Bara parihara status 2024 : ಬರ ಪರಿಹಾರ ಹಣ ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಲಿದೆ? ಸದ್ಯ ಎಷ್ಟು ಪರಿಹಾರ ರೈತರ ಖಾತೆಗೆ ಜಮೆ ಮಾಡಲಾಗಿದೆ. ಮುಂದೆ ಯಾವ ಯಾವ ಬೆಳೆಗೆ ಎಷ್ಟು ಪರಿಹಾರ ನೀಡಲಾಗುವುದು ಇಲ್ಲಿದೆ ಮಾಹಿತಿ.
ತಮಗೆಲ್ಲಾ ಗೊತ್ತಿದ್ದ ಹಾಗೆ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ 200 ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪರಿಹಾರ ಘೋಷಣೆ ಮಾಡಲಾಗಿದೆ. ಬರಗಾಲ ಘೋಷಣೆ ಮಾಡಿದ ನಂತರ ಎಫ್ಐಡಿ ಇರುವ ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡಲಾಗಿದೆ.
Bara parihara status 2024 ಯಾವ ಬೆಳೆಗೆ ಎಷ್ಟು ಪರಿಹಾರ ನೀಡಲಾಗುವುದು?
ಎಸ್.ಡಿಆರ್.ಎಫ್ ಮಾರ್ಗಸೂಚಿಯ ಪ್ರಕಾರ ಶೇ. 33 ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿರುವ ರೈತರಿಗೆ ಪ್ರತಿ ಹೆಕ್ಟೇರಿಗೆ 8500 ರೂಪಾಯಿ ಹಾಗೂ ನೀರಾವರಿ ಪ್ರದೇಶಕ್ಕೆ ಹೆಕ್ಟೇರಿಗೆ 17 ಸಾವಿರ ನೀಡಲಾಗುವುದು. ಆದರೆ ಸದ್ಯ ಪ್ರತಿ ರೈತರಿಗೆ ತಲಾ 2 ಸಾವಿರ ರೂಪಾಯಿಯಂತೆ ತಾತ್ಕಾಲಿಕ ಪರಿಹಾರ ಹಣ ಜಮೆ ಮಾಡಲಾಗಿದೆ.
Bara parihara status 2024 ನಿಮಗೆಷ್ಟು ಬರ ಪರಿಹಾರ ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಬರ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಬರ ಪರಿಹಾರ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಸ್ಟೇಟಸ್ ಚೆಕ್ ಮಾಡಲು ಎರಡು ಆಯ್ಕೆಗಳು ಕಾಣಿಸುತ್ತವೆ. ಹೌದು, ಪರಿಹಾರ ನಮೂದು ಸಂಖ್ಯೆ ಹಾಗೂ ಆಧಾರ್ ಸಂಖ್ಯೆ ಇವೆರಡು ಆಯ್ಕೆಗಳ ಮೂಲಕ ಸ್ಟೇಟಸ್ ಚೆಕ್ ಮಾಡಬಹುದು.
Bara parihara status 2024 ಆಧಾರ್ ಸಂಖ್ಯೆ ನಮೂದಿಸಿ ಸ್ಟೇಟಸ್ ಚೆಕ್ ಮಾಡಿ
ನೀವು ಆಧಾರ್ ಸಂಖ್ಯೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ Select calamity type ನಲ್ಲಿ Drought (ಬರಗಾಲ) ಆಯ್ಕೆ ಮಾಡಿಕೊಳ್ಳಬೇಕು. Select Year Type ನಲ್ಲಿ2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಇದಾದನಂತರ ವಿವರಗಳ್ನು ಪಡೆಯಲು / Fetch Details ಮೇಲೆ ಕ್ಲಿಕರ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕ್ರಮ ಸಂಖ್ಯೆ, ಜಿಲ್ಲೆಯ ಹೆಸರು, ಬ್ಯಾಂಕಿನ ಹೆಸರು, ಮೊತ್ತ, ಖಾತೆದಾರರ ಹೆಸರು, ಬ್ಯಾಂಕ್ ಅಕೌಂಟ್ ನಂಬರ್, ಹಣ ಸಂದಾಯ ಸ್ಥಿತಿ, ಸಂದಾಯ ದಿನಾಂಕ ಕಾಣಿಸುತ್ತದೆ.
ಅದರ ಕೆಳಗಡೆ ಆಧಾರ್ ನಂಬರ್, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಬೆಳೆಯ ಹೆಸರು, ಬೆಳೆಯ ವಿಧ ಹಾಗೂ ಎಷ್ಟು ಎಕರೆಗೆ ಜಮೆ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ.
ಇದನ್ನೂ ಓದಿ : PM kisan farmers ಪಿಎಂ ಕಿಸಾನ್ 18ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಿ 2024
ರೈತರು ಬರಗಾಲ ಪರಿಹಾರ ಸ್ಟೇಟಸ್ ನೊಂದಿಗೆ ಕಳೆದ ವರ್ಷ ಅಂದರೆ 2022-23 ಹಾಗೂ 2021-22 ನೇ ಸಾಲಿನಲ್ಲಿ ತಮಗೆ ಬೆಳೆ ಹಾನಿ ಪರಿಹಾರ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಸಹ ಚೆಕ್ ಮಾಡಬಹುದು. ಸ್ಟೇಟಸ್ ಪೇಜ್ ನಲ್ಲಿDrought ಬದಲು Flood ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ವರ್ಷ ಆಯ್ಕೆ ಮಾಡಿಕೊಂಡು ಸ್ಟೇಟಸ್ ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಹಿಂದಿನ ಸಾಲಿನ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬಹುದು. ಇನ್ನೇಕೆ ತಡ ಒಮ್ಮೆ ನಿಮ್ಮಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿ. ನಿಮ್ಮ ಯಾವ ಬ್ಯಾಂಕ್ ಖಾತೆಗೆ ಯಾವಾಗಯಾವ ಬೆಳೆಗೆ ಬರ ಪರಿಹಾರ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.