Enter Aadhar Number : ರೈತರು, ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಕಾರದ ಎಲ್ಲಾಯೋಜನೆಗಳ ಸ್ಟೇಟಸ್ ಚೆಕ್ ಮಾಡಬಹುದು.
ಹೌದು, ಬೆಳೆ ಹಾನಿ ಪರಿಹಾರ, ಬೆಳೆ ವಿಮೆ ಪರಿಹಾರ, ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್, ಗೃಹಲಕ್ಷ್ಮೀ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ನ್ನು ಚೆಕ್ ಮಾಡಬಹುದು. ಇದೇನು? ಕೇವಲ ಆಧಾರ್ ನಂಬರ್ ಎಂಟರ್ Enter Aadhar Number ಮಾಡಿ ಇದೆಲ್ಲಾ ಚೆಕ್ ಮಾಡಬಹುದು. ಹೌದ್ರಿ ಆಧಾರ್ ಕಾರ್ಡ್ ನಂಬರ್ ದಿಂದಲೇ ಚೆಕ್ ಮಾಡಬಹುದು. ಇದೆಲ್ಲಾ ಹೇಗೆ ಸಾಧ್ಯ ? ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.
ಈ ಹಿಂದೆ ಸರ್ಕಾರದ ಯಾವುದೇ ಯೋಜನೆಗಳಿಂದ ಹಣ ಜಮೆಯಾಗಿದ್ದನ್ನು ಚೆಕ್ ಮಾಡಲು ಬ್ಯಾಂಕಿಗೆ ಹೋಗಬೇಕಿತ್ತು. ಅಲ್ಲಿ ಸರತಿ ಸಾಲಿನಲ್ಲಿ ನಿಂತು ನಿಮ್ಮ ಪಾಸ್ ಬುಕ್ ಎಂಟ್ರಿ ಮಾಡಿಸಬೇಕಿತ್ತು. ಇದಕ್ಕಾಗಿ ಇಡೀ ದಿನವೇ ಹೋಗುತ್ತಿತ್ತು. ಕೆಲಸ ಬಿಟ್ಟು ಬ್ಯಾಲೆನ್ಸ್ ಚೆಕ್ ಮಾಡಲು ಬ್ಯಾಂಕ್ ಇದ್ದ ಊರಿಗೆ ಹೋಗಬೇಕಿತ್ತು. ಆದರೆ ಈಗ ನಿಮಗೆ ಸರ್ಕಾರದ ಯಾವ ಯಾವ ಯೋಜನೆಗಳಿಂದ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಎಲ್ಲಿಯೂ ಹೋಗಬೇಕಿಲ್ಲ. ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಎಲ್ಲವನ್ನು ಚೆಕ್ ಮಾಡಬಹುದು.
Enter Aadhar Number ಬರಗಾಲ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ತಮಗೆಲ್ಲಾ ಗೊತ್ತಿದ್ದ ಹಾಗೆ ಕಳೆದ ಮುಂಗಾರು ಮಳೆ ಕೊರತೆಯಿಂದಾಗಿ ರೈತರ ಅಪಾರ ಬೆಳೆ ಹಾನಿಯಾಗಿತ್ತು. ಇದಕ್ಕಾಗಿ ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಎರಡು ಸಾವಿರ ರೂಪಾಯಿ ಪರಿಹಾರ ಘೋಷಿಸಿತ್ತು. ಈ ಪರಿಹಾರ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/service92/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ 2023-24 ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂಗಾರು ಋತು ಆಯ್ಕೆ ಮಾಡಿಕೊಳ್ಳಬೇಕು. ವಿಪತ್ತಿನ ವಿಧದಲ್ಲಿ ಬರ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹುಡುಕು ಮೇಲೆ ಕ್ಲಿಕ್ ಮಾಡಬೇಕು. ನಂತರ ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ನಮೂದಿಸಬೇಕು. ನಂತರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ನೀವು ನಿಮ್ಮ ಆಧಾರ್ ಕಾರ್ಡ್ ಹಿಂದೆ ಇರುವ ಬಾಕ್ಸ್ ಆಯ್ಕೆಮಾಡಿಕೊಂಡರೆ ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ.
Enter Aadhar Number ಬೆಳೆ ವಿಮೆ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೂ ಬೆಳೆ ವಿಮೆ ಪರಿಹಾರ ಹಣ ಜಮೆ ಮಾಡಲಾಗಿದೆ. ತಮಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಆಧಾರ್ ನಂಬರ್ ಎಂಟರ್ ಮಾಡಿ ( Enter Aadhar Number ) ಚೆಕ್ ಮಾಡಬಹುದು. ಹೌದು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಖಾರೀಪ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ತೆರೆದುಕೊಳ್ಳುವ ಇನ್ನೊಂದು ಪೇಜ್ ನಲ್ಲಿ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು ಅಲ್ಲಿ ನಿಮ್ಮ ಆಧಾರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ 12 ಅಂಕಿಗಳ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಬಹುದು.
Enter Aadhar Number ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಪಿಎ ಕಿಸಾನ್ ಯೋಜನೆಯಡಿಯಲ್ಲಿ ಈಗಾಗಲೇ 16 ಕಂತುಗಳು ರೈತರ ಖಾತೆಗೆ ಜಮೆಯಾಗಿದೆ. ನಿಮಗೆ 16ನೇ ಕಂತು ಜಮೆಯಾಯಿತೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/KnowYour_Registration.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಆಧಾರ್ ನಂಬರ್ ಆಯ್ಕೆ ಮಾಡಿಕೊಂಡು ನಿಮ್ಮ ಆಧಾರ್ ನಂಬರ್ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ನೀವು ಪಿಎಂ ಕಿಸಾನ್ ನೋಂದಣಿ ಸಂಖ್ಯೆಯನ್ನು ಪಡೆದುಕೊಳ್ಳಬಹುದು. ನಂತರ ನೀವು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಿ ಸ್ಟೇಟಸ್ ಚೆಕ್ ಮಾಡಬಹುದು.
ಇದನ್ನೂ ಓದಿ : RTC aadhar card link ಪಹಣಿಗೆ ಆಧಾರ್ ಲಿಂಕ್ ಹೀಗೆ ಮಾಡಿ 2024
ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಜಮೆಯಾಗಿದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.