Crop insurance applications invited ಹಿಂಗಾರು ಬೇಸಿಗೆ ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ ಇಲ್ಲಿದೆ ಮಾಹಿತಿ 2026

Written by Admin

Published on:

Spread the love

Crop insurance applications invited : ಕರ್ನಾಟಕ ರೈತ ಸುರಕ್ಷಾ  ಪ್ರಧಾನಮಂತ್ರಿ ಪಸಲ್ ಬಿಮಾ (ವಿಮಾ) ಯೋಜನೆಯನ್ನು 2026-27ನೇ ರ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಗುಂಡ್ಲುಪೇಟೆ ತಾಲೂಕು ಕಸಬಾ ಹೋಬಳಿಗೆ ನೀರಾವರಿ ಆಶ್ರಿತ ಈರುಳ್ಳಿ, ಮಳೆ  ಆಶ್ರಿತ ಕಡಲೆ, ನೀರಾವರಿ ಆಶ್ರಿತ ಮುಸುಕಿನ ಜೋಳ, ಮಳೆ ಆಶ್ರಿತ ಮುಸುಕಿನ ಜೋಳ, ನೀರಾವರಿ ಆಶ್ರಿತ ಈರುಳ್ಳಿ, ಅನಿರ್ಧಿಷ್ಟವಾಧಿ ಟೊಮ್ಯಾಟೋ, ಹಂಗಳ ಹೋಬಳಿಗೆ ಮಳೆ ಆಶ್ರಿತ ಮುಸಕಿನ ಜೋಳ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿದೆ.

ಕೊಳ್ಳೆಗಾಲ ತಾಲೂಕು ಕಸಬಾ ಹೋಬಳಿಗೆ ನೀರಾವರಿ ಆಶ್ರಿತ ಭತ್ತ, ಮುಸುಕಿನ ಜೋಳ, ಪಾಳ್ಯ ಹೋಬಳಿಗೆ ನೀರಾವರಿ ಆಶ್ರಿತ ಮುಸುಕಿನ ಜೋಳ ಹಾಗೂ ಹನೂರು ತಾಲೂಕಿನ ಹನೂರು, ಲೋಕ್ಕನಹಳ್ಳಿ, ರಾಮಾಪುರ ಹೋಬಳಿಗೆ ನೀರಾವರಿ ಆಶ್ರಿತ ಮುಸುಕಿನ ಜೋಳ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿದೆ.

Crop insurance applications invited

ವಿಮೆ ಮಾಡಿಸುವ ಆಸಕ್ತ ರೈತರು, ಪಹಣಿ, ಬ್ಯಾಂಕ್ ಖಾತೆಪಾಸ್ ಬುಕ್, ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ಆಯಾ ತಾಲೂಕಿನ ತಮ್ಮ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ (ಖಾತೆ ಹೊಂದಿರುವ ಬ್ಯಾಂಕ್) ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ತೋಟಗಾರಿಕೆ ಕಚೇರಿಗಳಿಗೆ ಹಾಗೂ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Crop insurance applications invited ನೀವು ಯಾವ ಯಾವ ಬೆಳೆಗಳಿಗೆ ವಿಮೆ ವಿಮೆ ಮಾಡಸಬಹುದು ?

ನೀವು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮುಂದೆ / Go ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Premium Calculator  ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ  ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು.

Crop insurance applications invited

ಇದಾದ ನಂತರ ನೀವು ನಿಮ್ಮ ಊರಿನ ವ್ಯಾಪ್ತಿಯಲ್ಲಿರುವ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಆಯ್ಕೆ ಕಾಣಿಸುತ್ತದೆ. ಅಲ್ಲಿ ನೀವು ಬೆಳೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಎಷ್ಟು ಎಕರೆಗೆ ವಿಮೆ ಮಾಡಿಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ Show Premium  ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಎಷ್ಟು ವಿಮೆ ಹಣ ಕಟ್ಟಬೇಕು ಬೆಳೆ ಸಂಪೂರ್ಣವಾಗಿ ಹಾನಿಯಾದರೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬ ಮಾಹಿತಿ ಕಾಣಿಸುತ್ತದೆ.

ಇದನ್ನೂ ಓದಿ : land mutation ಸರ್ವೆ ನಂಬರ್ ಹಾಕಿ ಜಮೀನಿನ ಮುಟೇಶನ್ ಚೆಕ್ ಮಾಡಿ 2026

ಉದಾಹರಣೆಗೆ  ಜೋಳ ಒಂದು ಎಕರಗೆ ವಿಮೆ ಮಾಡಿಸಬೇಕೆಂದುಕೊಂಡಿದ್ದರೆ ಒಂದು ಎಕರೆಗೆ ನೀವು 270 ರೂಪಾಯಿ ಪಾವತಿಸಬೇಕು. ಬೆಳೆ ಹಾನಿಯಾದರೆ ನಿಮಗೆ 18 ಸಾವಿರ ರೂಪಾಯಿಯವರೆಗೆ ವಿಮೆ ಹಣ ಜಮೆಯಾಗುತ್ತದೆ. ಹೆಕ್ಟೇರಿಗೆ 44 ಸಾವಿರ ರೂಪಾಯಿ ವಿಮೆ ಹಣ ಜಮೆಯಾಗುತ್ತದೆ. ಇದು ಬೆಳೆ ಯಾವ ಪ್ರಮಾಣದಲ್ಲಿ ಯಾವ ಹಂತದಲ್ಲಿ ಹಾನಿಯಾಗಿದೆ ಎಂಬುದರ ಮೇಲೆ ಅವಲಂಬಿಸಿದೆ. ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ದೂರು ನೀಡಬೇಕು. ನಂತರ ವಿಮಾ ಕಂಪನಿಯ ಪ್ರತಿನಿಧಿ ತಮ್ಮ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡುತ್ತಾರೆ ನಂತರ ನಿಮ್ಮ ಖಾತೆಗೆ ವಿಮೆ ಹಣ ಜಮೆಯಾಗುತ್ತದೆ.

Crop insurance applications invited

Leave a Comment