Four days heavy rain ಇಂದಿನಿಂದ ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ- ಇಲ್ಲಿದೆ ಸಂಪೂರ್ಣ ಮಾಹಿತಿ

Written by Admin

Published on:

Spread the love

Four days heavy rain : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾರಿ ಗಾಳಿಯೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಬಳ್ಳಾರಿ, ತುಮಕೂರು ಜಿಲ್ಲೆಗಳಲ್ಲಿಯೂ ಸಹಿತಿ ಭಾರಿ ಗೊಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ 40-50 ಕಿ. ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಉತ್ತರ ಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ಇಡೀ ಮಳೆ ಸುರಿಯುತ್ತಿದೆ, ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿಯೂ ಮಳೆಯಾಗುತ್ತಿದೆ. ಇದೇ ರೀತಿ  ಇನ್ನೂ ಇಂದು ವಾರ ಹೀಗೆ ಮಳೆ ಮುಂದುವರೆಯಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ Gruhalakshmi pending amount release ಈ ವಾರದಲ್ಲಿ ಗೃಹಲಕ್ಷ್ಮೀ ಪೆಂಡಿಂಗ್ ಹಣ ಹಣ ಜಮೆ 2025

ಕಳೆದ ಮೂರ್ನಾಲ್ಕು ದಿನದಿಂದ ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದೆ, ಹಗಲು ಪೂರ್ತಿ ಬಿಸಿಲಿನ ವಾತಾರವಣ ಇರಲಿದ್ದು,  ಸಾಯಂಕಾಲ ಮಳೆರಾಯನ ಅಬ್ಬರು ಶುರುವಾಗುತ್ತಿದೆ. . ಮುಂದಿನ 48 ಗಂಟೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ,

Four days heavy rain

ಆಗ್ನೇಯ ಬಂಗಾಳ, ಆಂದ್ರಪ್ರದೇಶ ಕರಾವಳಿ, ತಮಿಳುನಾಡಿನಲ್ಲಿ ಸೈಕ್ಲೋನ್‌ ಹಿನ್ನೆಲೆ ತೆಲಂಗಾಣ,ಉತ್ತರ ತಮಿಳುನಾಡಿನಲ್ಲಿ ಭರ್ಜರಿ ಮಳೆಯಾಗುವ ಸಂಭವ ಇದು, ಇದರ ಪರಿಣಾಮ ಕರ್ನಾಟಕದಲ್ಲೂ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Four days heavy rain ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?

ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.

Four days heavy rain ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment