Bara parihara payment ಇಂದಿನಿಂದ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬರ ಪರಿಹಾರ ಜಮೆ 2024

Written by Admin

Published on:

Spread the love

Bara parihara payment : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ  ಇಂದಿನಿಂದ ಬರಗಾಲ ಪರಿಹಾರ ಹಣ ಜಮೆ ಮಾಡಲಾಗುತ್ತಿದೆ. ಹೌದು, ಈ  ಕುರಿತು ಕಳೆದ ವಾರದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡರವರು ಒಂದು ವಾರದೊಳಗೆ ಎಲ್ಲಾರೈತರ ಖಾತೆಗೆ 3 ಸಾವಿರ ರೂಪಾಯಿ ಬರ ಪರಿಹಾರಹಣ ಜಮೆಯಾಗಲಿದೆ ಎಂದು ಹೇಳಿಕೆ ನೀಡಿದ್ದರು.

ಈ ಕುರಿತು ಅವರು  ಕಲಬುರಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ, ಕಳೆದ ವರ್ಷ ಸಂಭವಿಸಿದ ಬರಗಾಲದಿಂದ ರೈತರು ಸಂಕಷ್ಟಕ್ಕೊಳಗಾಗಿದ್ದರು. ಆರ್ಥಿಕವಾಗಿ ದುರ್ಬಲಗೊಂಡ ರೈತರಿಗೆ ಸಹಾಯ ಮಾಡಲು ಹಾಗೂ ರೈತ ಸಮುದಾಯದ ರಕ್ಷಣೆಗೆ ಸರ್ಕಾರ ಮುಂದಾಗಿದೆ ಎಂದರು.

ರೈತರ ಜೀವನೋಪಾಯಕ್ಕಾಗಿ ಸುಮಾರು 18 ಲಕ್ಷ ರೈತರಗೆ ತಲಾ 3000 ರೂಪಾಯಿಯಂತೆ ಒಟ್ಟು 500 ಕೋಟಿ ರೂಪಾಯಿ ಪರಿಹಾರ ವಿತರಣೆ ಮಾಡಲಾಗುವುದು. ಮುಂದಿನ ಒಂದು ವಾರದಲ್ಲಿ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ ಎಂದು ಹೇಳಿಕೆ ನೀಡಿದ್ದರು. ಹಾಗಾಗಿ ಇಂದಿನಿಂದ ರೈತರ ಖಾತೆಗೆ ಬರ ಪರಿಹಾರ ಹಣ ಜಮೆಯಾಗುತ್ತಿದೆ.

Bara parihara payment ನಿಮ್ಮ ಖಾತೆಗೆ ಬರ ಪರಿಹಾರ ಎಷ್ಟು ಜಮೆಯಾಗಿದೆ ಇಲ್ಲೇ ಚೆಕ್ ಮಾಡಿ

ಸಣ್ಣ ಮತ್ತು ಅತೀ ಸಣ್ಣ ರೈತರ ಖಾತೆಗೆ 3 ಸಾವಿರ ರೂಪಾಯಿ ಜಮೆ ಮಾಡಲಾಗುವ ಹಣ ಯಾವ ಯಾವ ರೈತರ ಖಾತೆಗೆ ಜಮೆಯಾಗಿದೆ ಎಂಬುದನ್ನು ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

belehani parihara status

ಕೆಲವು ರೈತರಿಗೆ ಮೊದಲ ಕಂತಿನಲ್ಲಿ ಹಣ ಜಮೆ ಮಾಡಲಾಗಿತ್ತು. ಇನ್ನೂ ಬರ ಪರಿಹಾರ ಹಣ ಪಡೆಯಲು ಎಲ್ಲಾ ಅರ್ಹತೆ ಹೊಂದಿದ್ದರೂ ಸಹ ಕೆಲವು ರೈತರಿಗೆ ಹಣ ಜಮೆಯಾಗಿರಲಿಲ್ಲ. ಅಂತಹ ಎಲ್ಲಾ ರೈತರಿಗೆ ಈ ವಾರದಲ್ಲಿ ಬರ ಪರಿಹಾರ ಹಣ ಜಮೆಯಾಗುತ್ತಿದೆ.

Bara parihara payment ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಬರ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/service92/       

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ  ನಿಮಗೆ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ.

ಅಲ್ಲಿ ನೀವು Select Year / ವರ್ಷ  2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ, ಮೊಬೈಲ್ ಸಂಖ್ಯೆಹಾಗೂ ಸರ್ವೆ ನಂಬರ್ ಈ ನಾಲ್ಕರಲ್ಲಿ ಯಾವುದಾದರೊಂದು ಒಂದನ್ನು ಆಯ್ಕೆಮಾಡಿಕೊಳ್ಳಬೇಕು.

ಇದನ್ನೂ ಓದಿ Pm kisan 18th installment list ಪಿಎಂ ಕಿಸಾನ್ 18 ನೇ ಕಂತಿನ ರೈತರ ಪಟ್ಟಿ ಬಿಡುಗಡೆ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಆಧಾರ್ ನಂಬರ್ ಹಾಕಿ ಬರಗಾಲ ಪರಿಹಾರ ಸ್ಸೇಟಸ್ ಚೆಕ್ ಮಾಡಲು ನೀವು ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ನಂತರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಆಧಾರ್ ಕಾರ್ಡ್ ಕೊನೆಯ ಸಂಖ್ಯೆ,ನಿಮ್ಮ ಹೆಸರು ನಿಮ್ಮಎಫ್ಐಡಿ ಕಾಣಿಸುತ್ತದೆ. ಅಲ್ಲಿ ಕಾಣುವ ಸರ್ಕಲ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮಗೆ ಯಾವ ಬ್ಯಾಂಕಿನಲ್ಲಿ ಯಾವ ಸರ್ವೆ ನಂಬರಿಗೆ ಹಾಗೂ ಯಾರು ಯಾರಿಗೆ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸಲಿದೆ.

Bara parihara payment ಕೇಂದ್ರ ಸರ್ಕಾರ ಎಷ್ಟು ಬರ ಪರಿಹಾರ ನೀಡಿದೆ ?

ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್ ಹಣ ಬಿಡುಗಡೆಯಲ್ಲಿ ವಿಳಂಬ ಧೋರಣೆ ಅನುಸರಿಸಿದ ಕಾರಣ ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್  ಕದ ತಟ್ಟಿದ ಕಾರಣ ಕೇಂದ್ರ ಹಣ ಬಿಡುಗಡೆ ಮಾಡಿತು. ಅದು ಹಣ ಸಹ ರೈತರಿಗೆ ನೀಡಲಾಗಿದೆ. ಇನ್ನೂ ಬೆಳೆ ವಿಮೆ ಅಡಿ 1756 ಕೋಟಿ ರೂಪಾಯಿ ಪರಿಹಾರ ರೈತರ ಖಾತೆಗೆ ಹಣ ನೀಡಲಾಗಿದೆ. ಒಟ್ಟಾರೆ ಬರಗಾಲ ಕಾರಣ ಎಸ್.ಡಿ.ಆರ್.ಎಫ್ ಎನ್.ಡಿ.ಆರ್.ಎಫ್ ಹಣ, ಬೆಳೆ ವಿಮೆ, ಪ್ರಕೃತಿ ವಿಕೋಪ ಪರಿಹಾರ ಹೀಗೆ ಸುಮಾರು 6000 ಕೋಟಿ ರೂಪಾಯಿ ಪರಿಹಾರ ಹಣವನ್ನು ರೈತರ ಖಾತೆಗೆ ಡಿಬಿಟಿ ಮೂಲಕ ನೀಡಲಾಗಿದೆ.

Leave a Comment