Bara parihara jama ಯಾವ ಸರ್ವೆ ನಂಬರಿಗೆ ಬರ ಪರಿಹಾರ ಜಮೆ? ಹೀಗೆ ಚೆಕ್ ಮಾಡಿ 2024

Written by Admin

Published on:

Spread the love

Bara parihara jama ಬರಗಾಲ ಪರಿಹಾರ ಹಣ ರೈತರಿಗೆ ಯಾವ ಸರ್ವೆ ನಂಬರಿಗೆ ಯಾವ ಬ್ಯಾಂಕಿಗೆ ಜಮೆಯಾಗಿದೆ? ಯಾವಾಗ ಜಮೆಯಾಗಿದೆ? ಜಮೆ ಆಗುವುದನ್ನು ತಡೆಹಿಡಿಯಲಾಗಿದೆ ಎಂಬುದರ ಮಾಹಿತಿಯನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ರೈತರಿಗೆ ಹಂತಹಂತವಾಗಿ ಬರಗಾಲ ಪರಿಹಾರ ಹಣ ಜಮೆ ಮಾಡಲಾಗುತ್ತಿದೆ.ಕೆಲವು ರೈತರಿಗೆ ಮೊದಲ ಕಂತಿನಲ್ಲಿಹಣ ಜಮೆ ಮಾಡಿದ್ದರೆ ಇನ್ನೂ ಕೆಲವರಿಗೆ ಎರಡು ಮೂರನೇ ಕಂತಿನಲ್ಲಿ ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡಲಾಗಿದೆ.

ಬರ ಪರಿಹಾರ ಹಣ ಜಮೆ ಆಗಿರುವುದನ್ನು ಮೊಬೈಲ್ ನಂಬರ್ ಹಾಗೂ ಆಧಾರ್ ಕಾರ್ಡ್ ನಂಬರ್ ಮೂಲಕ ಚೆಕ್ ಮಾಡುವಂತೆ ಈಗ ಸರ್ವೆ ನಂಬರ್ ಹಾಕಿಯೂ ಬರ ಪರಿಹಾರ ಹಣ ಜಮೆಯಾಗಿರುವುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Bara parihara jama ಸರ್ವೆ ನಂಬರ್ ಹಾಕಿ ಬರ ಪರಿಹಾರ ಚೆಕ್ ಮಾಡಿ

ಬರ ಪರಿಹಾರ ಹಣ ಯಾವ ಯಾವ ರೈತರಿಗೆ ಯಾವ ಸರ್ವೆ ನಂಬರಿಗೆ  ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/service92/       

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ  ನಿಮಗೆ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಕಾಣಿಸುತ್ತದೆ.

ಅಲ್ಲಿ ನೀವು Select Year / ವರ್ಷ  2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.

belehani parihara status

ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಸರ್ವೆ ನಂಬರ್  ಹೀಗೆ ನಾಲ್ಕು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು.

Bara parihara jama ಯಾವ ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ?

ರೈತರ ಎಲ್ಲಾ ಬೆಳೆಗೆ ಒಂದೇ ರೀತಿ ಬರಗಾಲ ಪರಿಹಾರ ಹಣ ಜಮೆಯಾಗುವುದಿಲ್ಲ. ಹೌದು, ಎನ್.ಡಿ.ಆರ್.ಎಫ್ / ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ (ಗರಿಷ್ಠ ಎರಡು ಹೆಕ್ಟೇರ್ ಗೆ) ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ / ಖುಷ್ಕಿ ಬೆಳೆಗೆ 8500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ 17000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗೂ ಬಹುವಾರ್ಷಿಕ /  ತೋಟಗಾರಿಕೆ ಬೆಳೆಗಳಿಗೆ 22500 ರೂಪಾಯಿವರೆಗೆ ಪರಿಹಾರ ನೀಡಲು ನಿಗದಿಪಡಿಸಲಾಗಿದೆ.

Bara parihara jama ಸರ್ವೆ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ 

ಬರ ಪರಿಹಾರ ಹಣ ಯಾವ ಸರ್ವೆ ನಂಬರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು.

ಇದನ್ನೂ ಓದಿ : farmers FID ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ ಎಫ್ಐಡಿ ಚೆಕ್ ಮಾಡಿ 2024

ನಂತರ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ ನಾಕ್ ನಲ್ಲಿ ಸ್ಟಾರ್ ಹಾಗೂ ಹಿಸ್ಸಾ ನಂಬರ್ ನಲ್ಲಿಯೂ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ  Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನೀವು ನಮೂದಿಸಿದ  ಸರ್ವೆ ನಂಬರಿಗೆ ಬರಗಾಲ ಪರಿಹಾರ ಹಣ ಎಷ್ಟು ಜಮೆಯಾಗಿದೆ. ಯಾವ ಬ್ಯಾಂಕಿಗೆ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಒಂದು ವೇಳೆ ನಿಮಗೆ ನೀವು ನಮೂದಿಸಿದ ಸರ್ವೆ ನಂಬರಿಗೆ ಹಣ ಜಮೆಯಾಗಿಲ್ಲವಾದರೆ Data not found ಎಂದು ಕಾಣಿಸುತ್ತದೆ.

Leave a Comment