Farmers FRUITS ID ಗೆ ಮೊಬೈಲ್ ನಲ್ಲಿ ಹೀಗೆ ಅರ್ಜಿ ಸಲ್ಲಿಸಿ -2024

Written by Admin

Published on:

Spread the love

Farmers FRUITS ID ಫ್ರೂಟ್ಸ್ ಐಡಿಯನ್ನು ರೈತರು ಈಗ ತಮ್ಮ ಬಳಿಯಿರುವ  ಮೊಬೈಲ್ ನಲ್ಲಿ ಯಾರ ಸಹಾಯವೂ ಇಲ್ಲದೆ ಚೆಕ್ ಮಾಡಬಹುದು.

ಹೌದು, ರೈತರ ಬಳಿ ಫ್ರೂಟ್ಸ್ ಐಡಿ ಇದ್ದರೆ ಮಾತ್ರ ಮುಂದಿನ ದಿನಗಳಲ್ಲಿ ಬೆಳೆ ವಿಮೆ ಪರಿಹಾರ, ಬೆಳೆ ಹಾನಿ ಪರಿಹಾರ ಸರ್ಕಾರದ ಯೋಜನೆಗಳ ಅಡಿಯಲ್ಲಿ ವಿವಿಧ ಸೌಲಭ್ಯ ಪಡೆದುಕೊಳ್ಳಬಹುದು.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರಗಳಿಂದ ಜಮೀನು ಉಳುಮೆಯಿಂದ ಬೆಳೆ ಕಟಾವುವರೆಗೆ ಬೇಕಾಗುವ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ಖರೀದಿಸಲು ಫ್ರೂಟ್ಸ್ ಐಡಿ ಬೇಕಾಗುತ್ತದೆ. ಇದರೊಂದಿಗೆ ಬೆಂಬಲ ಬೆಲೆ ಖರೀದಿಗೂ ಫ್ರೂಟ್ಸ್ ಐಡಿ ಕಡ್ಡಾಯಗೊಳಿಸಲಾಗಿದೆ. ಒಟ್ಟಿನಲ್ಲಿ ರೈತರಿಗೆ ಆಧಾರ್ ಕಾರ್ಡ್, ರೇಶನ್ ಕಾರ್ಡ್, ಎಲೆಕ್ಷನ್ ಕಾರ್ಡ್ ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿ ಫ್ರೂಟ್ಸ್ ಐಡಿ ಮುಖ್ಯವಾಗಿರುತ್ತದೆ. ಹಾಗಾಗಿ ರೈತರು ಫ್ರೂಟ್ಸ್ ಐಡಿಯನ್ನುಮಾಡಿಕೊಳ್ಳಬಹುದು.

Farmers FRUITS ID ಮಾಡಲು ಯಾವ ಯಾವ ದಾಖಲೆ ಬೇಕು? (What are documents needs for FRUITS ID)

ಫ್ರೂಟ್ಸ್ ಐಡಿ ಮಾಡಿಕೊಳ್ಳಲು ರೈತರಿಗೆ ಮುಖ್ಯವಾಗಿ ಜಮೀನಿನ ದಾಖಲೆಗಳು ಅಂದರೆ ಎಷ್ಟೇ ಸರ್ವೆ ನಂಬರ್ ಗಳಿರಲಿ ಆ ಎಲ್ಲಾ ಸರ್ವೆ ನಂಬರ್ ಗಳನ್ನು ಸಲ್ಲಿಸಬೇಕು. ಆಧಾರ್ ಕಾರ್ಡ್ ಬೇಕಾಗುತ್ತದೆ. ಬ್ಯಾಂಕ್ ಪಾಸ್ ಬೇಕು, ಇತ್ತೀಚಿನ ಪೋಟೋ ಬೇಕು. ನೀವು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದರೆ ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.

Farmers FRUITS ID
Farmers can check their Fruits id in mobile

Farmers FRUITS ID  ಎಲ್ಲಿ ಮಾಡಿಸಬೇಕು (where to create Fruits ID?

ಫ್ರೂಟ್ಸ್ ಐಡಿಯನ್ನು ರೈತರು ತಮ್ಮ ವ್ಯಾಪ್ತಿಯಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ಮಾಡಿಸಬೇಕಾಗುತ್ತದೆ. ಫ್ರೂಟ್ಸ್ ಐಡಿ ಮಾಡಿಸಲು ಯಾವ ಯಾವ ದಾಖಲೆ ಬೇಕು ಎಂಬುದನ್ನು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಕೇಳಬಹುದು.

Farmers FRUITS ID ಯನ್ನುಮೊಬೈಲ್ ನಲ್ಲಿ ಮಾಡಬಹುದೇ? (Can we Apply Fruits ID in Mobile)

ಪ್ರೂಟ್ಸ್ ಐಡಿಯನ್ನು ರೈತರು ಮೊಬೈಲ್ ನಲ್ಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೌದು, ಆನ್ಲೈನ್ ನಲ್ಲಿ ಅಂದರೆ ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬೇಕಾದರೆ ಈ

https://fruits.karnataka.gov.in/OnlineUserLogin.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು Citizen Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಗುರುತಿನ ದೃಢೀಕರಣ ಸೇವೆ Identity Valiadation Service ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಧಾರ್ ನಲ್ಲಿರುವಂತೆ ಹೆಸರು ಬರೆಯಬೇಕು. ಅದರ ಕೆಳಗಡೆ ಆಧಾರ್ ಸಂಖ್ಯೆ ನಮೂದಿಸಬೇಕು. ನಂತರ I Agree ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಲ್ಲಿಸಿ / Submit ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕೆಳಲಾದ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಈಗಾಗಲೇ ಇದ್ದರೆ ಚೆಕ್ ಮಾಡಿ (Do you have Fruits ID)

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಚೆಕ್ ಮಾಡಬಹುದು. ಹೌದು, ಆನ್ನಲೈನ್ ನಲ್ಲಿ ಪ್ರೂಟ್ಸ್ ಐಡಿ ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫಾರ್ಮರ್ಸ್ ಡಿಟೇಲ್ ಕೆಳಗಡೆ ನಿಮ್ಮ ಆಧಾರ್ ನಂಬರ್ ನಮೂದಿಸಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ನಿಮ್ಮ ಹೆಸರು, ಫ್ರೂಟ್ಸ್ ಐಡಿ ನಂಬರ್ ಕಾಣಿಸುತ್ತದೆ.ಈ  ಫ್ರೂಟ್ಸ್ ಐಡಿ ನಂಬರ್ ಸಹಾಯದಿಂದ ನೀವು ಸರ್ಕಾರಿ ಯೋಜನೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆಯಬಹುದು.

Farmers FRUITS ID ಏಕೆ ಕಡ್ಡಾಯವಾಗಿದೆ? 

ಈಗ ಫ್ರೂಟ್ಸ್ ಐಡಿ ಮಾಡಿಸುವುದು ಕಡ್ಡಾಯವಾಗಿದೆ. ಹೌದು, ಫ್ರೂಟ್ಸ್ ತಂತ್ರಾಂಶದಲ್ಲಿ ಭೂ ವಿವರಗಳನ್ನು ರೈತರು ನೋಂದಾಯಿಸಿಕೊಳ್ಳಬೇಕು. ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದೆ. ಕೂಡಲೇ ರೈತರು ತಮ್ಮಮಾಲಿಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್ ಗಳ ದಾಖಲಗಳನ್ನು  ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಬೇಕಾಗುತ್ತದೆ.

ಇದನ್ನೂ ಓದಿ Baragala parihara hana bidugade 2023-24 ನಿಮಗೆಷ್ಟು ಜಮೆ? ಚೆಕ್ ಮಾಡಿ

ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ವೈಯಕ್ತಿಕ ಮಾಹಿತಿ, ಜಮೀನಿನ, ಬೆಳೆಯ ವಿವರ ಹಾಗೂ ಈ ಹಿಂದೆ ಸರ್ಕಾರದಿಂದ ಪಡೆದ ಎಲ್ಲಾ ಇಲಾಖೆಗಳ ಸವಲತ್ತಿನ ವಿವರ  ಒಳಗೊಂಡಿರುತ್ತದೆ. ರೈತರು ಸರ್ಕಾರದ ಯಾವುದೇ ಇಲಾಖೆಯಲ್ಲಿ ಸವಲತ್ತು ಪಡೆಯಲು ಪ್ರತಿ ಸಲ ದಾಖಲಾತಿ ನೀಡುವ ಅವಶ್ಯಕತೆ ಇರುವುದಿಲ್ಲ. ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಹಾಗೂ ಬೆಳೆ ವಿಮೆ, ರೇಷ್ಮೆ ಇಲಾಖೆಯಿಂದ ಫ್ರೂಟ್ಸ್ ನೋಂದಾಯಿತ ರೈತರಿಗೆ ಸವಲತ್ತು ನೀಡಲಾಗುತ್ತಿದೆ. ಪಶು ಸಂಗೋಪನೆ ಇಲಾಖೆಯಿಂದ ಪಶುಭಾಗ್ಯ, ಕೆಎಂಎಫ್ ಪ್ರೋತ್ಸಾಹಧನ, ಸಹಕಾರ ಇಲಾಖೆಯಿಂದ ಬೆಂಬಲ ಬೆಲ ಯೋಜನೆ ಹಾಗೂ ಬೆಳೆ ಹಾನಿ ಪರಿಹಾರಕ್ಕೆ ಫ್ರೂಟ್ಸ್ ಐಡಿ ಬೇಕಾಗುತ್ತದೆ.

Leave a Comment