Aadhar seed ಮಾಡಿಸಿದರೆ ಮಾತ್ರ ಬರ ಪರಿಹಾರ ಜಮೆ ನಿಮ್ಮ ಆಧಾರ್ ಸೀಡ್ ಆಗಿದೆಯೇ ಇಲ್ಲೇ ಚೆಕ್ ಮಾಡಿ

Written by Admin

Published on:

Spread the love

Aadhar seed ಬರ ಪರಿಹಾರ  ಹಣ ಜಮೆಯಾಗಲು ರೈತರು ಬ್ಯಾಂಕಿನಲ್ಲಿಆಧಾರ್ ಸೀಡ್ ಮಾಡಿಸಬೇಕು. ಹೌದು, ಆಧಾರ್ ಸೀಡ್ ಆಗದೆ ಇರುವ ರೈತರಿಗೆ ಬರಗಾಲ ಪರಿಹಾರ ಹಣ ಇನ್ನೂ ಜಮೆಯಾಗಿಲ್ಲ. ಹಾಗಾಗಿ ಕೂಡಲೇ ನಿಮ್ಮ ಬ್ಯಾಂಕಿಗೆ ಹೋಗಿ ನಿಮ್ಮ ಅಕೌಂಟಿಗೆ ಆಧಾರ್ ಸೀಡ್ ಮಾಡಿಸಿಕೊಳ್ಳಿ. ನಿಮ್ಮ ಹೆಸರಿಗೆ ಆಧಾರ್ ಸಿಡ್ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Aadhar seed ಆಧಾರ್ ಸೀಡ್ ಆಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?

ಬರಗಾಲ ಪರಿಹಾರಕ್ಕಾಗಿ ಕಾಯುತ್ತಿರುವ ರೈತರು ತಮಗೆ ಬರ ಪರಿಹಾರ ಇನ್ನೂ ಏಕೆ ಜಮೆಯಾಗಿಲ್ಲ ಎಂಬುದನ್ನು ಇಲ್ಲೇ ಚೆಕ್ ಮಾಡಬಹುದು. ಹೌದು, ನೀವು ಆಧಾರ್ ಸ್ಟೇಟಸ್ ಚೆಕ್ ಮಾಡಲು ಈ

https://parihara.karnataka.gov.in/service92/       

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ  ನಿಮಗೆ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಕಾಣಿಸುತ್ತದೆ.

ಅಲ್ಲಿ ನೀವು Select Year / ವರ್ಷ  2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ (ಎಫ್ಐಡಿ) , ಮೊಬೈಲ್ ಸಂಖ್ಯೆ ಹಾಗೂ ಸರ್ವೆ ನಂಬರ್  ಹೀಗೆ ನಾಲ್ಕು ಆಯ್ಕೆಗಳು ಕಾಣಿಸುತ್ತವೆ.

bara parihara helpline check

ಅದರಲ್ಲಿ ನೀವು Survey Number / ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ ನಾಕ್ ನಲ್ಲಿ ಸ್ಟಾರ್ ಹಾಗೂ ಹಿಸ್ಸಾ ನಂಬರ್ ನಲ್ಲಿಯೂ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ  Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ Pahani adhar link status ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಇಲ್ಲೇ ಚೆಕ್ ಮಾಡಿ 2024

ಆಗ ನಿಮಗೆ ನೀವು ನಮೂದಿಸಿದ  ಸರ್ವೆ ನಂಬರಿಗೆ ಬರಗಾಲ ಪರಿಹಾರ ಹಣ ಎಷ್ಟು ಜಮೆಯಾಗಿದೆ. ಯಾವ ಬ್ಯಾಂಕಿಗೆ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಬರ ಪರಿಹಾರ ಯಾವ ಕಾರಣಕ್ಕಾಗಿ ಜಮೆಯಾಗಿಲ್ಲ?

ನಿಮ್ಮ ಬರಗಾಲ ಪರಿಹಾರ ಹಣ ಯಾವ ಕಾರಣಕ್ಕಾಗಿ ಜಮೆಯಾಗಿಲ್ಲ ಎಂಬ ಮಾಹಿತಿ ಸಹ ಕಾಣಿಸುತ್ತದೆ. ಅಲ್ಲಿ ನಿಮಗೆ ಆಧಾರ್ ಸಂಖ್ಯೆ ಕೊನೆಯ ನಾಲ್ಕು ಅಂಕಿಗಳು ಕಾಣಿಸುತ್ತವೆ. ನಿಮ್ಮ ಆಧಾರ್ ಕಾರ್ಡ್ ಕೊನೆಯ ನಾಲ್ಕು ಅಂಕಿಗಳ ಹಿಂದಿರುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು.  ಅಲ್ಲಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ನಂತರ ನಿಮ್ಮ ಸರ್ವೆ ನಂಬರ್ ಕಾಣಿಸುತ್ತದೆ. ನಂತರ ಅಲ್ಲಿ ನೀವು ಯಾವ ಬೆಳೆ ಹಾಕಿದ್ದೀರಿ ಎಂಬುದು ಕಾಣಿಸುತ್ತದೆ. ಸ್ಟೇಟಸ್ ನಲ್ಲಿ Aadhar Not seeded with Bank ತೋರಿಸುತ್ತಿದ್ದರೆ ನೀವು ಕೂಡಲೇ ಬ್ಯಾಂಕಿಗೆ ಹೋಗಬೇಕು.

ಬ್ಯಾಂಕ್ ನಲ್ಲಿ ಆಧಾರ್ ಸೀಡಿಂಗ್ ಅರ್ಜಿ ಪಡೆದುಕೊಳ್ಳಬೇಕು. ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಇಕೆವೈಸಿ ಮಾಡಿಸಬೇಕು. ನಂತರ ಬ್ಯಾಂಕ್ ಸಿಬ್ಬಂದಿ ಆಧಾರ್ ಸೀಡ್ ಮಾಡುತ್ತಾರೆ. ನಂತರ ನಿಮಗೆ ಬರ ಪರಿಹಾರ ಹಣ ಜಮೆಯಾಗಲಿದೆ.

Aadhar seed  ಯಾವ ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ?

ಎನ್.ಡಿ.ಆರ್.ಎಫ್ / ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ (ಗರಿಷ್ಠ ಎರಡು ಹೆಕ್ಟೇರ್ ಗೆ) ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ / ಖುಷ್ಕಿ ಬೆಳೆಗೆ 8500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ 17000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗೂ ಬಹುವಾರ್ಷಿಕ /  ತೋಟಗಾರಿಕೆ ಬೆಳೆಗಳಿಗೆ 22500 ರೂಪಾಯಿವರೆಗೆ ಪರಿಹಾರ ನೀಡಲು ನಿಗದಿಪಡಿಸಲಾಗಿದೆ.

Leave a Comment