crop insurance released : 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮೆ ಹಣ ಜಮೆ ಮಾಡಲಾಗಿದೆ.
ಹೌದು, ಒಟ್ಟಾರೆ 88,644 ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ 101.619 ಕೋಟಿ ರೂಪಾಯಿ ಬೆಳೆ ವಿಮೆ ಪರಿುಹಾರ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
crop insurance released ಯಾವ ಹಂತದಲ್ಲಿ ಎಷ್ಟು ಬೆಳೆ ವಿಮೆ ಬಿಡುಗಡೆ?
ಬೆಳೆ ಕಟಾವು ಆಧಾರದ ಮೇಲೆ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬಿನ್ ಹಾಗೂ ತೊಗರಿ ಬೆಳೆಗಳಿಗೆ ಜಿಲ್ಲೆಯ 69,829 ರೈತರ ಬ್ಯಾಂಕ್ ಖಾತೆಗೆ 94.558 ಕೋಟಿ ರೂಪಾಯಿ, ಸ್ಥಳೀಯ ಪ್ರಕೃತಿ ವಿಕೋಪದಡಿ 18,433 ರೈತರ ಬ್ಯಾಂಕ್ ಖಾತೆಗೆ 6.242 ಕೋಟಿರೂಪಾಯಿ ವಿಮೆ ಮೊತ್ತ ಹಾಗೂ ಬೆಳೆ ರಾಶಿ ಸಂದರ್ಭದಲ್ಲಿ ಆಗುವ ಹಾನಿ ಘಟಕದಡಿ 382 ರೈತರ ಬ್ಯಾಂಕ್ ಖಾತೆಗೆ 81.927 ಲಕ್ಷ ರೂಪಾಯಿ ವಿಮೆ ಮೊತ್ತ ಪಾವತಿಸಲಾಗಿದೆ. ಹೀಗೆ ಒಟ್ಟು 88,644 ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ 101.619 ಕೋಟಿರೂಪಾಯಿ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ.
ಪರಿಹಾರ ಹಣ ಖಾತೆಗೆ ಜಮೆ ಪ್ರಕ್ರಿಯೆ ಕಳೆದೆರಡು ದಿನಗಳಿಂದ ನಿರಂತರ ನಡೆಯುತ್ತಿದ್ದು, ಒಂದೆರಡು ದಿನದಲ್ಲಿ ಉಳಿದ ರೈತರ ಖಾತೆಗೂ ಹಣ ಜಮೆಯಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Pm kisan fund ಪಿಎಂ ಕಿಸಾನ್ 17ನೇ ಕಂತು ಬಿಡುಗಡೆಗೆ ಮೋದಿ ಸಹಿ ನಿಮ್ಮ ಹೆಸರು ಚೆಕ್ ಮಾಡಿ
ಇದರಲ್ಲಿ 281 ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಣೆಯಾಗದ ಕಾರಣ 35.95 ಲಕ್ಷ ರೂಪಾಯಿ ಪರಿಹಾರ ರೈತರ ಖಾತೆಗೆ ಜಮೆಯಾಗಿರುವುದಿಲ್ಲ.ಇಂತಹ ರೈತರ ವಿವರ ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು, ಸಂಬಂಧಪಟ್ಟ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸದಲ್ಲಿ ಬೆಳೆ ವಿಮೆ ಪರಿಹಾರ ಜಮೆಯಾಗಲಿದೆ ಎಂದಿದ್ದಾರೆ.
ಇನ್ನೂ ಕಳೆದ ಡಿಸೆಂಬರ್ 2023 ತಿಂಗಳಲ್ಲಿ ಜಿಲ್ಲೆಯಲ್ಲಿ ಮಳೆ ಆಶ್ರಿತ ತೊಗರಿ ಬೆಳೆ ವಿಮೆ ಮಾಡಿಸಿದ 1,20,724 ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ 83.63 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ಜಮೆ ಮಾಡಲಾಗಿತ್ತು.
ಒಟ್ಟಾರೆಯಾಗಿ ಕಳೆದ 2023 – 24ನೇ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ 185.259 ಕೋಟಿ ರೂಪಾಯಿ ಪರಿಹಾರ ಜಮೆಯಾಗಿದೆ.
ಕಳೆದ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 1,62,071 ರೈತರು,1,86,850 ಹೆಕ್ಟೇರ್ ಪ್ರದೇಶ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಇದಕ್ಕಾಗಿ ವಿಮಾ ಸಂಸ್ಥೆಗೆ ವಿಮಾ ಕಂತಿನ ರೂಪದಲ್ಲಿ160.30 ಕೋಟಿ ರೂಪಾಯಿ ಸಂದಾಯ ಮಾಡಲಾಗಿತ್ತು. ಇದರಲ್ಲಿ ರೈತರ ವಂತಿಕೆ 18.47 ಕೋಟಿ ರೂಪಾಯಿ ರಾಜ್ಯ ಸರ್ಕಾರದ ವಂತಿಕೆ 70.92 ಕೋಟಿ ರೂಪಾಯಿ ಸೇರಿದೆ.
crop insurance released ನಿಮಗೆಷ್ಟು ಬೆಳೆ ವಿಮೆ ಜಮೆ? ಇಲ್ಲೇ ಚೆಕ್ ಮಾಡಿ
ಯಾವ ರೈತರಿಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ವರ್ಷದ ಆಯ್ಕೆಯಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ಋತು ಆಯ್ಕೆಯಲ್ಲಿ Kharif ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ Check status ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಆಯ್ಕೆಮಾಡಿಕೊಳ್ಳಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಿ ರೈತರು ಬೆಳೆ ವಿಮೆ ಜಮೆಯಾಗಿರುವ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
crop insurance released ನೇರವಾಗಿ ರೈತರ ಖಾತೆಗೆ ಬರ ಪರಿಹಾರ ಜಮೆ- ಪ್ರಿಯಾಂಕ್ ಖರ್ಗೆ
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಹೇಳಿಕೆ ನೀಡಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 88,644 ರೈತರಿಗೆ 101.619 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು ಆಗಿದೆ ಎಂದಿದ್ದಾರೆ.
ಈಗಾಗಲೇ ಡೀಸೆಂಬರ್ 2023 ರ ತಿಂಗಳಲ್ಲಿ ಜಿಲ್ಲೆಯಲ್ಲಿ ಮಳೆ ಆಶ್ರಿತ ತೊಗರಿ ಬೆಳೆ ವಿಮೆ ಮಾಡಿಸಿದ1,20,724 ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ 83.63 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ಜಮೆ ಮಾಡಲಾಗಿರುತ್ತದೆ. ಒಟ್ಟಾರೆ ಕಲಬುರಗಿ ಜಿಲ್ಲೆಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ 185.249 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.