Anganawadi job selection list: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹೌದು, ವಿವಿಧ ತಾಲೂಕಿನಲ್ಲಿ ಅರ್ಜಿ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಏನಾದರೂ ಆಕ್ಷೇಪಣೆಗಳಿದ್ದರೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2022-23 ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಖಾಲಿಯಿರುವ 9 ಜನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 144 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮೇಲ್ಕಂಡ ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಅದೇ ರೀತಿ ಬಂದ ಕಡತಗಳನ್ನು ಜಿಲ್ಲಾಮಟ್ಟದ ಆಯ್ಕೆ ಸಮಿತಿಯಲ್ಲಿ ಮಂಡಿಸಿ ಅನುಮೋದನೆ ಪಡೆದ 40 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ 43 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಅಂತಿಮ ಆಯ್ಕೆ ಪಟ್ಟಿ ಮಾಡಲಾಗಿದೆ.
Anganawadi job selection list ಕಲಬುರಗಿ ಗ್ರಾಮೀಣ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಕಲಬುರಗಿ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಖಾಲಿಯಿರುವ 3 ಅಂಗನವಾಡಿ ಕೇಂದ್ರಗಳ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 82 ಆಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಕಲಬರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಆಕ್ಷೇಪಣೆ ಸಲ್ಲಿಸಲು ಇಚ್ಚಿಸುವವರು ಜುಲೈ10 ರ ಸಂಜೆ 5.30 ಗಂಟೆಯೊಳಗಾಗಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆಗೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
Anganawadi job selection list ಕಲಬುರಗಿ ನಗರ ಅಂಗನವಾಡಿ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ
ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆಯಲ್ಲಿ 2022-23ನೇ ಸಾಲಿನಲ್ಲಿ ಖಾಲಿಯಿರುವ 57 ಅಂಗನವಾಡಿ ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಅಭ್ಯರ್ಥಿಗಳು ಸಲ್ಲಿಸಿರುವ ದಾಖಲಾತಿಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿ, ಅಭ್ಯರ್ಥಿಗಳ ತಾತ್ಕಾಲಿಕಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಇದನ್ನೂ ಓದಿ : Bara parihara payment ಇಂದಿನಿಂದ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬರ ಪರಿಹಾರ ಜಮೆ 2024
ಈ ಅಭ್ಯರ್ಥಿಗಳು ತಾತ್ಕಾಲಿಕವಾಗಿ ಆಯ್ಕೆಯಾಗಿರುವುದಕ್ಕೆ ವಿದ್ಯಾರ್ಹತೆ, ವಾಸಸ್ಥಳ, ವಯಸ್ಸು, ಇನ್ನಿತರ ಯಾವುದಾದರೂ ತಕರಾರು ಇದ್ದಲ್ಲಿ ಲಿಖಿತ ರೂಪದಲ್ಲಿ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ಜುಲೈ 2 ರಿಂದ ಜುಲೈ 8 ರೊಳಗಾಗಿ ಕಚೇರಿ ವೇಳೆಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
Anganawadi job selection list ಸೇಡಂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಆಯ್ಕೆ ಪಟ್ಟಿ
2022-23ನೇ ಸಾಲಿನಲ್ಲಿ ಸೇಡಂ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆಗಾಗಿ ಈಗಾಗಲೇ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ1 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ 2 ಜನ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಪ್ರಕಟಿಸಲಾಗಿದೆ.
ಜುಲೈ 4 ರಿಂದ ಜುಲೈ 12 ರ ಸಂಜೆ 5.30 ಗಂಟೆಯೊಳಗೆ ಸೇಡಂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದರ ಆಕ್ಷೇಪಣಗಳನ್ನು ಪರಿಗಣಿಸಲಾಗುವುದಿಲ್ಲ.
ಅದೇ ರೀತಿ ಆಕ್ಷೇಪಣೆ ಬಂದ ಕಡತಗಳನ್ನು ಜಿಲ್ಲಾಮಟ್ಟದ ಆಯ್ಕೆ ಸಮಿತಿಯಲ್ಲಿ ಮಂಡಿಸಿ, ಅನುಮೋದನೆ ಪಡೆದ 2 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 9 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಅಂತಿಮ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.