Free hen training ಉಚಿತವಾಗಿ ಕೋಳಿ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ 2024

Written by Admin

Published on:

Spread the love

Free hen training : ಕಲಬುರಗಿ ಎಸ್.ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಸೆಪ್ಟೆಂಬರ್ 9 ರಿಂದ 18 ರವರೆಗೆ 10 ದಿನಗಳ ಕಾಲ ಉಚಿತವಾಗಿ ಕೋಳಿ ಸಾಕಾಣಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ ಆರ್.ಸೆಟ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Free hen training ಕೋಳಿ ಸಾಕಾಣಿಕೆಯಲ್ಲಿ ಏನೇನು ಸೌಲಭ್ಯ ನೀಡಲಾಗುವುದು?

ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುವುದು. ವಯೋಮಿತಿ 18 ರಿಂದ 45 ವಯೋಮಾನದೊಳಗಿನ ಬಿಪಿಎಲ್, ಅಂತ್ಯೋದಯ, ರೇಶನ್ ಕಾರ್ಡ್,  ಎಮ್.ಜಿಎನ್.ಆರ್.ಇ.ಜಿ.ಎ ಕಾರ್ಡ್ ಹೊಂದಿದ  ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿಅವಶ್ಯಕ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಇದೇ ಸೆಪ್ಟೆಂಬರಪ್ 6 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

Free hen training ಹೆಚ್ಚಿನ ಮಾಹಿತಿಗೆ ಇಲ್ಲಿ ಸಂಪರ್ಕಿಸಿ

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585,9886781239 ಹಾಗೂ 9900135705 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಸ್ವಯಂ ಉದ್ಯೋಗ ಕೈಗೊಳ್ಳಲು 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

1 lakh subsidy : ಕೃಷಿ / ಕೃಷಿ ಅವಲಂಬಿತ ಚಟುವಟಿಕೆ ಕೈಗೊಳ್ಳಲು ಆಸಕ್ತಿಯಿದೆಯೇ?  ಕೂಡಲೇ 1 ಲಕ್ಷ ರೂಪಾಯಿ ಸಬ್ಸಿಡಿ ಪಡೆಯಲು ಇಳ್ಲಿ ಅರ್ಜಿ ಸಲ್ಲಿಸಬಹುದು.

ಹೌದು, ಕೃಷಿ / ಕೃಷಿ ಅವಲಂಬಿತ ಚಟುವಟಿಕೆ ಹಾಗೂ ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳ ಖರೀದಿಗೂ 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುವುದು. ಇದರೊಂದಿಗೆ ಆರ್ಥಿಕ ಚಟುವಟಿಕೆಗಳು ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ. 20 ರಷ್ಟು ಅಥವಾ ಗರಿಷ್ಠ 1 ಲಕ್ಷ ರೂಪಾಯಿ ಸಹಾಯಧನ ಮಂಜೂರು ಮಾಡಲಾಗುವುದು. ಹಾಗಾದರೆ ಯಾರು ಯಾರು ಸ್ವಯಂ ಉದ್ಯೋಗಕ್ಕೆ 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುವದು ಇಲ್ಲಿದೆ ಮಾಹಿತಿ.

Free hen training

ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.  ವೀರಶೈವ – ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರು (ಪ್ರವರ್ಗ –III ಬಿ) ಅರ್ಜಿ ಸಲ್ಲಿಸಬಹುದು.

ಅರ್ಜಿ ಎಲ್ಲಿ ಸಲ್ಲಿಸಬೇಕು ಈ ಯೋಜನೆಯ ಸೌಲಭ್ಯ ಪಡೆಯಲು ಬೇಕಾಗುವ ಅರ್ಹತೆಗಳಾವುವು?

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು

ಇದನ್ನೂ ಓದಿ Farmers FRUITS ID ಗೆ ಮೊಬೈಲ್ ನಲ್ಲಿ ಹೀಗೆ ಅರ್ಜಿ ಸಲ್ಲಿಸಿ -2024

ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚನಾ ಕೋಡಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

Free hen training ಹೆಚ್ಚಿನ ಮಾಹಿತಿಗಾಗಿ ಫಲಾನುಭವಿಗಳು ಯಾರಿಗೆ ಸಂಪರ್ಕಿಸಬೇಕು?

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ  ನಿಗಮದ ದೂರವಾಣಿ ಸಂಖ್ಯೆ 080 22865522 ಅಥವಾ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು,ಡಿ. ದೇವರಾಜ ಅರಸು ಹಿಂದುಳದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದು.

Leave a Comment