Free electric stitching machine : ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಚಿತ ಉಪಕರಣಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು ಅರ್ಜಿ ಎಲ್ಲಿ ಸಲ್ಲಿಸಬೇಕು ಕೊನೆಯ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ 2026-27ನೇ ಸಾಲಿನ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಧೋಬಿ ವೃತ್ತಿ ಹಾಗೂ ಕ್ಷೌರಿಕ ವೃತ್ತಿಯ ಉಪಕರಣಗಳನ್ನು ಎಲ್ಲಾ ವರ್ಗದವರಿಗೆ ನೀಡಲಾಗುವುದು ಹಾಗೂ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ಪರಿಶಿಷ್ಟ ಪಂಗಡ ವರ್ಗದವರಿಗೆ ಮಾತ್ರ ನೀಡಲು ಜಿಲ್ಲಾ ಪಂಚಾಯತಿ ಗ್ರಾಮೀಣ ಕೈಗಾರಿಕಾ ವಿಭಾಗದಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಸೌಲಭ್ಯ ಪಡೆಯಲು ಜಿಲ್ಲೆಯ ಗ್ರಾಮೀಣ ಭಾಗದ ನಿವಾಸಿಗಳು ಮಾತ್ರ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಜುಲೈ 20 ರೊಳಗಾಗಿ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಒಂದು ಕುಟುಂಬದಿಂದ ಒಂದು ಅರ್ಜಿಗೆ ಮಾತ್ರ ಅವಕಾಶವಿರುತ್ತದೆ. ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಬಂದಲ್ಲಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
Free electric stitching machine ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು ?
ಆಸಕ್ತರು ಜಿಲ್ಲಾ ಕಚೇರಿ ಅಥವಾ ತಾಲೂಕು ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ, ಆಧಾರ್ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ ಹಾಗೂ ಗ್ರಾಮ ಪಂಚಾಯತಿಯ ಪಿಡಿಒ ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿಯವರಿಂದ ಪಡೆದ ವೃತ್ತಿ ದೃಢೀಕರಣ ಪತ್ರವನ್ನು ಲಗತ್ತಿಸಿ ಡಿಸೆಂಬರ್ 1 ರಿಂದ 14 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಗ್ರಾಮೀಣ ಕೈಗಾರಿಕೆ), ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ 1ನೇ ಮಹಡಿ, ಎಂ.ಎಸ್.ಕೆ ಮಿಲ್ ರಸ್ತೆ, ಜೇವರ್ಗಿ ಕ್ರಾಸ್, ಕಲಬುರಗಿ ಕಚೇರಿ ಅಥವಾ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಬಹುದು ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : Bara parihara 1st installment amount credited ಇಂದು ಜಮೆಯಾಯಿತು ಬರ ಪರಿಹಾರದ ಮೊದಲ ಕಂತಿನ 2500 ರೂಪಾಯಿ
ಬೀದರ್ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿಯಿರುವ 441 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
Free electric stitching machine ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು
ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು
https://karnemakaone.kar.nic.in/abcd/
ಲಿಂಕ್ ಮೇಲೆ ಕ್ಲಿಕ್ ಮಾಡಿ ಭರ್ತಿ ಮಾಡಿ
ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾಗಿದ್ದವರು ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 11 ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Free electric stitching machine ಎಲ್ಲೆಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ
ಬೀದರ್ ಅಂಗನವಾಡಿ ಕಾರ್ಯಕರ್ತೆ 27, ಅಂಗನವಾಡಿ ಸಹಾಯಕಿಯರ 103 ಹುದ್ದೆಗಳು ಖಾಲಿಯಿವೆ. ಔರಾದ್ ನಲ್ಲಿ 27 ಅಂಗನವಾಡಿ 56 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಬಸವಕಲ್ಯಾಣದಲ್ಲಿ 25 ಅಂಗನವಾಡಿ ಕಾರ್ಯಕರ್ತೆ ಹಾಗೂ 47 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಭಾಲ್ಕಿಯಲ್ಲಿ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 43 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಹುಮಾನಾಬಾದ್ 6, ಅಂಗನವಾಡಿ ಸಹಾಯಕಿಯರ ಹುದ್ದೆಗಳು 34, ಚಿಟ್ಟಗುಪ್ಪ ಅಂಗನವಾಡಿ ಕಾರ್ಯಕ್ರೆತ 3 ಹಾಗೂ ಸಹಾಯಕಿಯರ 25 ಹುದ್ದೆಗಳು, ಕಮಲನಗರಕ್ಕೆ 5 ಅಂಗನವಾಡಿ ಕಾರ್ಯಕರ್ತೆ 12 ಸಹಾಯಕಿಯರ ಹುದ್ದೆಗಳ ಖಾಲಿಯಿವೆ.
Free electric stitching machine ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿಯಿರುವ 120 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 271 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನೆಯ ಚಾಮರಾಜನಗರ ತಾಲೂಕಿನಲಲ್ 14 ಅಂಗನವಾಡಿ ಕಾರ್ಯಕರ್ತೆಯರು, 43 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 57, ಸಂತೇಮರಹಳ್ಳಿಯಲ್ಲಿ 18 ಅಂಗನವಾಡಿ ಕಾರ್ಯಕರ್ತೆಯರು, 37 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 55, ಸಹಾಯಕಿಯರ ಹುದ್ದೆಗಳು ಸೇರಿದಂತ ಒಟ್ಟು 55, ಗುಂಡ್ಲುಪೇಟೆ ತಾಲೂಕಿನಲ್ಲಿ 46 ಅಂಗನವಾಡಿ ಕಾರ್ಯಕರ್ತೆಯರು, 76 ಸಹಾಯಕಿಯರ ಹುದ್ದೆಗಳ ಸೇರಿದಂತೆ ಒಟ್ಟು 112, ಕೊಳ್ಳೆಗಾಲ ತಾಲೂಕಿನಲ್ಲಿ 22 ಅಂಗನವಾಡಿ ಕಾರ್ಯಕರ್ತೆಯರು, 45 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 67, ಕೊಳ್ಳೇಗಾಲ (ಹನೂರು) ತಾಲೂಕಿನಲ್ಲಿ 21 ಅಂಗನವಾಡಿ ಕಾರ್ಯಕರ್ತೆಯರು, 48 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 69, ಯಳಂದೂರು ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆಯರು, 22 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ವೆಬ್ಸೈಟ್ ಮೂಲಕ ಡಿಸೆಂಬರ್ 4 ರೊಳಗೆ ಸಲ್ಲಿಸಬೇಕು.





