Bele vime status ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ತಮಗೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ರೈತರಿಗೆ ಸಂಕಷ್ಟ ಕಾಲದಲ್ಲಿ ಸಹಾಯವಾಗಲೆಂದು ಯೋಜನೆಯನ್ನು ಆರಂಭಿಸಲಾಗಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಿದಾಗ ರೈತರು ವಿಮೆ ಮಾಡಿಸಿದ್ದರು.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಅಂದರೆ 2023-24 ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ಯಾವ ಯಾವ ರೈತರಿಗೆ ವಿಮೆ ಹಣ ಜಮೆಯಾಗಿದೆ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
Bele vime status ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?
2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು
ಸ್ಟೇಟಸ್ ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು 2023-24 ರ ಕೆಳಗಡೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಫಾರ್ಮರ್ಸ್ ಕಾಲಂ ಕೆಳಗಡೆ ಕಾಣುವ Check Status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊದು ಪೇಜ್ ತೆರೆದುಕೊಳ್ಳುತ್ತದೆ.
ರೈತರು ಇಲ್ಲಿ ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಬೆಳೆ ವಿಮೆ ಮಾಡಿಸುವಾಗ ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ಮೇಲೆ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಒಂದು ವೇಳೆ ಕ್ಯಾಪ್ಚ್ಯಾ ಕೋಡ್ ಸರಿಯಾಗಿ ಕಾಣಿಸದಿದ್ದರೆ ರಿಫ್ರೆಶ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಹೊಸ ಕ್ಯಾಪ್ಚ್ಯಾ ಕೋಡ್ ಅಪ್ಡೇಟ್ ಆಗುತ್ತದೆ. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.
ಇದನ್ನೂ ಓದಿ : Original Land Tippani ನಿಮ್ಮ ಜಮೀನಿನ ಓರಿಜನಲ್ ಟಿಪ್ಪಣಿ ಇಲ್ಲೇ ಚೆಕ್ ಮಾಡಿ 2024
ನಿಮ್ಮ ಅರ್ಜಿ ವಿಮಾ ಕಂಪನಿಯಿಂದ ಸ್ವೀಕೃತವಾಗಿದೆಯೋ ಇಲ್ಲವೋ ಎಂಬ ಮಾಹಿತಿಯೂ ಇಲ್ಲಿ ಕಾಣಿಸುತ್ತದೆ.
Bele vime status ಬೆಳೆ ವಿಮೆ ಜಮೆಯಾಗಿದೆಯೋ ಇಲ್ಲವೋ ಮಾಹಿತಿ ಬೇಕೇ? ಈ ನಂಬರುಗಳಿಗೆ ಸಂಪರ್ಕಿಸಿ
ಬೆಳೆ ವಿುಮೆ ಕುರಿತಂತೆ ಹಾಗೂ ವಿಮಾ ಕಂಪನಿ ಸಿಬ್ಬಂದಿ ನಂಬರ್ ಗೊತ್ತಿರದಿದ್ದರೆ ರೈತರು ಉಚಿತ ಸಹಾವಾಣಿ ನಂಬರ್ 1800 180 1551 ಗೆ ಕರೆ ಮಾಡಬದುದು. ಇಲ್ಲಿ ನೀವು ಯಾವ ವಿಮಾ ಕಂಪನಿಗೆ ಬೆಳೆ ವಿಮೆ ಪಾವತಿಸಿದ್ದೀರಿ ಎಂಬುದನ್ನು ತಿಳಿದುಕೊಳ್ಳಬಹುದು.ಆ ವಿಮಾ ಕಂಪನಿಯ ನಂಬರ್ ಸಹ ನೀಡಲಾಗುವುದು. ಆ ವಿಮಾ ಕಂಪನಿ ನಂಬರ್ ಗೆ ಕರೆ ಮಾಡಿ ನಿಮ್ಮ ಬೆಳೆ ವಿಮೆ ಜಮೆಯ ಸ್ಟೇಟಸನ್ನು ತಿಳಿದುಕೊಳ್ಳಬಹುದು.
ಇದೇ ರೀತಿ ನೀವು ಹಿಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಬಹುದು.
Bele vime status ಹಿಂಗಾರು ಬೆಳೆ ವಿಮೆ ಸ್ಟೇಟಸ್ ಚೆಕ್ಮಾಡುವುದು ಹೇಗೆ?
ಹಿಂಗಾರು ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು 2023-24 ರ ಕೆಳಗಡೆ ರಾಬಿ ಆಯ್ಕೆ ಮಾಡಿಕೊಳ್ಳಬೇಕು. ಮುಂದೆ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.