Crop loss compensation credit ಬೆಳೆ ಹಾನಿ ಪರಿಹಾರ ಎಕರೆಗೆ ಎಷ್ಟು ರೂಪಾಯಿ ಪರಿಹಾರ ಸಿಗಲಿದೆ ಇಲ್ಲಿದೆ ಮಾಹಿತಿ

Written by Admin

Published on:

Spread the love

Crop loss compensation credit : ಕರ್ನಾಟಕದಲ್ಲಿ ಮಳೆಯಿಂದ ಬೆಳೆ ಹಾನಿಯಾದ ರೈತರ ಖಾತೆಗೆ ಎಕರೆಗೆ ಎಷ್ಟು ಪರಿಹಾರ ಹಣ ಸಿಗಲಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಎಷ್ಟಿರಲಿದೆ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ ಮಾಹಿತಿ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಮಳೆಯ ಪ್ರಮಾಣ ಸಂಪೂರ್ಣವಾಗಿ ತಗ್ಗಿದ ಕೂಡಲೇ ಸಮೀಕ್ಷೆ ನಡೆಸಿ ಬೆಳೆ ಹಾನಿಯಾದ ಎಲ್ಲಾ 10 ಲಕ್ಷ ಹೆಕ್ಟೇರಿಗೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು  ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರಾಜ್ಯದಲ್ಲಿ ಸುಮಾರು 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆ ಹಾನಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Crop loss compensation credit ಬೆಳೆ ಹಾನಿ ಎಕರೆಗೆ ಎಷ್ಟು ಪರಿಹಾರ ಸಿಗಲಿದೆ

ಸರ್ಕಾರ ಮತ್ತು ಎನ್.ಡಿ.ಆರ್.ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17 ಸಾವಿರ ರೂಪಾಯಿ ನೀಡಲಾಗುವುದು. ಅದೇ ರೀತಿ ನೀರಾವರಿ ಜಮೀನಿಗೆ 17500 ರೂಪಾಯಿ ಪರಿಹಾರ ನೀಡಲಾಗುವುದು. ಬಹು ಬೆಳೆ ಬೆಳೆಯುವ ಜಮೀನಿಗೆ 31 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆ ಹಾನಿಯ ಜಂಟಿ ಸಮೀಕ್ಷೆ  ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆ ಹಾನಿಯಾದ ಎಲ್ಲಾ 10 ಲಕ್ಷ ಹೆಕ್ಟೇರ್ ಗೆ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಪರಿಹಾರ ಘೋಷಣೆಯಿಂದಾಗಿ ಮಳೆಯಾಶ್ರಿತ ಪ್ರತಿ ಹೆಕ್ಟೇರ್‌ಗೆ 8,500 + 8,500 ಸೇರಿ 17,000 ರೂಪಾಯಿ, ನೀರಾವರಿ ಬೆಳೆಗಳಿಗೆ 17,000 + 8,500 ಸೇರಿ 25,500 ರೂಪಾಯಿ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ 22,500 + 8,500 ಸೇರಿ 31,000 ರೂಪಾಯಿ ಪರಿಹಾರ ಸಿಗಲಿದೆ ಎಂದರು.

ಸತತ ಮಳೆಯಿಂದ ಇದೂವರೆಗೆ ಶೇ.50ರಷ್ಟು ಪ್ರದೇಶದಲ್ಲಿ ಮಾತ್ರ ಸಮೀಕ್ಷೆ ಕಾರ್ಯ ಮುಗಿದಿದೆ. ಉಳಿದೆಡೆ ಮಳೆ ತಗ್ಗಿದ ಬಳಿಕ ಕೂಡಲೆ ಜಂಟಿ ಸಮೀಕ್ಷೆ ಮಾಡಿ ಪರಿಹಾರ ಹಣವನ್ನು ರೈತರ ಖಾತೆಗೆ ಜಮೆ ಮಾಡುವಂತೆ ಸೂಚನೆ ನೀಡಿದ್ದೇನೆ. ಒಟ್ಟಾರೆಯಾಗಿ ಎನ್.ಡಿ.ಆರ್.ಎಫ್. ಮತ್ತು ಹೆಚ್ಚುವರಿ ಪರಿಹಾರ ಸೇರಿ ರಾಜ್ಯ ಸರ್ಕಾರದಿಂದ 2,000 ಕೋಟಿ ರೂಪಾಯಿಕ್ಕಿಂತ ಹೆಚ್ಚಿನ ಹಣ ರೈತರಿಗೆ ಪರಿಹಾರ ರೂಪದಲ್ಲಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ What is Pauti khate ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ 2025

ರಾಜ್ಯದಲ್ಲಿ ಜೂನ್ 1 ರಿಂದ ಸೆಪ್ಟೆಂಬರ್ 29ರ ವರೆಗೆ ಸರಾಸರಿಯಂತೆ 845 ಮಿ.ಮಿ. ಮಳೆಯಾಗಬೇಕಿತ್ತು. ಆದರೆ 879 ಮಿ.ಮಿ ಮಳೆಯಾಗಿದೆ. ವಾಡಿಕೆಗ್ಗಿಂತ ಶೇ.4ರಷ್ಟು ಮಳೆ ಮಾತ್ರ ಹೆಚ್ಚಾಗಿದೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಮಹಾರಾಷ್ಟçದಿಂದ ಹೆಚ್ಚಿನ ನೀರು ಬಿಟ್ಟಿರುವ ಕಾರಣ ಮತ್ತು ಸತತ ಮಳೆಯಿಂದ ವಿಜಯಪುರ ಜಿಲ್ಲೆಯಲ್ಲಿ-58, ಬಾಗಲಕೋಟೆ-37, ಕಲಬುರಗಿ-34, ಯಾದಗಿರಿ-29, ಬೆಳಗಾವಿ-26, ರಾಯಚೂರು-21, ಗದಗ-17 ಹಾಗೂ ಬೀದರ ಜಿಲ್ಲೆಯಲ್ಲಿ ಶೇ.16ರಷ್ಟು ಹೆಚ್ಚುವರಿ ಮಳೆಯಿಂದಾಗಿ ಪ್ರಾಥಮಿಕ ಅಂದಾಜಿನ ಪ್ರಕಾರ 8,88,953 ಹೆಕ್ಟೇರ್ ಕೃಷಿ ಮತ್ತು 71,624 ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ. ರಾಜ್ಯದಲ್ಲಿ ಹಾನಿಯಾದ 10 ಲಕ್ಷ ಹೆಕ್ಟೇರ್ ಪ್ರದೇಶಗಳ ಪೈಕಿ ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿಯೇ ಶೇ.90ರಷ್ಟು ಹಾನಿಯಾಗಿದೆ ಎಂದು ಮುಖ್ಯಮಂತ್ರಿಗಳು ಉತ್ತರ ಕರ್ನಾಟಕದ ಮಳೆ ಹಾನಿ ಸ್ಥಿತಿ ವಿವರಿಸಿದರು.

ಇಂದಿಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಪ್ರದೇಶದ ಸಚಿವರೊಂದಿಗೆ ವಿಜಯಪುರ, ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯ ವೈಮಾನಿಕ ಸಮೀಕ್ಷೆ ನಡೆಸಿದ್ದು, ಜಮೀನುಗಳು ಕೆರೆಗಳಾಗಿ ಮಾರ್ಪಟ್ಟಿವೆ. ರಸ್ತೆ ಸಂಪರ್ಕ ಕಡಿತಗೊಂಡಿವೆ, ಸೇತುವೆ ಹಾಳಾಗಿವೆ, ಅನೇಕ ಮೂಲಸೌಕರ್ಯ ಹಾನಿಯಾಗಿದ್ದು ಕಂಡುಬAದಿದೆ. ರೈತರು ಎರಡೆರೆಡು ಬಾರಿ ಬೆಳೆದರು ಫಲ ಸಿಕ್ಕಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಸಹ ಈ ಪ್ರದೇಶಕ್ಕೆ ಹೆಚ್ಚುವರಿಯಾಗಿ ಪರಿಹಾರ ನೀಡಬೇಕು. ಜಂಟಿ ಸಮೀಕ್ಷೆ ಮುಗಿದ ನಂತರ ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ಸಿ.ಎಂ. ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಾದ್ಯಂತ ಇದೂವರೆಗೆ 52 ಜನ ಮಾನವ ಹಾನಿಯಾಗಿದ್ದು, 422 ಜಾನುವಾರುಗಳು ಮಳೆಗೆ ಕೊಚ್ಚಿ ಹೋಗಿವೆ. ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. 547 ಪೂರ್ಣ ಪ್ರಮಾಣದಲ್ಲಿ ಮನೆ ಹಾನಿಯಾಗಿದ್ದು, ತಲಾ 1.20 ಲಕ್ಷ ರೂಪಾಯಿಗಳಂತೆ ಮತ್ತು ಭಾಗಶ: ಮನೆ ಹಾನಿಯಾದ 75 ಪ್ರಕರಣಗಳಲ್ಲಿ ತಲಾ 50 ಸಾವಿರ ರೂಪಾಯಿಗಳಂತೆ ಪರಿಹಾರ ನೀಡಲಾಗಿದೆ. 3,881 ಮನೆಗಳು ಶೇ.15 ರಿಂದ 25ರಷ್ಟು ಹಾನಿಗೊಳಗಾಗಿದ್ದು, ಮನೆ ಮಾಲೀಕರಿಗೆ 6,500 ರೂಪಾಯಿಗಳಂತೆ ಪರಿಹಾರ ನೀಡಲಾಗಿದೆ. ಮನೆಗೆ ನೀರು ನುಗ್ಗಿ ಆಹಾರ ಧಾನ್ಯ, ಗೃಹಪಯೋಗಿ ವಸ್ತುಗಳ ಹಾನಿಗೆ ಇದುವರೆಗೆ 2.50 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಜಂಟಿ ಸಮೀಕ್ಷೆ ನಡೆಯುತ್ತಿದ್ದು, ಪರಿಹಾರ ವಿತರಣೆ ಕಾರ್ಯ ನಿರಂತರವಾಗಿರಲಿದೆ ಎಂದರು.

117 ಗ್ರಾಮಕ್ಕೆ ತೊಂದರೆ, 80 ಕಾಳಜಿ ಕೇಂದ್ರ ಸ್ಥಾಪನೆ: ತೀವ್ರ ಅತಿವೃಷ್ಠಿಗೆ ಒಳಗಾದ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದಿಂದ 117 ಗ್ರಾಮಗಳು ತೊಂದರೆಗೀಡಾಗಿದ್ದು, ಕಲಬುರಗಿ-56, ವಿಜಯಪುರ-17 ಹಾಗೂ ಯಾದಗಿರಿಯಲ್ಲಿ 7 ಸೇರಿದಂತೆ ಒಟ್ಟಾರೆ 80 ಕಾಳಜಿ ಕೇಂದ್ರ ತೆರೆದು 10,576 ಜನ ಸಂತ್ರಸ್ತರಿಗೆ ಊಟೋಪಚಾರದ ಜೊತೆಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ ಎಂದು ಸಿ.ಎಂ. ಸಿದ್ದರಾಮಯ್ಯ ತಿಳಿಸಿದರು.

Leave a Comment