Annabhaga gruhalakshmi amount status ಅನ್ನಭಾಗ್ಯ ಗೃಹಲಕ್ಷ್ಮೀ ಜಮೆಯ ಸ್ಟೇಟಸ್ ಇಲ್ಲೇ ಚೆಕ್ ಮಾಡಿ 2025

Written by Admin

Published on:

Spread the love

Annabhaga gruhalakshmi amount status : ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು,  ಅನ್ನಭಾಗ್ಯ ಯೋಜನೆಯಡಿ ನೋಂದಣಿ ಮಾಡಿಸಿಕೊಂಡ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗಲಿದೆ. ಅಂದರೆ ಬಿಪಿಎಲ್ ಕಾರ್ಡ್ ಹೊಂದಿದರೆ ಮಾತ್ರ ಸಾಲದು, ಕಳೆದ ಮೂರು ತಿಂಗಳಲ್ಲಿ ಒಮ್ಮೆಯಾದರೂ ಸಹ ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ಪಡೆದಿರಬೇಕು. ಆಗ ಮಾತ್ರ ಅವರು ಅನ್ನಭಾಗ್ಯದ ಯೋಜನೆಯ ಹಣ ಪಡೆಯಲು ಅರ್ಹ ರಾಗಿರುತ್ತಾರೆ.

Annabhaga gruhalakshmi amount status ಅನ್ನಭಾಗ್ಯ  ಜಮೆಯ ಸ್ಟೇಟಸ್

ಕಳೆದ ಮೂರು ತಿಂಗಳಲ್ಲಿ ತಮಗೆ ಅನ್ನಭಾಗ್ಯ ಯೋಜನೆಯಡಿ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://ahara.karnataka.gov.in/Home/EServices

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಇ ಸ್ಥಿತಿ ಮೇಲೆಕ್ಲಿಕ್ ಮಾಡಬೇಕು. ನಂತರ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಯಾವ ವಿಭಾಗದಲ್ಲಿ ಬರುತ್ತೀರೋ ಆ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು. ಉದಾಹರಣೆಗೆ ನೀವ ಕಲಬುರಗಿ ವಿಭಾಗದವರಾಗಿದ್ದರೆ ಕಲಬುರಗಿ ವಿಭಾಗ ಆಯ್ಕೆ ಮಾಡಿಕೊಳ್ಳಬೇಕು.ನಂತರ ನೇರ ನಗದು ವರ್ಗಾವಣೆಯ ಸ್ಥಿತಿ ಮೇಲೆ ಕ್ಲಿಕ್ ಮಾಡಬೇಕು.  ನಂತರ ವರ್ಷ , ತಿಂಗಳು, ನಂತರ  ಆರ್.ಸಿ ನಂಬರ್ ನಮೂದಿಸಬೇಕು. ನಂತರ ಯಾವ ತಿಂಗಳ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ತಿಂಗಳು ಆಯ್ಕೆ ಮಾಡಿಕೊಂಡು ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಿ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Annabhaga gruhalakshmi amount status ಇದನ್ನು ಫಲಾನುಭವಿಗಳು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದೇ ತಿಂಗಳು ಅಕ್ಟೋಬರ್ ತಿಂಗಳ ಅನ್ನಭಾಗ್ಯ ಯೋಜನೆಯ ಹಣವೂ ಜಮೆಯಾಗುವ ಸಾಧ್ಯತೆಯಿದೆ.

Annabhaga gruhalakshmi amount status ಏನಿದು ಗೃಹಲಕ್ಷ್ಮೀ ಯೋಜನೆ?

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯ ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ.

Annabhaga gruhalakshmi amount status ಗೃಹಲಕ್ಷ್ಮೀ ಯೋಜನೆಯಡಿ ಯಾರಿಗೆ ಹಣ ಜಮೆಯಾಗಲಿದೆ?

ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ಈ ಕೆಳಗಿನ ಅರ್ಹತೆ ಪಡೆದವರಿಗೆ ನೀಡಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

ಇದನ್ನೂ ಓದಿ Kisan credit card loan ಈ ರೈತರಿಗೆ ಕಿಸಾನ್ ಕ್ರೇಡಿಟ್ ಕಾರ್ಡ್ ಅಡಿ 5 ಲಕ್ಷ ರೂಪಾಯಿ ಸಾಲ

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರಬೇಕು. ಅರ್ಜಿದಾರರು ಈ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು. ಒಂದು ವೇಳೆ ಇವರು ನೋಂದಣಿ ಮಾಡಿಸಿಕೊಂಡರೂ ಅವರಿಗೆ  ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗುವುದಿಲ್ಲ.

Annabhaga gruhalakshmi amount status ನಿಮ್ಮಅರ್ಜಿಯ ಸ್ಟೇಟಸ್ ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿಕೊಂಡವರು ತಮ್ಮ ಅರ್ಜಿಯ ಸ್ಟೇಟಸ್  ಚೆಕ್ ಮಾಡಲು  ಈ

https://sevasindhugs.karnataka.gov.in/about_kannada.html

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣುವ ಗೃಹಲಕ್ಷ್ಮೀ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ ಮೇಲೆ ಕ್ಲಿಕ್ ಮಾಡಿ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದು. ನಿಮ್ಮ ಅರ್ಜಿ ನಂಬರ್ ನಮೂದಿಸಿ ಸ್ಟೇಟಸ್ ಚೆಕ್ ಮಾಡಬಹುದು.

Leave a Comment