baragala money ಬರಗಾಲ ಪರಿಹಾರ ಹಣ ರೈತರಿಗೆ ಯಾವ ಬ್ಯಾಂಕಿಗೆ ಯಾವ ಬೆಳೆಗೆ ಯಾವ ದಿನಾಂಕದಂದು ಎಷ್ಟು ಜಮೆಯಾಗಿದೆ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
baragala money ನಿಮಗೆಷ್ಟು ಬರ ಪರಿಹಾರ ಹಣ ಜಮೆ?
ನಿಮ್ಮ ಖಾತೆಗೆ ಬರ ಪರಿಹಾರ ಹಣ ಎಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/service92/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ.
ಅಲ್ಲಿ ನೀವು Select Year / ವರ್ಷ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.
ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ, ಮೊಬೈಲ್ ಸಂಖ್ಯೆಹಾಗೂ ಸರ್ವೆ ನಂಬರ್ ಈ ನಾಲ್ಕರಲ್ಲಿ ಯಾವುದಾದರೊಂದು ಒಂದನ್ನು ಆಯ್ಕೆಮಾಡಿಕೊಳ್ಳಬೇಕು.
baragala money ಸರ್ವೆ ನಂಬರ್ ಆಯ್ಕೆ ಮಾಡಿ
ನೀವು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.ಇದಾದ ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಗ್ರಾಮ ಆಯ್ಕೆಮಾಡಿಕೊಳ್ಳಬೇಕು. ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹಿಸ್ಸಾ ನಂಬರ್ ನಲ್ಲಿಯೂ ಸಹ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು.
ಇದಾದ ನಂತರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮಾಲಿಕರ ಹೆಸರಿಗಿರುವ ಕೊನೆಯ ನಾಲ್ಕು ಅಂಕಿಗಳು ಕಾಣಿಸುತ್ತವೆ. ಅದರ ಹಿಂದಿರುವ ಬಾಕ್ಸ್ಆಯ್ಕೆ ಮಾಡಿಕೊಂಡ ನಂತರ ನಿಮಗೆ ಮಾಲಿಕರ ಹೆಸರು ಕಾಣಿಸುತ್ತದೆ. ಆ ಮಾಲಿಕರಿಗೆ ಯಾವ ಬ್ಯಾಂಕಿನಲ್ಲಿ ಯಾವಾಗ ಬರ ಪರಿಹಾರ ಹಣ ಜಮೆಯಾಗಿದೆ ಎಂಬುದು ಕಾಣಿಸುತ್ತದೆ.
baragala money ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ?
ಎನ್.ಡಿ.ಆರ್.ಎಫ್ / ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ (ಗರಿಷ್ಠ ಎರಡು ಹೆಕ್ಟೇರ್ ಗೆ) ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ / ಖುಷ್ಕಿ ಬೆಳೆಗೆ 8500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ 17000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗೂ ಬಹುವಾರ್ಷಿಕ / ತೋಟಗಾರಿಕೆ ಬೆಳೆಗಳಿಗೆ 22500 ರೂಪಾಯಿವರೆಗೆ ಪರಿಹಾರ ನೀಡಲು ನಿಗದಿಪಡಿಸಲಾಗಿದೆ.
ಬೆಳೆಹಾನಿ ಪರಿಹಾರ ಕುರಿತು ಸಮಸ್ಯೆಗೆ ಸಹಾಯವಾಣಿ ಆರಂಭ
ಬೆಳೆ ಹಾನಿ ಕುರಿತು ಬಿಡುಗಡೆಯಾದ ಪರಿಹಾರದ ಅನುದಾನ ರೈತರ ಖಾತೆಗೆ ಜಮಾಆದ ಬಗ್ಗೆ ಪರಿಶೀಲಿಸುವ ಕುರಿತು ಹಾಗೂ ಅನುದಾನ ಜಮಾ ಆಗದೆ ಇರುವ ತಾಂತ್ರಿಕ ತೊಂದರೆಗಳನ್ನು ಹಾಗೂ ಬ್ಯಾಂಕ್ ಖಾತೆಯ ಕೆಲವೊಂದು ನ್ಯೂನತೆಗಳನ್ನು ಪರಿಹರಿಸುವ ಬಗ್ಗೆ ಜಿಲ್ಲೆಯ ಬರಪೀಡಿತ 11 ತಾಲೂಕುಗಳಲ್ಲಿಯ ತಹಶೀಲ್ದಾರ್ ಕಚೇರಿಗಳಲ್ಲಿ ರೈತರ ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಕಾರವಾರ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ತಿಳಿಸಿದ್ದಾರೆ.
ಇದನ್ನೂ ಓದಿ : Village map ಈ ಮ್ಯಾಪ್ ನಲ್ಲಿ ಜಮೀನಿಗೆ ಹೋಗುವ, ಬಂಡಿದಾರಿ, ಕಾಲುದಾರಿ ಚೆಕ್ ಮಾಡಿ 2024
ಕಾರವಾರ 08382 223350, ಅಂಕೋಲಾ 08388 230243, ಕುಮಟಾ 08386 222054, ಭಟ್ಕಳ 08385 226422, ಶಿರಸಿ 08384 226383, ಸಿದ್ದಾಪುರ 08389 230127, ಯಲ್ಲಾಪೂರ 9902571927, ಮುಂಡಗೋಡ 08301 222122, ಹಳಿಯಾಳ 08282 220134, ಜೋಯಿಡಾ 08284 282723, ದಾಂಡೇಲಿ 08284 295959 ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
baragala money ಬರ ಹಿನ್ನೆಲೆಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆ
ತುಮಕೂರು ಜಿಲ್ಲೆಯ ತಿಪಟೂರು ತಾಲೂಕನ್ನು ತೀವ್ರ ಬರ ಪೀಡಿತ ತಾಲೂಕು ಎಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬೆಳೆ ಪರಿಹಾರ ಪಾವತಿ, ಮೇವು ಲಭ್ಯತೆ ಹಾಗೂ ಇತರೆ ವಿಷಯಗಳಿಗೆ ಸಂಬಂಧ ತೊಂದರೆಯಾಗುವ ಸಾಧ್ಯತೆ ಇದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಲಾಗಿದೆ.
ಸದರಿ ಕಂಟ್ರೋಲ್ ರಂನ ದೂರವಾಣಿ ಸಂಖ್ಯೆ 08134 251039 ಆಗಿರುತ್ತದೆ. ತಾಲೂಕಿನಾದ್ಯಂತ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಅನಾಹುತಗಳು ಸಂಭವಿಸಿದಲ್ಲಿ ಸಾರ್ವಜನಿಕರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದು ಎಂದು ತಹಶೀಲ್ದಾರ್ ಪವನ ಕುಮಾರ ತಿಳಿಸಿದ್ದಾರೆ.