Annabhagya yojaneya status – 2024 ಮೊಬೈಲ್ ನಲ್ಲೇ ಚೆಕ್ ಮಾಡಿ

Written by Admin

Published on:

Spread the love

Annabhagya yojaneya status : ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಐದು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದಾಗಿದೆ.

ಈ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಎಷ್ಟು ಹಣ ಜಮೆಯಾಗಿದೆ? ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಅನ್ನಭಾಗ್ಯ ಯೋಜನೆಯಡಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿದ ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರನುಗುಣವಾಗಿ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆಯೇ? ಒಂದು ವೇಳೆ ಒಂದು ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದರೂ ಕಡಿಮೆ ಸದಸ್ಯರೆಂದು ಹಣ ಜಮೆ ಮಾಡಲಾಗುತ್ತಿದೆಯೇ? ಅಥವಾ ಎಲ್ಲಾ ಅರ್ಹತೆ ಪಡೆದಿದ್ದರೂ ಸಹ ನಿಮಗೆ ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗುತ್ಲಿಲ್ಲವೇ?  ಯಾವ ಕಾರಣಕ್ಕಾಗಿ ಅನ್ನಭಾಗ್ಯ ಯೋಜನೆಯ ಹಣ ತಡೆಹಿಡಿಯಲಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Annabhagya yojaneya status
Annabhagya yojaneya status check in mobile

ಏನಿದು ಅನ್ನಭಾಗ್ಯ ಯೋಜನೆ?

ಆರ್ಥಿಕವಾಗಿ ದುರ್ಬಲರಾಗಿರುವ ಬಿಪಿಎಲ್ ಹಾಗೂ ಅಂತ್ಯೋದಯ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರದ ವತಿಯಿಂದ 5 ಕೆಜಿ ಅಕ್ಕಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ 5 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸುವುದೇ ಅನ್ನಭಾಗ್ಯ ಯೋಜನೆಯಾಗಿದೆ. ದೇಶದಲ್ಲಿ ಯಾರೂ ಹಸಿವೆಯಿಂದ ಮಲಗಬಾರದೆಂಬ ಉದ್ದೇಶದಿಂದ ಈ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

Annabhagya yojaneya status : ಅನ್ನಭಾಗ್ಯ ಯೋಜನೆಯಡಿ ಹಣವನ್ನೇಕೆ ನೀಡಲಾಗುತ್ತಿದೆ?

ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವದಲ್ಲಿ ಒಂದು ವೇಳೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಘೋಷಣೆ ಮಾಡಿತ್ತು. ಕಾಂಗ್ರೆಸ್ ಪಕ್ಷವು ಅದಿಕಾರಕ್ಕೆ ಬಂದ ನಂತರ 10 ಕೆಜಿ ಅಕ್ಕಿ ನೀಡಲಾಗಲಿಲ್ಲ.

ಇದನ್ನೂ ಓದಿBaragala parihara status 2024 ನಿಮಗೆಷ್ಟು ಜಮೆ? ಇಲ್ಲೇ ಚೆಕ್ ಮಾಡಿ

ತಾನು ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಯನ್ನುಈಡೇರಿಸಲು ಅಕ್ಕಿಯ ಬದಲಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲು ನಿರ್ಧರಿಸಿ ಈಗಾಗಲೇ ಪ್ರತಿ ತಿಂಗಳು ಅಕ್ಕಿದ ಬದಲಾಗಿ ಅನ್ನಭಾಗ್ಯ ಯೋಜನೆಯಡಿ ಹಣ ವರ್ಗಾವಣೆ ಮಾಡುತ್ತಿದೆ.

ಅನ್ನಭಾಗ್ಯ ಯೋಜನೆಯಡಿ ಎಷ್ಟು ಹಣ ವಿತರಿಲಾಗುತ್ತಿದೆ?

ಅನ್ನಭಾಗ್ಯ  ಯೋಜನೆಯಡಿಯಲ್ಲಿ ಪ್ರತಿ ಫಲಾನುಭವಿಗಳೆ ಒಂದು ಕೆಜಿಗೆ 34 ರೂಪಾಯಿ ನೀಡಲು ತೀರ್ಮಾನಿಸಿದೆ. ಅಂದರೆ ಕುಟುಂಬದ ಒಬ್ಬ ಸದಸ್ಯನಿಗೆ 5 ಕೆಜಿಯ ಹಣ 170 ರೂಪಾಯಿ ನಾಲ್ಕು ಜನ ಸದಸ್ಯರು ಅಂದರೆ ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ 680 ರೂಪಾಯಿ ಹಣ ನೇರವಾಗಿ ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಐದು ಜನ ಸದಸ್ಯರಿದ್ದರೆ 850 ರೂಪಾಯಿ ಜಮೆ ಮಾಡಲಾಗುವುದು. ಆರು ಜನ ಸದಸ್ಯರಿದ್ದರೆ 1020 ರೂಪಾಯಿಯನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಪ್ರತಿ ತಿಂಗಳು ಜಮೆ ಮಾಡಲಾಗುತ್ತಿದೆ.

Annabhagya yojaneya status:  ಇಲ್ಲಿಯವರೆಗೆ ನಿಮಗೆ ಎಷ್ಟು ಕಂತುಗಳು ಜಮೆಯಾಗಿವೆ?

ಅನ್ನಭಾಗ್ಯ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳು ತಮ್ಮ ಖಾತೆಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನುಚೆಕ್ ಮಾಡಲು ಈ

https://ahara.kar.nic.in/lpg/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪೇಜ್ ಕಾಣಿಸುತ್ತದೆ. ಅಲ್ಲಿ ಕರ್ನಾಟಕದ ವಿಭಾಗವಾರು ಜಿಲ್ಲೆಗಳು ಕಾಣಿಸುತ್ತದೆ. ಅದರಲ್ಲಿ ನಿಮ್ಮ ಜಿಲ್ಲೆಯ ಮೇಲ್ಗಡೆ ಕಾಣುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀಮಗೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ಹೊಸ ಪಡಿತರ ಚೀಟಿ ಸಲ್ಲಿಸಲಾದ ಅರ್ಜಿಯ ಸ್ಥಿತಿ, ಪಡಿತರ ಚೀಟಿ ವಿವರ, ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ, ಪಡಿತರ ನೀರಾಕರಣೆ ನೋಂದಣಿ,  ಹಾಗೂ Sttus of DBT ನೇರ ನಗದು ವರ್ಗಾವಣೆಯ ಸ್ಥಿತಿ (DBT)  ಕಾಣಿಸುತ್ತದೆ. ಆಗ ನೀವು ನೇರ ನಗದು ವರ್ಗಾವಣೆಯ ಸ್ಥಿತಿ ಮೇಲೆ ಕ್ಲಿಕ್ ಮಾಡಬೇಕು.

Annabhagya yojane
Annabhagya yojaneya akki

ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಈಗಾಗಲೇ ವರ್ಷ 2023 ಕಾಣಿಸುತ್ತದೆ.  2024 ಆಯ್ಕೆ ಮಾಡಿಕಂಡು ಕಳೆದೆರಡು ತಿಂಗಳ Annabhagya yojaneya status ಮಾಡಬಹುದು. ತಿಂಗಳು ಮುಂದೆ ಯಾವ ತಿಂಗಳು ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಆ ತಿಂಗಳು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆರ್.ಸಿ ನಂಬರ್ (ರೇಶನ್ ಕಾರ್ಡ್ ನಂಬರ್) ನಮೂದಿಸಬೇಕು. ಇದಾದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿದರೆಸಾಕು. ನಿಮಗೆ ಇಲ್ಲಿಯವರೆಗೆ ಯಾವ ಯಾವ ತಿಂಗಳಲ್ಲಿ ಎಷ್ಟು ಹಣ ಜಮೆಯಾಗಿದೆ  ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ https://ahara.kar.nic.in/ ಲಿಂಕ್ ಮೇಲೆ ಕ್ಲಿಕ್ ಮಾಡಿ ತಿಳಿದುಕೊಳ್ಳಬಹುದು

Leave a Comment