Crop loan waive money: ಸಾಲ ಮನ್ನಾ ಹಣ ಬಿಡುಗಡೆ 2024

Written by Admin

Published on:

Spread the love

Crop loan waive money: ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರದಿಂದ 582 ಕೋಟಿ ರೂಪಾಯಿ ಅನುದಾನ ನೀಡಲು ಮುಂದಾಗಿದೆ.

ಹೌದು, ರೈತರ ಸಾಲ ಮತ್ತು ಬಡ್ಡಿ ಮನ್ನಾದಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದ ಸಹಕಾರಿ ಕ್ಷೇತ್ರ ಸದೃಢಗೊಳಿಸಲು ಮುಂದಾಗಿರುವ ಸರ್ಕಾರ, ಸಹಕಾರಿ ಬ್ಯಾಂಕ್ ಗಳಿಗೆ ಅನುದಾನ ಬಿಡುಗಡೆಗೆ ಮುಂದಾಗಿದೆ. ಈ ಉದ್ದೇಶಕ್ಕಾಗಿ ಒಟ್ಟಾರೆ 582 ಕೋಟಿ ರೂಪಾಯಿ ಅನುದಾನ ನೀಡಲು ನಿರ್ಧರಿಸಲಾಗಿದೆ. ಮತ್ತೊಂದೆಡೆ 36 ಲಕ್ಷಕ್ಕೂ ಅಧಿಕ ರೈತರಿಗೆ 27 ಸಾವಿರ ಕೋಟಿ ಸಾಲ ವಿತರಿಸುವ ಗುರು ಹೊಂದಲಾಗಿದೆ. ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವ ಭರವಸೆಯನ್ನೂ ನೀಡಲಾಗಿದೆ.

ಹಿಂದಿನ ಅವಧಿಯಲ್ಲಿ 21 ಲಕ್ಷ ರೈತರಿಗೆ 50 ಸಾವಿರ ರೂಪಾಯಿವರೆಗಿನ 7631 ಕೋಟಿ ರೂಪಾಯಿ ಬೆಳೆಮನ್ನಾ ಮಾಡಲಾಗಿತ್ತು.ಈ ಬಾಬ್ತು ಡಿಸಿಸಿ ಬ್ಯಾಂಕುಗಳಿಗೆ 132 ಕೋಟಿ ರೂಪಾಯಿ ಬಿಡುಗಡೆಯಾಗದೆ ಆರ್ಥಿಕ ಸಂಕಷ್ಟ ಉಂಟಾಗಿತ್ತು. ಆದ್ದರಿಂದ ಈ ಮೊತ್ತ ಬಿಡುಗಡೆಗೆ ನಿರ್ಧರಿಸಲಾಗಿದೆ. ಇದಷ್ಟೇ ಅಲ್ಲದೆ, ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿಮನ್ನಾಮಾಡಲು ತೀರ್ಮಾನಿಸಿದ್ದು, 57 ಸಾವಿರ ರೈತರಿಗೆ ಅನುಕೂಲವಾಗಲಿದೆ. ಇದರಿಂದಲೂ ಸಹಕಾರ ಕ್ಷೇತ್ರಕ್ಕೆ ಹೊರೆ ಆಗುವುದರಿಂದ ಈ 450 ಕೋಟಿ ರೂಪಾಯಿ ಅನುದಾನ ಒದಗಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ Crop survey in mobile ಬರ ಪರಿಹಾರಕ್ಕೆ ಇಲ್ಲೇ ಬೆಳೆ ಸಮೀಕ್ಷೆ ಮಾಡಿ- 2024

2023-24 ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಹಾಗೂ ಶೇ. 3 ಬಡ್ಡಿ ದರದಲ್ಲಿ ನೀಡುತ್ತಿದ್ದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು 10 ಲಕ್ಷ ದಿಂದ15 ಲಕ್ಷ ರೂಪಾಯಿಯವರೆಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕೂ ಅಧಿಕ ರೈತರಿಗೆ 27 ಸಾವಿರ ಕೋಟಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ.

Crop loan waive money
farmers crop loan interest waive

ರಾಜ್ಯದಲ್ಲಿ 26 ಬೆಳೆ ಪ್ರಮುಖವಾಗಿವೆ. ಇದರಲ್ಲಿ 16ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ ಎಂದು ಕೃಷಿ ಬೆಲೆ ಆಯೋಗವು ವರದಿ ನೀಡಿತ್ತು. ಈ ಹಿನ್ನೆಲೆ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತುಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ಘೋಷಿಸಬೇಕು. ಕೃಷಿ ತಜ್ಞ ಎಂ.ಎಸ್. ಸ್ವಾಮಿನಾಥನ್ ವರದಿಯ ಶಿಫಾರಸ್ಸಿನಂತೆ ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ. 50 ರಷ್ಟು ಲಾಭಾಂಶ ಪರಿಗಣಿಸಿ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಗಿದೆ.

ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂಮಹಿಳೆಯರಿಗೆ ಮೀಸಲಾತಿ ತರಲು ನಿಯಮಗಳಿಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ.

ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಆಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ ಎಪಿಎಂಸಿ ಮೂಲಕ ವೇ ಬ್ರಿಡ್ಜ್ ಸ್ಥಾಪಿಸಲಾಗುವುದು.

ಇದನ್ನೂ ಓದಿ PM kisan fund released ಸ್ಟೇಟಸ್ -2024 ಚೆಕ್ ಮಾಡಿ

ಕೃಷಿ ಮಾರಾಟ ಇಲಾಖೆಯ ಮೂಲಕ ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಆರಿ, ಗದಗ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಒಟ್ಟಾರೆ 50 ಕೋಟಿ ರೂಪಾಯಿ ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂಪಾಯಿ ವೆಚ್ಚದಲ್ಲಿ ಶೀತಲ ಗೃಹಗಳ ನಿರ್ಮಾಣ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯ ಮಾರುಕಟ್ಟೆಯಲ್ಲಿ 35 ಕೋಟಿ ರೂಪಾಯಿ ವೆಚ್ಚದಲ್ಲಿಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪಿಸಲಾಗುವುದು.

ರಾಯಚೂರಿನಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಒಣ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ, ರಾಣೆಬೆನ್ನೂರಿನಲ್ಲಿ ನಿರ್ಮಿಸುತ್ತಿರುವ ಮಾರುಕಟ್ಟೆ ಪ್ರಾಂಗಣದಲ್ಲಿ ಒಣ ಮೆಣಸಿನಕಾಯಿ ಮಾರುಕಟ್ಟೆ ಆರಂಭ, ಎಪಿಎಂಸಿಗಳಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲೀಕರಣ ಮಾಡಲಾಗುವುದು. ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ ಮಾರುಕಟ್ಟೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಬಯೋಸಿಎನ್.ಜಿ ಘಟಕ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳಾಗಿ ಪರಿವರ್ತನೆ ಮಾಡಲಾಗುವುದು.

Crop loan waive money  ಸಾಲಮನ್ನಾ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

Crop loan waive money ಸ್ಟೇಟಸ್ ನ್ನು ರೈತರು ತಮ್ಮ ಬಳಿಯಿರುವ ಆಧಾರ್ ನಂಬರ್ ಹಾಕಿ ಚೆಕ್ ಮಾಡಬಹುದು. ಹೌದು  ಈ

https://clws.karnataka.gov.in/clws/pacs/citizenreport/

ಲಿಂಕ್ ಮೇಲೆ ಕ್ಲಿಕ್ ಮಾಡಬಹುದು. ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ  ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು.  ನಂತರ Fetch Report ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಬ್ಯಾಂಕಿನ ಹೆಸರು, ಬ್ರ್ಯಾಂಚ್ ಸ್ಥಳ, ನಿಮ್ಮ ಹೆಸರು ಕಾಣಿಸುತ್ತದೆ.

ನಿಮ್ಮ ಬ್ಯಾಂಕ್ ಅಕೌಂಟ್ ಯಾವ ಪ್ರಕಾರದ್ದಾಗಿದೆ ಎಂಬ ಮಾಹಿತಿ ಸಹ ಕಾಣಿಸುತ್ತದೆ. ನಿಮ್ಮ ಹೆಸರಿಗೆ 2017 ರ ಮೊದಲು ಎಷ್ಟು ಸಾಲವಿತ್ತು ಎಂಬುದು ಕಾಣಿಸುತ್ತದೆ. ಅದರ ಕೆಳಗಡೆ ನಿಮಗೆ ಎಷ್ಟು ಬೆಳೆ ಸಾಲ ಮನ್ನಾ ಆಗಿದೆ. ಹಾಗೂ ಪೇಮೆಂಟ್ ಸ್ಟೇಟಸ್ ಮತ್ತು ಯಾವ ದಿನಾಂಕದಂದು ಬೆಳೆ ಸಾಲಮನ್ನಾ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

2018 ರಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ 1 ಲಕ್ಷ ರೂಪಾಯಿಯವರೆಗೆ ಬೆಳೆ ಸಾಲಮನ್ನಾ ಘೋಷಣೆ ಮಾಡಿದ್ದರು. ಆಗ 2017 ರವರೆಗೆ ಹಿಂದೆ ಸಾಲ ಪಡೆದ ಹಲವಾರು ರೈತರು ಇದರ ಲಾಭ ಪಡೆದಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ಹಲವಾರು ರೈತರು ಸಾಲಮನ್ನಾ ಭಾಗ್ಯದಿಂದ ವಂಚಿತರಾಗಿದ್ದರು. ಇವರಿಗೆ ಇನ್ನೂ ಸಾಲ ಮನ್ನಾ ಭಾಗ್ಯ ದೊರೆತಿಲ್ಲ.

2018 ಕ್ಕಿಂತ ಹಿಂದೆ ಯಾರು ಯಾರು ಬೆಳೆ ಸಾಲ ಪಡೆದಿದ್ದರೋ ಅವರಲ್ಲಿ ಕೆಲವು ರೈತರಿಗೆ ಮಾತ್ರ ಬೆಳೆ ಸಾಲಮನ್ನಾ ಆಗಿದೆ. ಅದರಲ್ಲಿ ಇನ್ನೂ ಹಲವಾರು ರೈತರು ಆಧಾರ್ ಕಾರ್ಡ್, ರೇಶನ್ ಕಾರ್ಡ್, ಜಮೀನಿನ ದಾಖಲೆ ಹಾಗೂ ಬ್ಯಾಂಕ್ ಖಾತೆ ನಿಷ್ಕ್ರೀಯ ಹೀಗೆ ಕೆಲವು ತಾಂತ್ರಿಕ ಕಾರಣಗಳಿಂದ ಸಾಲಮನ್ನಾ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಕೆಲವು ರೈತರು ಸಾಲಮನ್ನಾ ಷರತ್ತಿಗೊಳಪಡದೆ ವಂಚಿತರಾಗಿದ್ದಾರೆ.

Crop loan waive money ಸಾಲದ ಮೇಲಿನ ಬಡ್ಡಿ ಮನ್ನಾ

ಪ್ರಸಕ್ತ ಸಾಲಿನಲ್ಲಿ ಬೆಳೆ ಸಾಲ ಮನ್ನಾ ಆಗುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹಾಗಾಗಿ ರಾಜ್ಯ ಸರ್ಕಾರವು ಬೆಳೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ಮುಂದಾಗಿದೆ. ಸಾಲಮನ್ನಾ ಬದಲಾಗಿ ರೈತರು ಸಾಲದ ಮೇಲಿನ ಬಡ್ಡಿಯ ಸೌಲಭ್ಯ ಪಡೆದುಕೊಳ್ಳಬಹುದು.

Crop loan waive money ಬೆಳೆ ಸಾಲಮನ್ನಾ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡುವುದು ಹೇಗೆ?

ರೈತರು ಬೆಳೆ ಸಾಲಮನ್ನಾ ಗ್ರಾಮವಾರು ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://clws.karnataka.gov.in/loanwaiverreport/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಗ ಬೆಳೆ ಸಾಲಮನ್ನಾ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರಿಗೆ ಎರಡು ಆಯ್ಕೆಗಳು ಕಾಣಿಸುತ್ತವೆ. Bank wise ಹಾಗೂ pacs wise ಎಂಬ ಎರಡು ಆಯ್ಕೆಗಳಿರುತ್ತವೆ. ಇದರಲ್ಲಿ ರೈತರು Bank wise  ಆಯ್ಕೆ ಮಾಡಿಕೊಳ್ಳಬೇಕು.  ನಂತರ ಸೆಲೆಕ್ಟ್ ರಿಪೋರ್ಟ್ ನಲ್ಲಿ Farmer wise ಆಯ್ಕೆ ಮಾಡಿಕೊಳ್ಳಬೇಕು.

ಆಗ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ ರೈತರು ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ರೈತರು ತಮ್ಮ ಗ್ರಾಮ ಆಯ್ಕೆ ಮಾಡಿಕೊಂಡು Get Report ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಗ್ರಾಮದಲ್ಲಿ ಯಾವ ಯಾವ ರೈತರು ಬೆಳೆ ಸಾಲಮನ್ನಾ ಪಡೆದಿದ್ದಾರೆ ಹಾಗೂ ಯಾವ ಯಾವ ರೈತರು ಬೆಳೆ ಸಾಲಮನ್ನಾ ಪಡೆದಿಲ್ಲ ಎಂಬ ಪಟ್ಟಿ ಕಾಣಿಸುತ್ತದೆ.

 

Leave a Comment