Baragala payment : ರೈತ ಬಾಂಧವರೆ ನಿಮಗಿಲ್ಲಿದೆ ಅತ್ಯಂತ ಗುಡ್ ನ್ಯೂಸ್. ಹೌದು, ಬರಗಾಲ ಪರಿಹಾರದ ಎರಡನೇ ಕಂತಿನ ಹಣ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆಯಾಗಿದೆ.
ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ ಕಂತಿನ ಹಣ ನಾಲ್ಕೈದು ತಿಂಗಳ ಹಿಂದೆ 2 ಸಾವಿರ ರೂಪಾಯಿ ಜಮೆ ಮಾಡಲಾಗಿತ್ತು. ಈಗ ಪ್ರತಿ ರೈತರಿಗೆ 10 ರಿಂದ 15 ಸಾವಿರ ರೂಪಾಯಿಯವರೆಗೆ ಜಮೆ ಮಾಡಲಾಗುತ್ತಿದೆ.
Baragala payment ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ?
ಎನ್.ಡಿ.ಆರ್.ಎಫ್ / ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಯಾವ ಬೆಳೆಗೆ ಎಷ್ಟು ಪರಿಹಾರ ಜಮೆ? ಇಲ್ಲಿದೆ ನೋಡಿ ಮಾಹಿತಿ.
ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ (ಗರಿಷ್ಠ ಎರಡು ಹೆಕ್ಟೇರ್ ಗೆ) ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ / ಖುಷ್ಕಿ ಬೆಳೆಗೆ 8500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ 17000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗೂ ಬಹುವಾರ್ಷಿಕ / ತೋಟಗಾರಿಕೆ ಬೆಳೆಗಳಿಗೆ 22500 ರೂಪಾಯಿವರೆಗೆ ಪರಿಹಾರ ನೀಡಲು ನಿಗದಿಪಡಿಸಲಾಗಿದೆ.
ಎಸ್.ಡಿ.ಆರ್.ಎಫ್ / ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರವೇ ಆಯಾ ಬೆಳೆಗಳಿಗೆ ಅನುಗುಣವಾಗಿ ಮಳೆಯಾಶ್ರಿತ ಹಾಗೂ ನೀರಾವರಿ ಬೆಳೆಗಳಿಗೆ 10 ರಿಂದ 17 ಸಾವಿರ ರೂಪಾಯಿಯವರೆಗೆ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.
Baragala payment ನಿಮಗೆಷ್ಟು ಬರ ಪರಿಹಾರ ಹಣ ಜಮೆ?
ನಿಮ್ಮ ಖಾತೆಗೆ ಬರ ಪರಿಹಾರ ಹಣ ಎಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/service92/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ.
ಅಲ್ಲಿ ನೀವು Select Year / ವರ್ಷ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.
ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ, ಮೊಬೈಲ್ ಸಂಖ್ಯೆಹಾಗೂ ಸರ್ವೆ ನಂಬರ್ ಈ ನಾಲ್ಕರಲ್ಲಿ ಯಾವುದಾದರೊಂದು ಒಂದನ್ನು ಆಯ್ಕೆಮಾಡಿಕೊಳ್ಳಬೇಕು.
Baragala payment ಸರ್ವೆ ನಂಬರ್ ಆಯ್ಕೆ ಮಾಡಿ
ನೀವು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.ಇದಾದ ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಗ್ರಾಮ ಆಯ್ಕೆಮಾಡಿಕೊಳ್ಳಬೇಕು. ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹಿಸ್ಸಾ ನಂಬರ್ ನಲ್ಲಿಯೂ ಸಹ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು.
ಇದನ್ನೂ ಓದಿ : Village map ಈ ಮ್ಯಾಪ್ ನಲ್ಲಿ ಜಮೀನಿಗೆ ಹೋಗುವ, ಬಂಡಿದಾರಿ, ಕಾಲುದಾರಿ ಚೆಕ್ ಮಾಡಿ 2024
ಇದಾದ ನಂತರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮಾಲಿಕರ ಹೆಸರಿಗಿರುವ ಕೊನೆಯ ನಾಲ್ಕು ಅಂಕಿಗಳು ಕಾಣಿಸುತ್ತವೆ. ಅದರ ಹಿಂದಿರುವ ಬಾಕ್ಸ್ಆಯ್ಕೆ ಮಾಡಿಕೊಂಡ ನಂತರ ನಿಮಗೆ ಮಾಲಿಕರ ಹೆಸರು ಕಾಣಿಸುತ್ತದೆ. ಆ ಮಾಲಿಕರಿಗೆ ಯಾವ ಬ್ಯಾಂಕಿನಲ್ಲಿ ಯಾವಾಗ ಬರ ಪರಿಹಾರ ಹಣ ಜಮೆಯಾಗಿದೆ ಎಂಬುದು ಕಾಣಿಸುತ್ತದೆ.
ಇದೇ ರೀತಿ ನೀವು ನಿಮ್ಮ ಸರ್ವೆ ನಂಬರ್ ನಲ್ಲಿ ಬರುವ ಇತರ ಜಮೀನಿನ ಮಾಲಿಕರಿಗೂ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.
ಅಲ್ಲಿ ನಿಮಗೆ ರೈತರ ಗುರುತಿನ ಸಂಖ್ಯೆಯೂ ಕಾಣಿಸುತ್ತದೆ. ಈ ಗುರುತಿನ ಸಂಖ್ಯೆ ಅತೀ ಮಹತ್ವದ್ದಾಗಿದೆ. ಇದನ್ನುನೀವು ನೆನಪಿಟ್ಟುಕೊಳ್ಳಬೇಕು. ಅಥವಾ ಬರೆದಿಟ್ಟುಕೊಂಡರೆ ನೀವು ಮುಂದೆ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಉಪಯೋಗವಾಗುತ್ತದೆ.