Baragala parihara status : ಬರಗಾಲ ಪರಿಹಾರ ಹಣ ಈಗಾಗಲೇ ರೈತರ ಖಾತೆಗೆ ಜಮೆ ಮಾಡಲಾಗಿದೆ.
ತಮಗೆ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸ್ಟೇಪ್ ಬೈ ಸ್ಟೇಪ್ ಮಾಹಿತಿ.
ಏನಿದು ಬರಗಾಲ ಪರಿಹಾರ?
ಮುಂಗಾರು ಹಿಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದಾಗಿ ರೈತರ ಅಪಾರ ಬೆಳೆ ಹಾನಿಯಾದರೆ ರಾಜ್ಯ ಸರ್ಕಾರವು ಬರಗಾಲ ಪೀಡತ ಪ್ರದೇಶಗಳೆಂದು ಘೋಷಣೆ ಮಾಡುತ್ತದೆ. ಹೌದು ತಮಗೆಲ್ಲಾ ಗೊತ್ತಿದ್ದ ಹಾಗೆ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರವು 216 ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ.
Baragala parihara status ತಾತ್ಕಾಲಿಕ ಬರ ಪರಿಹಾರ ಎಷ್ಟು ಜಮೆ?
ರಾಜ್ಯ ಸರ್ಕಾರವು ಎಸ್.ಡಿ.ಆರ್.ಎಫ್ ಮಾರ್ಗಸೂಚಿಯ ಪ್ರಕಾರ ಸದ್ಯ ತಾತ್ಕಾಲಿಕವಾಗಿ 2 ಸಾವಿರ ರೂಪಾಯಿ ಪರಿಹಾರ ಹಣ ನೀಡಲು ಘೋಷಣೆ ಮಾಡಿದೆ. ಇದರಂತೆ ರಾಜ್ಯ ಸರ್ಕಾರವು ಸಹ ತಾತ್ಕಾಲಿಕ ಬರಗಾಲ ಪರಿಹಾರ ಹಣ 2 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಜಮೆ ಮಾಡಿದೆ.
ಎನ್.ಡಿ.ಆರ್ ಎಫ್ ಮಾರ್ಗಸೂಚಿಯ ಪ್ರಕಾರ ಯಾವ ಬೆಳೆಗೆ ಎಷ್ಟು ಪರಿಹಾರ ನೀಡಲಾಗುವುದು?
ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಪ್ರಕಾರ ರೈತರಿಗೆ ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗೆ 8500 ರೂಪಾಯಿ ನಿಗದಿಪಡಿಸಲಾಗಿದೆ., ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ನಿಗದಿಪಡಿಸಲಾಗಿದೆ. ಅದೇ ರೀತಿ ಬಹುವಾರ್ಷಿಕ ಬೆಳೆಗೆ 22500 ಪರಿಹಾರ ನಿಗದಿ ಮಾಡಲಾಗಿದೆ. ಈ ಪರಿಹಾರ ಹಣವನ್ನು ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಎರಡು ಹೆಕ್ಟೇರ್ ವರೆಗೆ ಮಾತ್ರ ಬೆಳೆ ಪರಿಹಾರ ನೀಡಲಾಗುತ್ತದೆ.
ಇದನ್ನೂ ಓದಿ : Crop Insurance money released-2024 ನಿಮಗೆಷ್ಟು ಜಮೆ? ಇಲ್ಲೇ ಚೆಕ್ ಮಾಡಿ
ರಾಜ್ಯ ಸರ್ಕಾರವು 2 ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಕೇಂದ್ರ ಸರ್ಕಾರದ ವತಿಯಿಂದ ಬರಗಾಲ ರಿಹಾರ ಬಿಡುಗಡೆ ಮಾಡಿದ ನಂತರ ರೈತರ ಖಾತೆಗೆ ಜಮೆ ಮಾಡಲಾಗುವುದು.
Baragala parihara status ನಿಮಗೆಷ್ಟು ಬರಗಾಲ ಪರಿಹಾರ ಹಣ ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ರೈತರು ಪ್ರಸಕ್ತ ಸಾಲಿನ ಅಂದರೆ ಮುಂಗಾರು ಹಂಗಾಮಿನ ಬರಗಾಲ ಪರಿಹಾರ ಜಮೆಯಾಗಿದೆಯೋ ಇಲ್ಲವೋ ಯಾವಾಗ ಜಮೆಯಾಗಿದೆ ಯಾವ ಬ್ಯಾಂಕಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/service92/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ತೆರೆದುಕೊಳ್ಳುತ್ತದೆ. ಅಲ್ಲಿ ನೀವು ವರ್ಷ 2023-24 ಆಯ್ಕೆ ಮಾಡಿಕೊಳ್ಳಬೇಕು. ಋತು ವಿನಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ನಂತರ ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹುಡುಕು ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ 12 ಅಂಕಿಗಳ ಆಧಾರ್ ಕಾರ್ಡ್ ನಂಬರ್ ನಮೂದಿಸಿ Fetch / ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬರಗಾಲ ಪರಿಹಾರ ಹಣ ಯಾವ ಖಾತೆಗೆ ಯಾವಾಗ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
ಒಂದು ವೇಳೆ ನಿಮಗೆ ಆಧಾರ್ ಸಂಖ್ಯೆಯಿಂದ ಬರಗಾಲ ಪರಿಹಾರ ಸ್ಟೇಟಸ್ ಓಪನ್ ಆಗದಿದ್ದರೆ ನೀವು ನಿಮ್ಮ ರೈತರ ಗುರುತಿನ ಸಂಖ್ಯೆ (FID) ಮೇಲೆ ಕ್ಲಿಕ್ ಮಾಡಬೇಕು.ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ಅಲ್ಲಿ ನಿಮ್ಮಫ್ರೂಟ್ಸ್ ಐಡಿ ನಂಬರ್ ಹಾಕಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.
ಇದೇ ರೀತಿ ಬರಗಾಲ ಪರಿಹಾರ ಸ್ಟೇಟಸ್ ಓಪನ್ ಆಗದಿದ್ದರೆ ಮೊಬೈಲ್ ನಂಬರ್ ಸಹ ಹಾಕಿ ಸ್ಟೇಟಸ್ ಚೆಕ್ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಭೂಮಿ ಆನ್ಲೈನ್ ಪರಿಹಾರ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು.