Crop insurance amount sanctioned: ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು, ಬೆಳೆ ವಿಮೆ ಮಾಡಿಸಿದ ರೈತರ ಖಾತೆಗೆ 575.194 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
Crop insurance amount sanctioned ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು 575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ರೂಪಾಯಿ 667.73 ಕೋಟಿ ರೂಪಾಯಿ ಪರಿಹಾರ ನೀಡಲಾಗುತ್ತಿದೆ, ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
Crop insurance amount sanctioned: ಯಾವ ಯಾವ ಬೆಳೆಗೆ ಹಣ ಮಂಜೂರು?
ಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ, ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ರೂಪಾಯಿ 76.34 ಕೋಟಿ ಪರಿಹಾರ ಈಗಾಗಲೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ರೈತವಾರು ಮಾಹಿತಿಯನ್ನು ಸಂರಕ್ಷಣಾ ಪೋರ್ಟನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಜಿಲ್ಲೆಯ ರೈತರು ಬೆಳೆಯುತ್ತಿರುವ ತೊಗರಿಗೆ ಕ್ವಿಂಟಾಲ್ ಒಂದಕ್ಕೆ 7550 ರೂಪಾಯಿ ಬೆಂಬಲ ಬಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 450 ರೂಪಾಯಿ ಪ್ರೋತ್ಸಾಹಧನವನ್ನು ನಿಗದಿ ಮಾಡಿದೆ. ಜಿಲ್ಲೆಯ 9189 ರೈತರಿಗೆ 108.30 ಕೋಟಿ ರೂಪಾಯಿ ಸಹಾಯಧನವನ್ನು ವಿತರಿಸಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ Bhagyalakshmi bond amount ಭಾಗ್ಯಲಕ್ಷ್ಮೀ ಹಣ ಜಮೆಯಾಗಬೇಕೇ? ಈ ಕೆಲಸ ಮಾಡಿ
2024-25 ನೇ ಸಾಲಿನಲ್ಲಿ ಅಗಷ್ಟ್ ಕೊನೆಯ ವಾರ ಹಾಗೂ ಸೆಪ್ಟಂಬರ್ ತಿಂಗಳ ಮೊದಲನೆ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16373 ಹೆಕ್ಟೇರ್‌ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ 13.47 ಕೋಟಿ ರೂಪಾಯಿ ಪರಿಹಾರವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
Crop insurance amount sanctioned ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ? ಇಲ್ಲೇ ಚೆಕ್ ಮಾಡಿ ನೋಡಿ
ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಖಾತೆಗೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://www.samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ವಿಮೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಋತು ಆಯ್ಕೆ ಖಾರೀಪ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಫಾರ್ಮರ್ಸ್ ಕಾಲಂ ಕೆಳಗಡೆ ಕಾಣುವ Check Status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊದು ಪೇಜ್ ತೆರೆದುಕೊಳ್ಳುತ್ತದೆ.
Crop insurance amount sanctioned ಅಲ್ಲಿ ನಿಮಗೆ Proposal ಹಾಗೂ Mobile No. ಮತ್ತು Aadhaar ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಬೆಳೆ ವಿಮೆ ಮಾಡಿಸುವಾಗ ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ಮೇಲೆ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಒಂದು ವೇಳೆ ಕ್ಯಾಪ್ಚ್ಯಾ ಕೋಡ್ ಸರಿಯಾಗಿ ಕಾಣಿಸದಿದ್ದರೆ ರಿಫ್ರೆಶ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಹೊಸ ಕ್ಯಾಪ್ಚ್ಯಾ ಕೋಡ್ ಅಪ್ಡೇಟ್ ಆಗುತ್ತದೆ. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.