Drought compensation ಈ ರೈತರ ಖಾತೆಗೆ ಬರ ಪರಿಹಾರ ಜಮೆ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ 2024

Written by Admin

Updated on:

Spread the love

Drought compensation : ಕೇಂದ್ರ ಸರ್ಕಾರ ರಾಜ್ಯಕ್ಕೆ 18172 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಬೇಕಿತ್ತು.

ಆದರೆ ಶೇ. 20 ರಷ್ಟು  ಹಣವನ್ನು ಮಾತ್ರ ಬಿಡುಗಡೆ ಮಾಡುವ ಮೂಲಕ ರೈತರಿಗೆ ಮತ್ತೊಮ್ಮೆ ಅನ್ಯಾಯ ಮಾಡಿದೆ. ಈ ಹಣವನ್ನು 1 ವಾರದಲ್ಲಿ ರೈತರ ಖಾತೆಗೆ ವರ್ಗಾಯಿಸುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಹಗ್ಗಜಗ್ಗಾಟ, ರಾಜ್ಯ ಸರ್ಕಾರದ ಕಾನೂನು ಹೋರಾಟದ ನಂತರಕೊನೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ3498 ಕೋಟಿರೂಪಾಯಿ ಬರ ಪರಿಹಾರ ಬಿಡುಗಡೆಗೆ ಆದೇಶ ಹೊರಡಿಸಿದೆ.

ಆದರೆ, ತಾನು ಸಲ್ಲಿಸಿದ್ದ ಮನವಿಗಿಂತ ಕಡಿಮೆ ಪರಿಹಾರ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದೆ.

drought compensation

ಮಳೆ ಕೊರತೆ ಕಾರಣದಿಂದಾಗಿ ರಾಜ್ಯದ 223 ತಾಲೂಕುಗಳಲ್ಲಿ ಭೀಕರ ಬರ ಕಾಣಿಸಿಕೊಂಡಿದ್ದು, ಅದಕ್ಕೆ ರೈತರಿಗೆ ಪರಿಹಾರ ನೀಡುವುದು, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಬರ ಪರಿಹಾರ ಕಾರ್ಯ ಕೈಗೊಳ್ಳಲು ಎನ್.ಡಿ.ಆರ್.ಎಫ್ ನಿಯಮದಂತೆ  1817144 ಕೋಟಿ ರೂಪಾಯಿ ಬರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ 2023ರ ಸೆಪ್ಟೆಂಬರ್ 22 ರಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದನ್ನಾಧರಿಸಿ ಕೇಂದ್ರದಿಂದ ಬರ ಅಧ್ಯಯನ ತಂಡ 2023 ರ ಅಕ್ಟೋಬರ್ 4 ರಂದು ರಾಜ್ಯಕ್ಕಾಗಮಿಸಿ ಅಕ್ಟೋಬರ್ 9 ರವರೆಗೆ 13 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಕೇಂದ್ರ ಕೃಷಿ ಮತ್ತು ಗೃಹ ಸಚಿವಾಲಯಕ್ಕೆ ವರದಿಯನ್ನು ಸಲ್ಲಿಸಿತ್ತು. ಅಲ್ಲದೆ, ಕೇಂದ್ರ ಬರ ಅಧ್ಯಯನತಂಡವು ನವೆಂಬರ್ 13 ರ ಕ್ಕೆ ರಾಜ್ಯಕ್ಕೆ ಸಂಬಂಧಿಸಿದ ಶಿಫಾರಸ್ಸುಗಳನ್ನು ಗೃಹ ಸಚಿವಾಲಯಕ್ಕೆ ಸಲ್ಲಿಸಿತ್ತು. ಅದಾದ ನಂತರ ಮುಖ್ಯಮಂತ್ರಿ ಸೇರಿ ಸಚಿವರು ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ ಅವರನ್ನು ಭೇಟಿಯಾಗಿ ಶೀಘ್ರದಲ್ಲಿಬರ ಪರಿಹಾರ ಬೀಡುಗಡೆ ಮಾಡುವಂತೆ ಕೋರಿದ್ದರು.

ಇದನ್ನೂ ಓದಿ Pahani aadhar link ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮೊಬೈಲ್ ನಲ್ಲಿ ಹೀಗೆ ಮಾಡಿ 2024

ಅದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿಯಾಗಿ ಶೀಘ್ರದಲ್ಲಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದರು.

ಅದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಅಮಿತ್ ಶಾ ಶೀಘ್ರದಲ್ಲಿ ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ತಿಳಿಸಿದರು. ನಂತರ  ಬರ ಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರ ಕ್ರಮ ಕೈಕೊಂಡಿರಲಿಲ್ಲ.

ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕಳೆದ ಮಾರ್ಚ್ 23 ರಂದು ರಾಜ್ಯಸರ್ಕಾರ ಸುಪ್ರಿಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

Drought compensation  ಯಾವ ಯಾವ ರೈತರ ಖಾತೆಗೆ ಬರ ಪರಿಹಾರ ಜಮೆ?

ಮುಂದಿನ ವಾರದೊಳಗೆ ರೈತರ ಖಾತೆಗೆ ಬರ ಪರಿಹಾರ ಹಣ ಜಮೆಯಾಗಲಿದೆ. ಹೌದು ಯಾವ ರೈತರ ಹೆಸರಿಗೆ ಎಫ್ಐಡಿ ಇದೆಯೋ ಅಂತಹ ರೈತರ ಖಾತೆಗೆ ಬರ ಪರಿಹಾರ ಹಣ ಜಮೆಯಾಗಲಿದೆ? ನಿಮ್ಮಹೆಸರಿಗೆ ಎಫ್ಐಡಿ ಆಗಿದಿಯೋ ಇಲ್ಲವೋ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

baragala compensation

Drought compensation ನಿಮ್ಮ ಹೆಸರಿಗೆ ಎಫ್ಐಡಿ ಆಗಿದೆಯೋ ಇಲ್ಲವೋ ಇಲ್ಲೇ ಚೆಕ್ ಮಾಡಿ

ರೈತರ ಹೆಸರಿಗೆ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು Find the details ಕೆಳಗಡೆ ನಿಮ್ಮ ಆಧಾರ್ ನಂಬರ್ ಹಾಕಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು.  ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ನಿಮ್ಮ ಹೆಸರು, ಪಿಎಂಕೆ ಐಡಿ ಹಾಗೂ ಫ್ರೂಟ್ಸ್ ಐಡಿ ಕಾಣಿಸುತ್ತದೆ.

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗದಿದ್ದರೆ ಏನು ಮಾಡಬೇಕು?                       

ಫ್ರೂಟ್ಸ್ ಆಗದೆ ಇರುವ ರೈತರು ಜಮೀನಿನ ದಾಖಲೆ ಪಹಣಿಗಳು, ಬ್ಯಾಂಕ್ ಪಾಸ್ ಬುಕ್,ಆಧಾರ್ ಕಾರ್ಡ್, ಜಾತಿ ಮತ್ತು ಆದಾಯಪ್ರಮಾಣ ಪತ್ರ ಹಾಗೂನಿಮ್ಮ ಇತ್ತೀಚಿನ ಫೋಟೋದೊಂದಿಗೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಿ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬಹುದು.

Leave a Comment