Baragala parihara released 41 ಕೋಟಿ ಬರ ಪರಿಹಾರ ಬಿಡುಗಡೆ: ನಿಮಗೆ ಜಮೆಯಾಗಿಲ್ಲವೇ? ಈ ನಂಬರಿಗೆ ಕರೆ ಮಾಡಿ

Written by Admin

Updated on:

Spread the love

Baragala parihara released : ಬರಗಾಲದಿಂದ ತತ್ತರಿಸಿದ ರೈತರಿಗೆ ಪರಿಹಾರದ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ.

ಹೌದು, ಯಾವ ರೈತರಿಗೆ ಬರ ಪರಿಹಾರ ಹಣ ಜಮೆಯಾಗಿಲ್ಲವೋ ಅಂತಹ ರೈತರಿಗೆ ಈಗ ಬರಗಾಲ ಪರಿಹಾರ ಹಣ ಜಮೆಯಾಗುತ್ತಿದೆ. ಒಂದು ವೇಳೆ ಇನ್ನೂ ಬರ ಪರಿಹಾರ ಹಣ ಜಮೆಯಾಗದಿದ್ದರೆ ನೀವು ಕೆಳಗೆ ನೀಡಲಾಗ ಸಹಾಯವಾಣಿ ನಂಬರ್ ಗಳಿಗೆ ಕರೆ ಮಾಡಬಹುದು. ಸಹಾಯವಾಣಿ ನಂಬರ್ ಗಳು ಯಾವುವು ಹಾಗೂ ನಿಮಗೆ ಬರ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬ ಸ್ಟೇಟಸನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Baragala parihara released

ನಿನ್ನೆ ವಿಜಯಪುರ ಜಿಲ್ಲೆಯ ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡಲಾಗಿತ್ತು. ಈಗ ಬಳ್ಳಾರಿ ಜಿಲ್ಲೆಯ ರೈತರ ಖಾತೆಗೂ ಬರ ಪರಿಹಾರ ಹಣ ಜಮೆ ಮಾಡಲಾಗಿದೆ. ಬಳ್ಳಾರಿ  ಜಿಲ್ಲೆಯ 36944 ರೈತರ ಖಾತೆಗೆ ಎರಡು ಹಂತಗಳಲ್ಲಿ ಡಿಬಿಟಿಮೂಲಕ 31.40 ಕೋಟಿ ರೂಪಾಯಿ ಬರ ಪರಿಹಾರ ಹಣ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Baragala parihara released ಎಷ್ಟು ಕಂತುಗಳಲ್ಲಿ ರೈತರ ಖಾತೆಗೆ ಬರ ಪರಿಹಾರ ಜಮೆ ಮಾಡಲಾಗಿದೆ?

2023-24ನೇ ಸಾಲಿನ ಮುಂಗಾರಿನಲ್ಲಿ ಬಳ್ಳಾರಿ ಜಿಲ್ಲೆಯ 5 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು.ಮುಂಗಾರು ಹಂಗಾಮಿನಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇರೆಗೆ ಫ್ರೂಟ್ಸ್ ಐಡಿ ಹೊಂದಿರುವ ಪಹಣಿ ಜೋಡಣೆಯಾಗಿರುವ ರೈತರಿಗೆ ಡಿಬಿಟಿಮೂಲಕ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಈಗಾಗಲೇ 9 ಕಂತುಗಳ ಪೈಕಿ ಮೊದಲ ಕಂತಾಗಿ ಗರಿಷ್ಠ 2 ಸಾವಿರ ರೂಪಾಯಿಯವರೆಗೆ ಒಟ್ಟು 36944 ರೈತರಿಗೆ 7.26 ಕೋಟಿ ಪರಿಹಾರ ಬೆಳೆ ಹಾನಿ ಪರಿಹಾರ ವಿತರಿಸಲಾಗಿದೆ.

ಎರಡನೇ ಹಂತದಲ್ಲಿ ಜಿಲ್ಲೆಯ ಅರ್ಹ 31351 ರೈತರಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ 34.03 ಕೋಟಿ ಪರಿಹಾರವನ್ನು (ಇನ್ಪುಟ್ ಸಬ್ಸಿಡಿ) ವಿತರಣೆ ಮಾಡಲು ಅನುಮೋದನೆ ನೀಡಿ, ಡಿಬಿಟಿ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯ 2 ಹಂತದಲ್ಲಿ ಒಟ್ಟು 36944 ರೈತರಿಗೆ 41.30 ಕೋಟಿಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ.

ಇದನ್ನೂ ಓದಿ Village map ಈ ಮ್ಯಾಪ್ ನಲ್ಲಿ ಜಮೀನಿಗೆ ಹೋಗುವ, ಬಂಡಿದಾರಿ, ಕಾಲುದಾರಿ ಚೆಕ್ ಮಾಡಿ 2024

ಬೆಳೆ ಹಾನಿ ಪರಿಹಾರ ಹಣ ಖಾತೆಗೆ ಜಮಾ ಆಗದೆ ಇರುವ ಬಗ್ಗೆ ದೂರುಗಳನ್ನು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಮತ್ತು ತಾಲೂಬಕುವಾರು ಸಹಾಯವಾಣಿ ತೆರೆಯಲಾಗಿದೆ.

ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು  ಎಂದು ಜಿಲ್ಲಾಧಿಕಾರಿ ಮಿಶ್ರಾ ಹೇಳಿದ್ದಾರೆ.

Baragala parihara released ನಿಮಗೆ ಬರ ಪರಿಹಾರ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ

ಬರ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/service92/       

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ನೀವು  ವರ್ಷ 2023-24 ಆಯ್ಕೆ ಮಾಡಿಕೊಳ್ಳಬೇಕು.  ಋತು  ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ವಿಪತ್ತು ಬರ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹುಡುಕು ಮೇಲೆ ಕ್ಲಿಕ್ ಮಾಡಬೇಕು.  ನಂತರ ನೀವು

ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ಸರ್ ನಾಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ಹಿಸ್ಸಾ ನಂಬರ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಪಡೆಯಿರಿ ಮೇಲೆ ಕ್ಲಿಕ್ ಮಾಡಿ ಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Baragala parihara released ಜಿಲ್ಲಾ ತಾಲೂಕುವಾರು ಸಹಾಯವಾಣಿ ನಂಬರ್ ಗಳು

ಜಿಲ್ಲಾದಿಕಾರಿಗಳ ಕಾರ್ಯಾಲಯದ ದೂರವಾಣಿ ಸಂಖ್ಯೆ 1077 ಅಥವಾ 08392277100, ಬಳ್ಳಾರಿ ತಾಲೂಕು ತಹಶೀಲ್ದಾರ ಕಚೇರಿಯ ದೂರವಾಣಿ ಸಂಖ್ಯೆ 083292 297472, ಸಂಡೂರ ತಹಶೀಲ್ದಾರರ ಕಚೇರಿಯ ದೂರವಾಣಿ ಸಂಖ್ಯೆ -08395260241, ಸಿರಗುಪ್ಪ ತಹಶೀಲ್ದಾರ ಕಚೇರಿಯ ದೂರವಾಣಿ ಸಂಖ್ಯೆ 08396 220238, ಕುರುಗೋಡು ತಹಶೀಲ್ದಾರ ಕಚೇರಿಯ ದೂರವಾಣಿ 08393 200014, ಕಂಪ್ಲಿ ಕುರುಗೋಡು ತಹಶೀಲ್ದಾರರ ಕಚೇರಿಯ ದೂರವಾಣಿ ಸಂಖ್ಯೆ 08394 295554 ಗೆ ಸಂಪರ್ಕಿಸಬಹುದು.

baragala parihara money credited

Baragala parihara released ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿಗೆ ಪಹಣಿ ಜೋಡಣೆ ಕಡ್ಡಾಯವಾಗಿರುವುದರಿಂದ ಇದುವರೆಗೂ ಫ್ರೂಟ್ಸ್ ಐಡಿ ನೋಂದಣಿ ಮಾಡಿಕೊಳ್ಳದ ರೈತರು ತಮ್ಮ ಆಧಾರ್, ಪಹಣಿ ಹಾಗೂ ಬ್ಯಾಂಕ್ ಪಾಸ್ ಬುಕ್ ದಾಖಲೆಗಳನ್ನು ತೆಗೆದುಕೊಂಡು ಹತ್ತಿರದ ಕಂದಾಯ ಕೃಷಿ ಅಥವಾ ತೋಟಗಾರಿಕೆ ಇಲಾಖೆಗಳ ಕಚೇರಿಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.

ಇಲ್ಲವಾದಲ್ಲಿಅಂತಹ ರೈತರು ಬೆಳೆ ಪರಿಹಾರ ಹಣ ಪಡೆದುಕೊಳ್ಳಲು  ಅರ್ಹರಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Comment