Crop insurance registration : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ನೋಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಗ್ರಾಮ ಪಂಚಾಯತಿ ಮಟ್ಟ ಮತ್ತು ಹೋಬಳಿ ಮಟ್ಟಕ್ಕೆ ಅಧಿಸೂಚಿತ ಬೆಳೆಗಳಿಗೆ ಬ್ಯಾಂಕ್ ಅಥವಾ ಸಾಮಾನ್ಯ ಸೇವಾ ಕೇಂದ್ರಗಳು ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ರೈತರು ಬೆಳೆ ವಿಮೆ ನೋಂದಣಿಗಾಗಿ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು..
Crop insurance registration ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಾದ ಸರ್ವೆ ನಂಬರ್ ಗೆ ಮಾತ್ರ ಬೆಳೆ ವಿಮೆಗೆ ನೋಂದಣಿ
ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಾದ ವಿಸ್ತೀರ್ಣಕ್ಕೆ ಮಾತ್ರ ಬೆಳೆ ವಿಮೆ ಮಾಡಿಸಲು ಅವಕಾಶವಿದೆ. ಫ್ರೂಟ್ಸ್ ಐಡಿ ದಾಖಲಿಸಲು ಅಥವಾ ಯಾವುದೇ ಮಾರ್ಪಾಡಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಕಚೇರಿಗಳಿಗೆ ಭೇಟಿ ನೀಡಬಹುದು.
Crop insurance registration ಚಿಕ್ಕಮಗಳೂರು ಜಿಲ್ಲೆಯ ರೈತರು ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು?
ಭತ್ತ ನೀರಾವರಿ, ಭತ್ತ, ಮುಸುಕಿನ ಜೋಳ, ರಾಗಿ, ಸಾವೆ ಮತ್ತು ಹುರುಳಿ ಮಳೆಯಾಶ್ರಿತ ಆಗಸ್ಟ್ 16 ಅಂತಿಮ ದಿನವಾಗಿದೆ. ಉದ್ದು, ಹೆಸರು, ಎಳ್ಳು ಮಳೆಯಾಶ್ರಿತ ಜುಲೈ 1,ಆಲೂಗಡ್ಡೆ, ಈರುಳ್ಳಿ, ಮಳೆಯಾಶ್ರಿತ ಆಲೂಗಡ್ಡೆ, ಟೊಮ್ಯಾಟೋ,ನೀರಾವರಿ ಬೆಳೆಗಳಿಗೆ ಜುಲೈ 15, ಜೋಳ, ಸೂರ್ಯಕಾಂತಿ, ಹತ್ತಿ, ನೆಲಗಡಲೆ, ಮಳೆಯಾಶ್ರಿತ ಕೆಂಪು ಮೆಣಸಿನ ಕಾಯಿ ಜುಲೈ 31 ನೋಂದಣಿಗೆ ಕಡೆಯ ದಿನವಾಗಿದೆ.
ಹೆಚ್ಚಿನ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08262 220494 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಚಿಕ್ಕಮಗಳೂರು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Crop insurance registration ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದೆಯೇ? ಇಲ್ಲೇ ಚೆಕ್ ಮಾಡಿ
ರೈತರು ತಮ್ಮ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/GetDetailsByAadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಫ್ರೂಟ್ಸ್ ಪಿಎಂ ಕಿಸಾನ್ ಎಂಬ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕಾಗುತ್ತದೆ. ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ನಿಮ್ಮ ಹೆಸರು. ಫ್ರೂಟ್ಸ್ ಐಡಿ ಹಾಗೂ ಪಿಎಂಕೆಐಡಿ ಕಾಣಿಸುತ್ತದೆ. ಫ್ರೂಟ್ಸ್ ಇದ್ದರೆ ಮಾತ್ರ ನಿಮಗೆ ಸರ್ಕಾರದ ವಿವಿಧ ಯೋಜನೆಗಳಿಂದ ಸೌಲಭ್ಯ ಸಿಗಲಿದೆ.
Crop insurance registration ಫ್ರೂಟ್ಸ್ ಐಡಿ ಮಾಡಿಸಲು ಯಾವ ಯಾವ ದಾಖಲೆ ಬೇಕು?
ನಿಮ್ಮ ಹೆಸರಿಗೆ ಪ್ರೂಟ್ಸ್ ಐಡಿ ಮಾಡಿಸಲು ನಿಮ್ಮ ಹೆಸರಿಗೆ ಆಧಾರ್ ಕಾರ್ಡ್ ಇರಬೇಕು. ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ, ಜಮೀನಿಗೆ ಸಂಬಂಧಿಸಿದ ಎಲ್ಲಾ ಆರ್.ಟಿ.ಸಿ ಅಥವಾ ಪಹಣಿ ಸಲ್ಲಿಸಬೇಕು.
ಇದನ್ನೂ ಓದಿ : Bhagyalakshmi status ಭಾಗ್ಯಲಕ್ಷ್ಮೀ ಯೋಜನೆಯಡಿ ನಿಮ್ಮ ಮಗಳ ಹೆಸರಿಗೆಷ್ಟು ಹಣ ಜಮೆ ಇಲ್ಲೇ ಚೆಕ್ ಮಾಡಿ 2024
ಮೊಬೈಲ್ ನಂಬರ್ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ ನೀಡಿ ರೈತರು ಫ್ರೂಟ್ಸ್ ಐಡಿಯನ್ನು ಮಾಡಿಸಿಕೊಳ್ಳಬಹುದು.. ನಂತರ ತಮ್ಮ ಜಮೀನಿನ ಎಲ್ಲಾ ದಾಖಲೆಗಳು ಜೋಡಣೆಯಾಗಿವೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು.
Crop insurance registration ಫ್ರೂಟ್ಸ್ ಐಡಿ ಯಾವ ಯಾವ ಸೌಲಭ್ಯ ಪಡೆಯಲು ಬೇಕಾಗುತ್ತದೆ?
ರೈತರ ಫ್ರೂಟ್ಸ್ ಐಡಿ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ, ಬರ ಪರಿಹಾರ, ಸರ್ಕಾರದ ವಿವಿಧ ಯೋಜನೆಗಳಿಂದ ಸಬ್ಸಿಡಿ ಪಡೆಯಲು ಬೇಕಾಗುತ್ತದೆ. ಹೌದು, ತೋಟಗಾರಿಕೆ, ಕೃಷಿ, ರೇಷ್ಮೆ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳಿಂದ ಸಬ್ಸಿಡಿ ಸೌಲಭ್ಯ ಪಡೆಯಲು ರೈತರ ಬಳಿ ಪ್ರೂಟ್ಸ್ ಐಡಿ ಇರಲೇಬೇಕು. ಹಾಗಾಗಿ ಪ್ರತಿಯೊಬ್ಬ ರೈತರು ತಮ್ಮ ಹೆಸರಿಗೆ ಫ್ರೂಟ್ಸ್ ಐಡಿಯನ್ನು ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸರ್ಕರಾದ ವಿವಿಧ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ.