಾನದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು ಕನಿಷ್ಟ 50 ಸಾವಿರ ರೂಪಾಯಿಯಿಂದ  3 ಲಕ್ಷ ರೂಪಾಯಿಯವರೆಗೆ ಸಾಲ ನೀಡಲಾಗುವುದು.

Self-employment scheme subsidy   ಯಾರಿಗೆ ಎಷ್ಟು ಸಬ್ಸಿಡಿ ನೀಡಲಾಗವುದು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಆದಾಯ ಮಿತಿ 2 ಲಕ್ಷ ರೂಪಾಯಿ ಈ ಮಹಿಳೆಯರಿಗೆ ಶೇ. 75 ರಷ್ಟು ಅಥವಾ ಗರಿಷ್ಠ 2 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು. ಇತರೆ ವರ್ಗದ ಫಲಾನುಭವಿಗಳಿಗೆ ಆದಾಯ ಮಿತಿ 1.50 ಲಕ್ಷ ರೂಪಾಯಿ. ಈ ವರ್ಗದ ಮಹಿಳೆಯರಿಗೆ ಶೇ. 30 ರಷ್ಟು ಅಂದರೆ ಗರಿಷ್ಠ 90 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಧನಶ್ರೀ ಯೋಜನೆ ಅಡಿಯಲ್ಲಿ ಹೆಚ್.ಐ.ವಿ ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ನೀಡಲಾಗುವ 45 ಸಾವಿರ ರೂಪಾಯಿಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು. 30 ರಿಂದ 55 ವರ್ಷದೊಳಗಿರಬೇಕು. ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿದ್ದು, ಬ್ಯಾಂಕ್ ಖಾತೆಯ ಪ್ರತಿಯನ್ನು ಲಗತ್ತಿಸಬೇಕು. ಹಾಗೂ ಕಡ್ಡಾಯವಾಗಿ ಬ್ಯಾಂಕ್ ಖಾತೆಯೊಂದಿಗೆ ಅರ್ಜಿದಾರರ ಆಧಾರ್ ಸೀಡಿಂಗ್ ಆಗಿರಬೇಕು. ಯಾವುದೇ ಆರ್ಥಿಕ ಸಂಸ್ಥೆ ಬ್ಯಾಂಕುಗಳಲ್ಲಿ ಸುಸ್ತಿದಾರರಾಗಿರಬಾರದು ಎಂಬ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು. ಅರ್ಜಿದಾರರು ಎಚ್.ಐ. ವಿ ಸೋಂಕಿತ ಕುರಿತು ಜಿಲ್ಲೆ ಅಥವಾ ತಾಲೂಕು ಹತ್ತಿರದ ಆರೋಗ್ಯ ಕೇಂದ್ರದಲ್ಲಿನ ಐಸಿಟಿಸಿ, ಪಿಪಿಟಿಸಿಟಿ ಕೇಂದ್ರದ ವೈದ್ಯಕೀಯ ವರದ, ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಅರ್ಜಿಗಳನ್ನು ನವೆಂಬರ್ 31 ರೊಳಗೆ ಸಲ್ಲಿಸಬೇಕು.

Self-employment scheme subsidy  ಚೇತನ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನ

ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 45 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ವಯೋಮಿತಿ 20 ರಿಂದ 55 ವರ್ಷ ಇರುತ್ತದೆ. ಈ ಯೋಜನೆಯ ಅರ್ಜಿಯನ್ನು ಆನ್ಲೈನ್ ಅಥವಾ ಆಫ್ ಲೈನ್ ಗಳಲ್ಲಿ ಸಲ್ಲಿಸಬಹುದು.

Self-employment scheme subsidy

Self-employment scheme subsidy  ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ

ಲಿಂಗತ್ವ ಅಲ್ಪಸಂಖ್ಯಾತರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 45 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ವಯೋಮಿತಿ 20 ರಿಂದ 55 ವರ್ಷಗಳಿರುತ್ತದೆ.

Self-employment scheme subsidy  ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ

ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 45 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ವಯೋಮಿತಿ 20 ರಿಂದ 55 ವರ್ಷ ಇರುತ್ತದೆ.

Self-employment scheme subsidy

ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಫೇಕ್ಷಿಗಳು ಅರ್ಜಿದಾರರು ಸಚಿವರು, ಶಾಸಕರು, ಕರ್ನಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ (ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಈ ಹಿಂದೆ ಅರ್ಜಿ ಸಲ್ಲಿಸಿದವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಥವಾ ನಿಗಮದ ವೆಬ್ಸೈಟ್ https://kswdc.karnataka.gov.in/

ಗೆ ಸಂಪರ್ಕಿಸಬಹುದು.

Self-employment scheme subsidy

Leave a Comment