Bele vime last date ಬೆಳೆ ವಿಮೆ ಮಾಡಿಸಲು ಇಂದು ಕೊನೆಯ ದಿನ-ಯಾವ ಯಾವ ಬೆಳೆಗೆ 2 ದಿನ ಇಲ್ಲೇ ಚೆಕ್ ಮಾಡಿ

Written by Admin

Updated on:

Spread the love

Bele vime last date: ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ಇಂದು ಕೊನೆಯ ದಿನ ಉಳಿದಿದೆ. ಹೌದು, ಯಾವ ಯಾವ ಬೆಳೆಗಳಿಗೆ ಇನ್ನೂ ಎರಡು ದಿನ ಮಾತ್ರ ಉಳಿದಿದೆ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಯಾವ ಯಾವ  ಬೆಳೆಗಳಿಗೆ ವಿಮೆ ಮಾಡಿಸಿ ವಿಮಾ ಸೌಲಭ್ಯ ಪಡೆಯಬಹುದು? ಯಾವ ಯಾವ ಬೆಳಗಳಿಗೆ ವಿಮೆ ಮಾಡಿಸಬಹುದು? ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Bele vime last date ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು? ಹೀಗೆ ಚೆಕ್ ಮಾಡಿ

ನಿಮ್ಮ ಊರಿಗೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/publichome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ  Crop you can insure ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Display ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಪಟ್ಟಿ ಕಾಣಿಸುತ್ತದೆ.  ಹಾಗೂ ಹೆಕ್ಟೇರಿಗೆ ನಿಮಗೆ ಎಷ್ಟು ರೂಪಾಯಿಯವರೆಗೆ ವಿಮೆ ಹಣ ಜಮೆಯಾಗಬಹುದು ಎಂಬುದು ಸಹ ಕಾಣಿಸುತ್ತದೆ.

Bele vime last date ನಿರ್ಧರಿತ ಬೆಳೆಗಳ ಹಾಗೂ ನೋಂದಣಿ ಕೊನೆಯ ದಿನಾಂಕದ ವಿವರ

ಭತ್ತ (ನೀರಾವರಿ), ಮುಸುಕಿನ ಜೋಳ (ನೀರಾವರಿ ಮತ್ತು ಮಳೆಯಾಶ್ರಿತ), ತೊಗರಿ (ನೀರಾವರಿ ಮತ್ತು ಮಳೆಯಾಶ್ರಿತ), ಉದ್ದು (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ) ತೊಗರಿ (ನೀರಾವರಿ ಮತ್ತು ಮಳೆಯಾಶ್ರಿತ), ಹತ್ತಿ (ನೀರಾವರಿ ಮತ್ತು ಮಳೆಯಾಶ್ರಿತ) ಹಾಗೂ ಸೋಯಾ ಅವರೆ (ಮಳೆಯಾಶ್ರಿತ) ಬೆಳೆಗಳಿಗೆ  ರೈತರು  ನೋಂದಣಿ ಮಾಡಿಕೊಳ್ಳಳು ಜುಲೈ 31 ಕೊನೆಯ ದಿನವಾಗಿದೆ.

ಇದನ್ನೂ ಓದಿ Pm kisan new list ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ 2024

ಸೂರ್ಯಕಾಂತಿ (ನೀರಾವರಿ ಮತ್ತು ಮಳೆಯಾಶ್ರಿತ ಬೆಳೆಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್16 ಕೊನೆಯ ದಿನವಾಗಿದೆ.

Bele vime last date ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಇನ್ನೂ ಎರಡು ದಿನ ಉಳಿದಿದೆ?

ರೈತರ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಲು ಇನ್ನೂ ಎರಡು ದಿನ ಬಾಕಿ ಉಳಿದಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಆದರೆ ಇಲ್ಲಿ ಬೆಳೆಗಳಿಗೆ ವಿಮೆ ಮಾಡಿಸುವುದು ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಭಿನ್ನವಾಗಿರುತ್ತದೆ.

ಹೌದು, ಅಂದರೆ ಒಂದು ಜಿಲ್ಲೆಗೆ ತೊಗರಿಗೆ ಬೆಳೆ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನವಾಗಿದ್ದರೆ ಅದೇ ಬೆಳೆಗೆ  ಇನ್ನೊಂದು ಜಿಲ್ಲೆಗೆ ಬೇರೆ ದಿನಾಂಕ ಕೊನೆಯಾಗಿರುತ್ತದೆ. ಅದೇ ರೀತಿ ಎಲ್ಲಾ ಜಿಲ್ಲೆಗಳಿಗೆ ಎಲ್ಲಾ ಬೆಳೆಗಳಿಗೆ ವಿಮೆ ಮಾಡಿಸಲು ಅವಕಾಶವಿರುವುದಿಲ್ಲ. ಹಾಗಾಗಿ ನಿಮ್ಮ ಜಿಲ್ಲೆಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಕೊನೆಯ ದಿನಾಂಕವಾಗಿದೆ ಎಂಬುದನ್ನು ಚೆಕ್ ಮಾಡಬಹುದು.

Bele vime last date ಬೆಳೆ ಹಾನಿಯಾದರೆ ರೈತರೇನು ಮಾಡಬೇಕು?

ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾಳಾದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ತಿಳಿಸಬೇಕು. ಆಗ ವಿಮಾ ಕಂಪನಿಯಸಿಬ್ಬಂದಿ ರೈತರ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡಿದ ನಂತರ ರೈತರಿಗೆ ವಿಮೆ ಪರಿಹಾರ ಹಣ ಜಮೆಯಾಗಲಿದೆ.

Leave a Comment