farmers FID ರೈತ ಮಿತ್ರರೇ ತಮಗೆಲ್ಲಾ ಗೊತ್ತಿದ್ದ ಹಾಗೆ ಈಗ ಬರಗಾಲ ಪರಿಹಾರ, ಬೆಳೆ ಹಾನಿ ಹಾಗೂ ಬೆಳೆ ವಿಮೆ ಪರಿಹಾರಕ್ಕೆ ಎಫ್ಐಡಿ ಕಡ್ಡಾಯವಾಗಿದೆ.
ಹೌದು, ಯಾರ ಯಾರ ಹೆಸರಿಗೆ ಎಫ್ಐಡಿ ಇದೆಯೋ ಅಂತಹವರಿಗೆ ಬರಗಾಲ ಪರಿಹಾರ ಹಣ ಜಮೆಯಾಗಲಿದೆ. ಈಗಾಗಲೇ ರಾಜ್ಯದಲ್ಲಿ ಮೊದಲೆರಡು ಕಂತುಗಳಲ್ಲಿ ಬರಗಾಲ ಪರಿಹಾರ ಹಣ ರೈತರ ಖಾತೆಗೆ ಜಮೆಯಾಗಿದೆ. ಇನ್ನೂ ಕೆಲವು ರೈತರ ಖಾತೆಗೆ ಹಣ ಜಮೆಯಾಗಿಲ್ಲ.ಏಕೆಂದರೆ ಅವರ ಹೆಸರಿಗೆ ಎಫ್ಐಡಿ ಆಗಿಲ್ಲ. ಇನ್ನೂ ಕೆಲವು ರೈತರ ಎಫ್ಐಡಿ ಸರಿಯಾಗಿ ಆಗದೆ ಇರುವುದರಿಂದ ಬರ ಪರಿಹಾರದಿಂದ ವಂಚಿತರಾಗುತ್ತಿದ್ದಾರೆ.
farmers FID ರೈತರ ಎಫ್ಐಡಿ ಆಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?
ರೈತರ ಹೆಸರಿನಲ್ಲಿ ಎಫ್ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಯಾವ ದಾಖಲೆಯೂ ಬೇಕಾಗಿಲ್ಲ. ಕೇವಲ ತಮ್ಮ ಬಳಿಯಿರುವ ಆಧಾರ್ ಕಾರ್ಡ್ ಇದ್ದರೆ ಸಾಕು. ಹೌದು, ನಿಮ್ಮ ಆಧಾರ್ ಕಾರ್ಡ್ ದಿಂದ ಎಫ್ಐಡಿ ಚೆಕ್ ಮಾಡಬಹುದು.
ರೈತರ ಎಫ್ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/GetDetailsByAadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ಐಡಿ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹನ್ನೆರಡು ಅಂಕಿಗಳ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ. ಅಲ್ಲಿ ನಿಮ್ಮ ಎಫ್ಐಡಿ, ಪಿಎಂಕೆಐಡಿ ಕಾಣಿಸುತ್ತದೆ. ಅದರ ಕೆಳಗಡೆ ನಿಮ್ಮ ಹೆಸರು ಕಾಣಿಸುತ್ತದೆ. ಇದೇ ರೀತಿ ನೀವು ನಿಮ್ಮ ಕುಟುಂಬದ ಹೆರಿನಲ್ಲಿ ಜಮೀನು ಇದ್ದರೆ ಅವರ ಹೆಸರಿಗೂ ಎಫ್ಐಡಿ ಮಾಡಿಸಿರಬೇಕು. ಇಲ್ಲಿ ಚೆಕ್ ಸಹ ಮಾಡಬಹುದು.
farmers FID ಎಫ್ಐಡಿಯಿಂದ ಯಾವ ಯಾವ ಇಲಾಖೆಯಿಂದ ಸೌಲಭ್ಯ ಪಡೆಯಬಹುದು?
ಹೌದು, ಈಗ ಸರ್ಕಾರದ ಯಾವುದೇ ಸೌಲಭ್ಯ ಪಡೆಯಬೇಕಾದರೆ ಫ್ರೂಟ್ಸ್ ಐಡಿ ಕಡ್ಡಾಯವಾಗಿದೆ. ಬೆಳೆ ವಿಮೆಯಾಗಲಿ, ಬೆಳೆ ಹಾನಿ ಪರಿಹಾರವಾಗಲಿ, ಬರಗಾಲ ಪರಿಹಾರವಾಗಲಿ ಇದರೊಂದಿಗೆ ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆಇಲಾಖೆ, ಹಾಗೂ ಕೃಷಿ ಇಲಾಖೆಯಿದ ವಿವಿಧ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯವಾಗಿದೆ.
ಇದನ್ನೂ ಓದಿ : crop loan check ನಿಮ್ಮ ಯಾವ ಜಮೀನಿನ ಮೇಲೆ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ 2024
ಬಿತ್ತನೆಯಿಂದ ಹಿಡಿದು ಕೊಯ್ಲುವರೆಗೆ ಬೇಕಾಗುವ ಕೃಷಿ ಯಂತ್ರೋಪಕರಣಗಳ ಖರೀದಿಗೂ ಫ್ರೂಟ್ಸ್ ಐಡಿಯನ್ನುಕಡ್ಡಾಯ ಮಾಡಲಾಗಿದೆ.
farmers FID ಫ್ರೂಟ್ಸ್ ಐಡಿ ಮಾಡಿಸಲು ಯಾವ ಯಾವ ದಾಖಲೆ ಬೇಕು?
ರೈತರು ಫ್ರೂಟ್ಸ್ ಐಡಿ ಮಾಡಿಸಲು ಆಧಾರ್ ಕಾರ್ಡ್ ಬೇಕು. ಜಮೀನಿಗೆ ಸಂಬಂಧಿಸಿದ ಪಹಣಿ (ಆರ್.ಟಿ.ಸಿ) ಬೇಕಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಹಾಗೂ ಇತ್ತೀಚಿನ ಫೋಟೋ ಬೇಕಾಗುತ್ತದೆ. ಈ ದಾಖಲೆಗಳೊಂದಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರದಲ್ಲಿ ಫ್ರೂಟ್ಸ್ ಐಡಿಗಾಗಿ ಅರ್ಜಿ ಸಲ್ಲಿಸಬಹುದು.
farmers FID ಎಫ್ಐಡಿಯಲ್ಲಿ ಎಲ್ಲಾಸರ್ವೆ ನಂಬರ್ ಸೇರಿಸಿ
ಬರ ಪರಿಹಾರ ಪಡೆದುಕೊಳ್ಳಲು ರೈತರು ಫ್ರೂಟ್ಸ್ ಐಡಿಯನ್ನು ಹೊಂದಿರುವುದರ ಜೊತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲಾ ಸರ್ವೆ ನಂಬರ್ ಗಳನ್ನು ಫ್ರೂಟ್ಸ್ ಐಡಿಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿದೆ.
ಫ್ರೂಟ್ಸ್ ಐಡಿ ಹೊಂದಿರುವ ರೈತರು ಆಧಾರ್ ಕಾರ್ಡ್ ಹಾಗೂ ಉತಾರ (ಪಹಣಿ) ದಾಖಲಾತಿಗಳೊಂದಿಗೆ ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತುರ್ತಾಗಿ ಬಾಕಿಯಿರುವ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಬೇಕು. ಇಲ್ಲವಾದಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಸಿಗುವುದಿಲ್ಲ. ಹಾಗಾಗಿ ರೈತರು ಫ್ರೂಟ್ಸ್ ಐಡಿ ಹೊಂದಿರುವುದರ ಜೊತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲಾ ಸರ್ವೆ ನಂಬರ್ ಗಳನ್ನು ಫ್ರೂಟ್ಸ್ ಐಡಿ ಸೇರಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೆ ಫ್ರೂಟ್ಸ್ ಐಡಿ ಹೊಂದಿರದ ರೈತರು ಎಲ್ಲಾ ದಾಖಲಾತಿಗಳೊಂದಿಗೆ ಫ್ರೂಟ್ಸ್ ಐಡಿ ಮಾಡಿಕೊಳ್ಳಲು ಕೋರಲಾಗಿದೆ.