Four days rain alert ನಾಳೆಯಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ 2025

Written by Admin

Published on:

Spread the love

Four days rain alert: ಬೇಸಿಗೆಯಿಂದ ತತ್ತರಿಸಿದ ಜನತೆಗೆ ಮತ್ತೆ ಮಳೆರಾಯ ತಂಪೆರೆಯಲಿದ್ದಾನೆ. ಹೌದು, ಇದೇ ಮಾರ್ಚ್ 22 ರಿಂದ 25 ರವರೆಗೆ ನಾಲ್ಕು ದಿನಗಳ ಕಾಲ ರಾಜ್ಯದ ಅರ್ಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Four days rain alert  ಮಾರ್ಚ್ 22 ರಿಂದ 23 ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಯಚೂರು, ಬೀದರ್, ಯಾದಗಿರಿ, ಕಲಬುರಗಿ ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ  ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Four days rain alert  ಮಾರ್ಚ್ 23 ರಂದು ಉಡುಪಿ, ರಾಮನಗರ, ಕೊಪ್ಪಳ, ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳದಲ್ಲಿ ಲಘು ಮಳೆಯಾಗಲಿದೆ. ಇದೇ ಮಾರ್ಚ್ 24 ಮತ್ತು 25 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಚಾಮರಾಜಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಗುರುವಾರ ಮತ್ತು ಶುಕ್ರವಾರ 30-40 ಕಿ.ಮೀ ವೇಗದಲ್ಲಿ ಗಾಳಿಯು ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮೇಲುಗೈ  ಸಾಧಿಸುವ ಸಾಧ್ಯತೆಯಿದೆ. ರಾಜ್ಯದ ಉಳಿದ  ಕಡೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.

Four days rain alert ಯಾವ ಯಾವ ಊರಿನಲ್ಲಿ ಮಳೆಯಾಗುತ್ತದೆ? ಈ ನಂಬರಿಗೆ ಕರೆ ಮಾಡಿ

ಇಂದು ಯಾವ ಯಾವ ಊರಿನಲ್ಲಿ ಮಳೆಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಬೇಕು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ಸಿಗುತ್ತದೆ. ಈ ನಂಬರ್  ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.  ನೀವು ಇದ್ದ ಊರಿನಲ್ಲಿಯೂ ಮುಂದಿನ ಐದು ದಿನದ ಹವಾಮಾನದ ವರದಿಯನ್ನು ನೀಡಲಾಗುವುದು. ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಸಂಪೂರ್ಣ ಉಚಿತವಾಗಿರುತ್ತದೆ.

ಇದನ್ನೂ ಓದಿ Crop insurance sahayavani number ಬೆಳೆ ವಿಮೆ ಸಹಾಯವಾಣಿ ನಂಬರ್

ಇನ್ನೇಕೆ ತಡ ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿ  ನಿಮ್ಮೂರಿನ ಸುತ್ತಮುತ್ತ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಪಡೆಯಿರಿ.

Four days rain alert ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿ  ಐದು ದಿನ ಮೊದಲೇ ಮಳೆಯ ಮಾಹಿತಿ ಪಡೆಯುವುದು ಹೇಗೆ?

ರೈತರು ಮನೆಯಲ್ಲಿಯೇ ಕುಳಿತು ಐದು ದಿನ ಮೊದಲೇ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು. ಹೌದು,  ಈ

https://play.google.com/store/apps/details?id=com.aas.meghdoot&hl=en_IN&gl=US

ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆ ಆಯ್ಕೆ ಮಾಡಿಕೊಳ್ಳಬೇಕು, ನಂತರ ಮುಂದೆ ಮೇಲೆ ಕ್ಲಿಕ್ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತ್ತದೆ.

Four days rain alert ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಹಾಸನ ಜಿಲ್ಲೆಯ ವಿವಿಧ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಸನ ಜಿಲ್ಲೆಯ ಅರಕಲಗೂಡ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಅಂಗನವಾಡಿ ಕಾರ್ಯಕರ್ತೆಯರು 20 ಮಿನಿ ಅಂಗನವಾಡಿ ಕಾರ್ಯಕರ್ತೆಯರು 2 ಹಾಗೂ ಸಹಾಯಕಿಯರು 62 ಖಾಲಿ ಇದ್ದು ಆಸಕ್ತ ಸ್ಥಳೀಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆಲೂರ ಶಿಶು ಅಭಿವೃದ್ಧಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ  ಆನ್ಲೈನ್ ಮೂಲಕ ಅರ್ಜಿ  ಸಲ್ಲಿಸಲು ಕೊನೆಯ ದಿನಾಂಕ ಏಪ್ರೀಲ್ 9 ರವರೆಗೆ ನಿಗದಿಪಡಿಸಿ ಅಧಿಸೂಚನೆಹೊರಡಿಸಲಾಗಿದೆ.

Leave a Comment