Bargala parihara hana jame : ರಾಜ್ಯದ ರೈತರು ತಮಗೆ ಎಷ್ಟು ಬರಗಾಲ ಪರಿಹಾರ ಹಣ ಜಮೆಯಾಗಿದೆ. ಇದರೊಂದಿಗೆ ಬೆಳೆ ವಿಮೆ ಹಣ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ತಮಗೆ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
Bargala parihara hana jame ಬರಗಾಲ ಪರಿಹಾರ ಹಣ ಬಿಡುಗಡೆ
ಬರದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ನೆರವಾಗಲು ರಾಜ್ಯ ಸರ್ಕಾರವು ರಾಜ್ಯ ವಿಪತ್ತು ಪರಿಹಾರ ನಿಧಿಯಡಿ 324 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.
ಕೇಂದ್ರದಿಂದ ಅನುದಾನ ನಿರೀಕ್ಷೆಯ ನಡುವೆಯೇ ಬರ ನಿರ್ವಹಣೆಗಾಗಿ ಜಿಲ್ಲಾವರು ಹಣ ನಿಗದಿ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಒಟ್ಟಾರೆ ಲಭ್ಯವಿದ್ದ 432.02 ಕೋಟಿ ರೂಪಾಯಿಗಳ ಪೈಕಿ 324 ಕೋಟಿ ರೂಪಾಯಿಗಳನ್ನು ಸರ್ಕಾರ ಬಿಡುಗಡೆಗೊಳಿಸಿದೆ. ಕನಿಷ್ಠ ಮೂರು ಕೋಟಿ ರೂಪಾಯಿಗಳಿಂದ ಗರಿಷ್ಠ 22.50 ಕೋಟಿ ರೂಪಾಯಿಯವರೆಗೆ ಬರ ಪರಿಹಾರ ಬಿಡುಗಡೆ ಮಾಡಲಾಗಿದೆ.
ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ರಾಜ್ಯ ವಿಪತ್ತು ಪರಿಹಾರ ನಿಯಮದಡಿ 930.14 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಶೇ. 75 ರಷ್ಟು ಕೇಂದ್ರದ ಪಾಲು 697.80 ಕೋಟಿ ರೂಪಾಯಿ ಇದೆ. ರಾಜ್ಯದ ಪಾಲು ಶೇ. 25 ರಷ್ಟು ಅಂದರೆ 232.54 ಕೋಟಿ ರೂಪಾಯಿ ಸೇರಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬಳ್ಳಾರಿ, ಕೊಡಗು ಜಿಲ್ಲೆಗಳಿಗೆ ತಲಾ 7.50 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.
ಇದನ್ನೂ ಓದಿ : PM kisan fund released ಸ್ಟೇಟಸ್ -2024 ಚೆಕ್ ಮಾಡಿ
ಬೀದರ್, ಉಡುಪಿ ಜಿಲ್ಲೆಗಳಿಗೆ ತಲಾ 4.50 ಕೋಟಿ ರೂಪಾಯಿಗಳನ್ನು ಬಿಡುಗಡೆ ಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 3 ಕೋಟಿರೂಪಾಯಿಗಳ ಅನುದಾನ ನೀಡಲಾಗಿದೆ.
Bargala parihara hana jame ಯಾವ ಜಿಲ್ಲೆಗೆ ಎಷ್ಟು ಪರಿಹಾರ ಬಿಡುಗಡೆ ಆಗಿದೆ?
ಬೆಳಗಾವಿ ಜಿಲ್ಲೆಗೆ 22.50, ಬಾಗಲಕೋಟೆ 13.50, ವಿಜಯಪುರ 18, ಗದಗ ಜಿಲ್ಲೆಗೆ 10.50, ಹಾವೇರಿ ಜಿಲ್ಲೆಗೆ 12 ಕೋಟಿ, ಧಾರವಾಡ ಜಿಲ್ಲೆಗೆ 12 ಕೋಟಿ, ಶಿವಮೊಗ್ಗ ಜಿಲ್ಲೆಗೆ 10.50, ಹಾಸನ ಜಿಲ್ಲೆಗೆ 12 ಕೋಟಿ, ಚಿಕ್ಕಮಗಳೂರು ಜಿಲ್ಲೆಗೆ 12 ಕೋಟಿ, ಕೊಡಗು ಜಿಲ್ಲೆಗೆ 7.50, ದಕ್ಷಿಣ ಕನ್ನಡ ಜಿಲ್ಲೆಗೆ 3 ಕೋಟಿ ರೂಪಾಯಿ, ಉಡುಪಿ ಜಿಲ್ಲೆಗೆ 4.50 ಕೋಟಿ, ಉತ್ತರಕನ್ನಡ ಜಿಲ್ಲೆಗೆ 16.50 ಕೋಟಿ ರೂಪಾಯಿ, ಬೆಂಗಳೂರು ನಗರ ಜಿಲ್ಲೆಗೆ 7.50 ಕೋಟಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 6 ಕೋಟಿ ರೂಪಾಯಿ, ರಾಮನಗರ ಜಿಲ್ಲೆಗೆ 7.50, ಕೋಟಿ, ಕೋಲಾರ ಜಿಲ್ಲೆಗೆ 9 ಕೋಟಿ, ತುಮಕೂರು 15 ಕೋಟಿ, ಚಿತ್ರದುರ್ಗ ಜಿಲ್ಲೆಗೆ 9 ಕೋಟಿ, ದಾವಣಗೆರೆ ಜಿಲ್ಲೆಗೆ 9 ಕೋಟಿ ರೂಪಾಯಿ, ಯಾದಗಿರಿ 9 ಹಾಗೂ ವಿಜಯಪುರ ಜಿಲ್ಲೆಗೆ 9 ಕೋಟಿ ರೂಪಾಯಿಗಳ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ.
Bargala parihara hana jame ಯಾಗಿರುವುದನ್ನುಚೆಕ್ ಮಮಾಡುವುದು ಹೇಗೆ ?
ಬರಗಾಲ ಪರಿಹಾರ ಯಾವ ರೈತರಿಗೆ ಎಷ್ಟು ಜಮೆಯಾಗಿದೆ ಎಂಬುದನ್ನು ರೈತರು ಚೆಕ್ ಮಾಡಲು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ಚೆಕ್ ಮಾಡಬಹುದು. ಹೌದು, ರೈತರು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ಕಾಣುವ ಆಯ್ಕೆಗಳಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ 12 ಅಂಕಿಗಳ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಬೇಕು. ಇದಾದ ಮೇಲೆ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗಿದ್ದರೆ ಎಷ್ಟು ಎಕರೆಗೆ ಎಷ್ಟುBargala parihara hana jameಯಾಗಿದೆ ಎಂಬುದು ಕಾಣಿಸುತ್ತದೆ. ಅತೀ ಶೀಘ್ರದಲ್ಲಿ ಎಲ್ಲಾ ರೈತರ ಖಾತೆಗೆ ಹಣ ಜಮೆಯಾಗಲಿದೆ. ಆಗ ರೈತರಿಗೆ ಜಮೆಯಾಗಿದ್ದು ಕಾಣಿಸುತ್ತದೆ.
Bargala parihara hana jame ಯಾರಿಗೆ ಎಷ್ಟು ಬೆಳೆ ವಿಮೆ ಜಮೆಯಾಗಿದೆ? ಚೆಕ್ ಮಾಡಿ
ಬೆಳೆ ವಿಮೆ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ? ಯಾವ ಬ್ಯಾಂಕ್ ಖಾತೆಗೆ ಜಮೆ ಆಗಿದೆ? ಎಷ್ಟು ವಿಮೆ ಹಣ ಜಮೆ ಆಗಿದೆ ಎಂಬುದನ್ನು ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಋತು ಆಯ್ಕೆ ನಲ್ಲಿ Kharif ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ Check Status ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣುವ ಆಯ್ಕೆಗಳಲ್ಲಿ Mobile No ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಅಲ್ಲಿ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ? ಇನ್ನೂ ಜಮೆಯಾಗದಿದ್ದರೆ ಅರ್ಜಿಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಬೆಳೆವಾರು ಬೆಳೆ ಸಾಲದ ಪ್ರಮಾಣದ ಆಧಾರದ ಮೇಲೆ ನಿರ್ಧರಿಸಲಾಗಿದೆ.ಕೇಂದ್ರ ಸರ್ಕಾರವು ನೀರಾವರಿ ಜಿಲ್ಲೆಗಳ ಬೆಳೆಗಳಿಗೆ ವಿಮಾ ಕಂತಿನ ಶೇ. 25 ರವರೆಗೆ ಹಾಗೂ ಮಳೆಯಾಶ್ರಿತ ಜಿಲ್ಲೆಗಳ ಬೆಳೆಗಳಿಗೆ ವಿಮಾ ಕಂತಿನ ಶೇ. 30 ರವರೆಗೆ ಕೇಂದ್ರ ಸರ್ಕಾರವು ಭರಿಸುತ್ತದೆ.
ಬೆಳೆ ಸಾಲ ಪಡೆದ ಅಥವಾ ಪಡೆಯದ ರೈತರು ಯೋಜನೆಯಡಿ ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಕಂದಾಯ ರಸೀದಿ, ಖಾತೆ ಪುಸ್ತಕ, ಪಾಸ್ ಪುಸ್ತಕ ಮತ್ತು ಆಧಾರ್ ಸಂಖ್ಯೆ ನೀಡಬೇಕು. ಬೆಳೆ ವಿಮೆ ನೋಂದಣಿಗಾಗಿ ರೈತರು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡಿದ್ದು, ಫ್ರೂಟ್ಸ್ ಐಡಿ ಹೊಂದಿರತಕ್ಕದ್ದು. ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ಸಮಿಕ್ಷೆ ಸಹ ಮಾಡಿಸಿಕೊಳ್ಳಬೇಕು. ಬೆಳೆ ಸಮೀಕ್ಷೆ ಮಾಡಿದ ರೈತರಿಗೆ ಮಾತ್ರ ಬೆಳೆ ವಿಮೆ ಹಣ ಜಮೆಯಾಗುವ ಸಾಧ್ಯತೆಯಿದೆ.
ಬೆಳೆ ವಿಮೆ ಮಾಡಿಸಲು ಇಚ್ಚಿಸುವ ರೈತರು ತಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಎಸ್.ಸಿ ಕೇಂದ್ರಗಳಲ್ಲಿ ಬೆಳೆ ವಿಮೆ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು.