Fasal bima yojaneಯಡಿ ಯಾವ ಬೆಳೆಗಳಿಗೆ ಯಾವ ದಿನಾಂಕದೊಳಗೆ ವಿಮೆ ಮಾಡಿಸಬೇಕು? ಇಲ್ಲಿದೆ ಮಾಹಿತಿ

Written by Admin

Published on:

Spread the love

Fasal bima yojane :  ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಾರಿಗೆ ತರಲಾಗಿದೆ.

ಹೌದು, ಪ್ರಾಕೃತಿಕ ವಿಕೋಪದಿಂದಾಗಿ ರೈತರ ಬೆಳೆ ಹಾಳಾದರೆ ಅವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಈ  ಯೋಜನೆಯನ್ನು ಜಾರಿಗೆ ತರಲಾಗಿದೆ.

ಅತೀವೃಷ್ಟಿ ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರಲು ಈ ಯೋಜನೆಯನ್ನುಜಾರಿಗೆ ತರಲಾಗಿದೆ. ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆಗಳನ್ನು ಸಲ್ಲಿಸಲು ನಿರ್ಧರಿತ ಬೆಳೆವಾರು ಕೊನೆಯ ದಿನಾಂಕದ ವಿವರ ಇಂತಿದೆ.

Fasal bima yojane

Fasal bima yojane ನಿರ್ಧರಿತ ಬೆಳೆಗಳ ಹಾಗೂ ನೋಂದಣಿ ಕೊನೆಯ ದಿನಾಂಕದ ವಿವರ

ಭತ್ತ (ನೀರಾವರಿ), ಮುಸುಕಿನ ಜೋಳ (ನೀರಾವರಿ ಮತ್ತು ಮಳೆಯಾಶ್ರಿತ), ತೊಗರಿ (ನೀರಾವರಿ ಮತ್ತು ಮಳೆಯಾಶ್ರಿತ), ಉದ್ದು (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ) ತೊಗರಿ (ನೀರಾವರಿ ಮತ್ತು ಮಳೆಯಾಶ್ರಿತ), ಹತ್ತಿ (ನೀರಾವರಿ ಮತ್ತು ಮಳೆಯಾಶ್ರಿತ) ಹಾಗೂ ಸೋಯಾ ಅವರೆ (ಮಳೆಯಾಶ್ರಿತ) ಬೆಳೆಗಳಿಗೆ  ರೈತರು  ನೋಂದಣಿ ಮಾಡಿಕೊಳ್ಳಳು ಜುಲೈ 31 ಕೊನೆಯ ದಿನವಾಗಿದೆ.

ಇದನ್ನೂ ಓದಿ Pm kisan fund ಪಿಎಂ ಕಿಸಾನ್ 17ನೇ ಕಂತು ಬಿಡುಗಡೆಗೆ ಮೋದಿ ಸಹಿ ನಿಮ್ಮ ಹೆಸರು ಚೆಕ್ ಮಾಡಿ

ಹೆಸರು (ಮಳೆಯಾಶ್ರಿತ) ಬೆಳೆಗೆ ನೋಂದಣಿ ಮಾಡಿಕೊಳ್ಳಲು ಜುಲೈ 15 ಕೊನೆಯ ದಿನವಾಗಿದೆ. ಸೂರ್ಯಕಾಂತಿ (ನೀರಾವರಿ ಮತ್ತು ಮಳೆಯಾಶ್ರಿತ ಬೆಳೆಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್16 ಕೊನೆಯ ದಿನವಾಗಿದೆ.

Fasal bima yojane ಒಂದು ಜಿಲ್ಲೆಗೆ ಇನ್ನೊಂದು ಜಿಲ್ಲೆಗೆ ಕೊನೆಯ ದಿನ ಬೇರೆಯಾಗಿರುತ್ತದೆ? ಚೆಕ್ ಮಾಡುವುದು ಹೇಗೆ?

ಬೆಳೆ ವಿಮೆ ಮಾಡಿಸುವ ಕೊನೆಯ ದಿನ ಹಾಗೂ ಬೆಳೆಗಳ ವಿಮೆ ಮಾಡಿಸಲು ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಭಿನ್ವವಾಗಿರುತ್ತದೆ. ಅಂದರೆ ಒಂದು ಜಿಲ್ಲೆಗೆ ತೊಗರಿಗೆ ಬೆಳೆ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನವಾಗಿದ್ದರೆ ಅದೇ ಬೆಳೆಗೆ  ಇನ್ನೊಂದು ಜಿಲ್ಲೆಗೆ ಬೇರೆ ದಿನಾಂಕ ಕೊನೆಯಾಗಿರುತ್ತದೆ. ಅದೇ ರೀತಿ ಎಲ್ಲಾ ಜಿಲ್ಲೆಗಳಿಗೆ ಎಲ್ಲಾ ಬೆಳೆಗಳಿಗೆ ವಿಮೆ ಮಾಡಿಸಲು ಅವಕಾಶವಿರುವುದಿಲ್ಲ.

Fasal bima yojane ನಿಮ್ಮ ಊರಿನ ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು? ಹೀಗೆ ಚೆಕ್ ಮಾಡಿ

ನಿಮ್ಮ ಊರಿಗೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/publichome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ತೆರೆದುಕೊಳ್ಳುವ ಪೇಜ್ ನಲ್ಲಿ Crop you can insure ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Display ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಪಟ್ಟಿ ಕಾಣಿಸುತ್ತದೆ.  ಹಾಗೂ ಹೆಕ್ಟೇರಿಗೆ ನಿಮಗೆ ಎಷ್ಟು ರೂಪಾಯಿಯವರೆಗೆ ವಿಮೆ ಹಣ ಜಮೆಯಾಗಬಹುದು ಎಂಬುದು ಸಹ ಕಾಣಿಸುತ್ತದೆ.

Fasal bima scheme

Fasal bima yojane ಬೆಳೆ ಸಾಲ ಪಡೆಯದ ರೈತರೇನು ಮಾಡಬೇಕು?

ಬೆಳೆ ಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ್ ಸಂಖ್ಯೆ ಜೋಡಿಸಿದ ಬ್ಯಾಂಕ್ ಖಾತೆ ಪಾಸ್ ಬುಕ್, ಮತ್ತು ಆಧಾರ್ ಸಂಖ್ಯೆಯೊಂದಿಗೆ ಡಿಸಿಸಿ, ಇತರೆ ಬ್ಯಾಂಕ್ ಗ್ರಾಮ ಒನ್, ಸಿಎಸ್.ಸಿ ಕೇಂದ್ರಗಳಿಗೆ ಸಂಪರ್ಕಿಸಬೇಕು. ರೈತರು ಬೆಳೆ ವಿಮೆ ನೋಂದಣಿಗಾಗಿ ಫ್ರೂಟ್ಸ್ ಐಡಿ ಕಡ್ಡಾಯವಾಗಿರುತ್ತದೆ.

ನಿರ್ಧರಿತ ಬೆಳೆವಾರು ವಿಮಾ ಮೊತ್ತ ಹಾಗೂ ಮತ್ತಿತರ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನುಸಂಪರ್ಕಿಸಲು ಕೋರಲಾಗಿದೆ.

Leave a Comment