Bele vime last date : ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ಇನ್ನೂ ಎರಡು ದಿನ ಮಾತ್ರ ಬಾಕಿಯಿದೆ. ಕೂಡಲೇ ಆಗಸ್ಟ್ 25 ರಳಗೆ ನಿಮ್ಮ ಬೆಳೆಗೆ ವಿಮೆ ಮಾಡಿಸಿ. ನಿಮ್ಮ ಜಿಲ್ಲೆಗೆ ಯಾವ ಯಾವ ಬೆಳೆಗಳಿಗೆ ಆಗಸ್ಟ್ 25 ರೊಳಗೆ ವಿಮೆ ಮಾಡಿಸಬಹುದು ಎಂಬುದನ್ನು ಇಲ್ಲೇ ಚೆಕ್ ಮಾಡಿ.
ಪ್ರಸಕ್ತ ಸಾಲಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಹಾಗೂ ಮಾವು ಬೆಳೆಗಳ ಬೆಳೆ ವಿಮೆ ನೋಂದಣಿಗೆ ಅವಧಿಯನ್ನು ಬೆಳೆ ಸಾಲ ಪಡೆದ ರೈತರಿಗೆ ಮಾತ್ರ ಆಗಸ್ಟ್ 25 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Bele vime last date check ನಿಮ್ಮ ಜಿಲ್ಲೆಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಅಂತಿಮ ದಿನವಿದೆ?
ನಿಮ್ಮ ಜಿಲ್ಲೆಗೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಲು ಅಂತಿಮ ದಿನವಿದೆ ಎಂದು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ರೈತರು ಕೆಳಗೆ ನೀಡಲಾದ ಕೆಲವು ಮಾಹಿತಿಗಳ ಪ್ರಕಾರ ಅತೀ ಸುಲಭವಾಗಿ ಚೆಕ್ ಮಾಡಬಹುದು.
ರೈತರು ಪ್ರಸಕ್ತಸಾಲಿನಲ್ಲಿ ಮುಂಗಾರು ಹಂಗಾಮಿಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ Premium Calculator, Crop you can insure, check status, Know your Insurance co. Find Gram panchayat, Crop Insurance Detail on survey No and View cut of Details ಮೇಲೆ ಕಾಣಿಸುತ್ತವೆ. ಅಲ್ಲಿ ನೀವು View cut of Details ಮೇಲೆ ಕ್ಲಿಕ್ ಮಾಡಬೇಕು. ಅಥವಾ
https://samrakshane.karnataka.gov.in/PublicView/FindCutOff.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮಗೆ ನಿಮ್ಮ ಜಿಲ್ಲೆಯಿಂದ ಯಾವ ಯಾವ ಬೆಳೆಗಳಿಗೆ ಯಾವುದು ಕೊನೆಯ ದಿನಾಂಕವಿದೆ ಎಂಬ ಮಾಹಿತಿ ಕಾಣಿಸುತ್ತದೆ.
ಬೆಳೆ ವಿಮೆ ಕುರಿತು ಸಂಪೂರ್ಣ ಮಾಹಿತಿ ಪಡೆಯಲು ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.
Bele vime last date check ಬೆಳೆ ವಿಮೆ ಹೇಗೆ ನಿರ್ಧರಿಸುತ್ತಾರೆ?
ವಿಮಾ ಘಟಕದಲ್ಲಿ ಶೇ.75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡರೆ, ಅಥವಾ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ಸಕಾಲಕ್ಕೆ ಮಳೆ ಬಾರದೆ ನಿರೀಕ್ಷಿತ ಇಳುವರಿಗಿಂತ ಶೇ. 50 ಕ್ಕಿಂತ ಹೆಚ್ಚು ಇಳುವರಿ ನಷ್ಟ ಆದಲ್ಲಿ ಅಥವಾ ಅಕಾಲಿಕ ಮಳೆಯಿಂದ ಬೆಳೆ ಮುಳುಗಡೆ ಅಥವಾ ಕಟಾವಿನ ನಂತರ 14 ದಿನದೊಳಗೆ ಅಕಾಲಿಕ ಮಳೆಯಿಂದ ಬೆಳೆ ನಾಶವಾದರೆ ವಿಮಾ ಸಂಸ್ಥೆ ವೈಯಕ್ತಿಕವಾಗಿ ನಷ್ಟವನ್ನು ನಿರ್ಧರಿಸಿ ಪರಿಹಾರ ನೀಡಲು ಅವಕಾಶವಿರುತ್ತದೆ.
Bele vime last date check ಬೆಳೆ ವಿಮೆ ಹಣ ಯಾವಾಗ ಜಮೆಯಾಗುತ್ತದೆ?
ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದಾಗ 72 ಗಂಟೆಯೊಳಗೆ ಆಯಾ ವಿಮಾ ಕಂಪನಿಗೆ ತಿಳಿಸಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ರೈತರ ಜಮೀನಿಗೆ ಬಂದು ಬೆಳೆ ಹಾನಿಯಾಗಿರುವ ಕುರಿತು ವರದಿ ಮಾಡುತ್ತಾರೆ. ಆಗ ರೈತರಿಗೆ ವಿಮೆ ಹಣ ಜಮೆಯಾಗಲಿದೆ.
ಇದನ್ನೂ ಓದಿ : Pm kisan hana ಪಿಎಂ ಕಿಸಾನ್ ಯಾರಿಗೆ ಜಮೆ ಯಾರಿಗೆ ಜಮೆಯಾಗಲ್ಲ ಇಲ್ಲಿದೆ ಮಾಹಿತಿ 2024
ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಸ್ಥಳ, ನಿರ್ಧಿಷ್ಠ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು, ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದರೆ ಮಾತ್ರ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗುತ್ತದೆ.