Aadhaar Number ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ರೈತರು ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.
ಹೌದು, ರೈತ ಮಿತ್ರರೇ, ಮೊಬೈಲ್ ನಂಬರ್, ಪ್ರೋಪೋಸಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವಂತೆ ಈಗ ಆಧಾರ್ ನಂಬರ್ ಹಾಕಿಯೂ ನೀವು ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
Aadhaar Number ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ರೈತರು ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಈ
https://samrakshane.karnataka.gov.in/PublicHome.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಸಂರಕ್ಷಣೆ ಪೇಜ್ ಕಾಣಿಸುತ್ತದೆ. ಅಲ್ಲಿ ಫಾರ್ಮರ್ಸ್ ಕಾಲಂ ಕೆಳಗಡೆ ಕಾಣುವ Check status ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮಗೆ ಮೂರು ಆಯ್ಕೆಗಳಉ ಕಾಣಿಸುತ್ತವೆ. ಪ್ರೋಪೊಸಲ್, ಮೊಬೈಲ್ ನಂ. ಹಾಗೂ Aadhaar Number ಹೀಗೆ ಮೂರು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು AaDhaar ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಆಧಾರ್ ನಂಬರ್ ನಮೂದಿಸಬೇಕು. ಅದರ ಕೆಳಗಡೆ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ವಿಮಾ ಕಂಪನಿಯಿಂದ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ. ಅಲ್ಲಿ ಕಾಣುವ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ಬೆಳೆವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ.
Aadhaar Number ಯಾವ ಯಾವ ಬೆಳಗೆ ಎಷ್ಟು ವಿಮೆ ಹಣ ಜಮೆಯಾಗಲಿದೆ?
ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದವರು ಕಳೆದ ಸಾಲಿನಲ್ಲಿ ಹಾಗೂ ಪ್ರಸಕ್ತ ಸಾಲಿನಲ್ಲಿ ಎಷ್ಟು ಬೆಳೆ ವಿಮೆ ಹಣ ಜಮೆಯಾಗಲಿದೆ ಎಂಬುದನ್ನು ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪ್ರಸಕ್ತ ಸಾಲಿನ ಅಂದರೆ ಈ ವರ್ಷದ ಮುಂಗಾರು ಹಂಗಾಮಿನ ಬೆಳೆಗಳ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದರೆ ಋತು ಆಯ್ಕೆಯಲ್ಲಿ Kharif ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಮುಂದೆ / Go ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ನಿಮಗೆ ಕಾಣಿಸುತ್ತದೆ. ಅಲ್ಲಿ ನೀವು Premium Calculator ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ Crop wise Premium Calculator ಪೇಜ್ ಕಾಣಿಸುತ್ತದೆ. ಅಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು.
ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಬೆಳೆಗೆ ವಿಮೆ ಮಾಡಿಸಿದ್ದೀರೋ ಆ ಬೆಳೆಯನ್ನು ಆಯ್ಕೆ ಮಾಡಿಕೊಳ್ಳಬೇಕು.
ಇದನ್ನೂ ಓದಿ : Check FID Number ಆಧಾರ್ ನಂಬರ್ ಹಾಕಿ ನಿಮ್ಮ ಎಫ್ಐಡಿ ಇಲ್ಲೇ ಚೆಕ್ ಮಾಡಿ 2024
ಉದಾಹರಣೆಗೆ ನೀವು ತೊಗರಿ ಬೆಳೆಗೆ ಬೆಳೆ ವಿಮೆ ಮಾಡಿಸಿದ್ದರೆ PMFBY Pigion Pea (Red Gram) ನಂತರ ನೀವು ಎಷ್ಟು ಎಕರೆಗೆ ಬೆಳೆ ವಿಮೆ ಮಾಡಿಸಿದ್ದೀರಿ ಅದನ್ನು ಅಲ್ಲಿ ನಮೂದಿಸಬೇಕು. ಗುಂಟೆಯಲ್ಲಿ ಬೆಳೆ ವಿಮೆ ಮಾಡಿಸಿದ್ದರೂ ಅದನ್ನು ನಮೂದಿಸಬೇಕು. ಉದಾಹರಣೆಗೆ 1 ಎಕರೆಗೆ ಬೆಳೆ ವಿಮೆ ಮಾಡಿಸಿದ್ದರೆ ಒಂದು ಎಕರೆ ನಮೂದಿಸಿ ನಂತರ Show Premium ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಯಾವ ಬೆಳಗೆ ಎಷ್ಟು ವಿಮೆ ಹಣ ಜಮೆಯಾಗಲಿದೆ ಎಂಬ ಮಾಹಿತಿಕಾಣಿಸುತ್ತದೆ.
ಒಂದು ಹೆಕ್ಟೇರಿಗೆ ಎಷ್ಟುಬೆಳೆ ವಿಮೆ ಜಮೆಯಾಗಲಿದೆ ಎಂಬ ಮಾಹಿತಿ Sum Insured Rs 48000 per Hectare ಎಂಬ ಮಾಹಿತಿ ಕಾಣಿಸುತ್ತದೆ. ಅದರ ಕೆಳಗಡೆ ನೀವು ನಮೂದಿಸಿದ ಎಕರೆಗೆ ಬೆಳೆ ವಿಮೆ ಮಾಡಿಸಿದ್ದೀರಿ ನಿಮಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಲಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅಂದರೆ Sum Insured ಕೆಳಗಡೆ ಎಷ್ಟು ಹಣ ಜಮೆಯಾಗಲಿದೆ ಎಂಬುದು ಕಾಣಿಸುತ್ತದೆ.