Baragala parihara farmers list : ಬರಗಾಲ ಪರಿಹಾರ ಹಣ ಇನ್ನೂ ಮುಂದೆ ಯಾವ ಯಾವ ರೈತರಿಗೆ ಜಮೆಯಾಗಲಿದೆ ಎಂಬುದನ್ನು ರೈತರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಬರಗಾಲ ಪರಿಹಾರ ಯಾವ ಯಾವ ರೈತರಿಗೆ ಜಮಯಾಗಲಿದೆ ಎಂಬ ರೈತರ ಪಟ್ಟಿ ಈಗ ಬಿಡುಗಡೆಯಾಗಿದೆ. ಹಾಗಾಗಿ ರೈತರು ಮನೆಯಲ್ಲಿಯೇ ಕುಳಿತು ಯಾರ ಸಹಾಯವೂ ಇಲ್ಲದೆ, ಯಾರಿಗೂ ಕರೆ ಮಾಡದೆ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
Baragala parihara farmers list ಬರಗಾಲ ಪರಿಹಾರ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ
ರೈತರು ಈಗ ಬರಗಾಲ ಪರಿಹಾರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/service89/PaymentDetailsReport.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು Select Year / ವರ್ಷ ಆಯ್ಕೆ ಯಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. Select Season / ಋತು ಆಯ್ಕೆ ಯಲ್ಲಿ Kharif / ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ನಂತರ Calamity Type / ವಿಪತ್ತಿನ ವಿಧ ದಲ್ಲಿ DROUGHT / ಬರ ಆಯ್ಕೆ ಮಾಡಿಕೊಳ್ಳಬೇಕು.
ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿಯಾವ ಯಾವ ರೈತರಿಗೆ ಬರಗಾಲ ಪರಿಹಾರ ಹಣ ಜಮೆಯಾಗಿದೆ ಎಂಬ ಪಟ್ಟಿ ತೆರೆದುಕೊಳ್ಳುತ್ತದೆ.
ಇದನ್ನೂ ಓದಿ : Pm kisan 18th installment list ಪಿಎಂ ಕಿಸಾನ್ 18 ನೇ ಕಂತಿನ ರೈತರ ಪಟ್ಟಿ ಬಿಡುಗಡೆ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ
ಪಟ್ಟಿಯಲ್ಲಿ ನಿಮ್ಮಆಧಾರ್ ಕಾರ್ಡ್ ಸಂಖ್ಯೆಯ ಕೊನೆಯ ನಾಲ್ಕು ಅಂಕಿಗಳು, ಫಲಾನುಭವಿಯ ಹೆಸರು, ಸರ್ವೆ ನಂಬರ್, ರೈತರ ಬೆಳೆ, ಬೆಳೆ ಯಾವ ವಿಧವಾಗಿದೆ. ಬೆಳೆ ಹಾನಿಯಾದ ಪ್ರದೇಶ, ಹಣ ನಿಮಗೆ ಸಕ್ಸೆಸ್ಫುಲಿ ಜಮೆಯಾಗಿದೆಯೋ ಇಲ್ಲವೋ ಇದರೊಂದಿಗೆ ಯಾವ ದಿನಾಂಕದಂದು ನಿಮಗೆ ಹಣ ಜಮೆಯಾಗಿದೆ ಹಾಗೂ ಎಷ್ಟು ಕಂತುಗಳು ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
Baragala parihara farmers list ಬರಗಾಲ ಪರಿಹಾರ ಜಮೆಯಾಗದಿದ್ದರೆ ರೈತರೇನು ಮಾಡಬೇಕು?
ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗದರು ನಿಮ್ಮ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಸಂಪರ್ಕಿಸಬೇಕು. ಏಕೆಂದರೆ ಗ್ರಾಮ ಪಂಚಾಯತ್ ಬರ ಪರಿಹಾರಕ್ಕೆ ರೈತರ ಹೆಸರುಗಳ ಪಟ್ಟಿಯನ್ನು ಕಳಿಸುತ್ತದೆ. ಗ್ರಾಮ ಪಂಚಾಯತ್ ಕಳಿಸಿದ ರೈತರ ಹೆಸರಿಗೆ ಮಾತ್ರ ಬರ ಪರಿಹಾರ ಹಣ ಜಮೆಯಾಗಲಿದೆ.
Baragala parihara farmers list ಯಾವ ಬೆಳೆಗೆ ಎಷ್ಟು ಪರಿಹಾರ ಹಣ ರೈತರಿಗೆ ಜಮೆಯಾಗಲಿದೆ?
ಕೇಂದ್ರ ಸರ್ಕಾರದ ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ (ಎನ್.ಡಿ.ಆರ್.ಎಫ್) ಮಾರ್ಗಸೂಚಿ ಪ್ರಕಾರ ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರಿಗೆ 8500 ರೂಪಾಯಿ ನೀಡಲಾಗುವುದು. ನೀರಾವರಿ ಬೆಳೆಗೆ 17000 ರೂಪಾಯಿ ಪರಿಹಾರ ನೀಡಲಾಗುವುದು. ಅದೇ ರೀತಿ ಬಹುವಾರ್ಷಿಕ ಬೆಳೆಗೆ 22500 ರೂಪಾಯಿ ಪರಿಹಾರ ನೀಡಲು ನಿಗದಿ ಮಾಡಲಾಗಿದೆ. ಹಾಗಾಗಿ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.