Free Horticulture training ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿಗೆ ಒಂಬತ್ತು ತಿಂಗಳ ಅವಧಿಯ ತೋಟಗಾರಿಕೆ ತರಬೇತಿ ಪಡೆಯಲು ಆಸಕ್ತ ರೈತ ಕುಟುಂಬದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ, ಗದಗ, ಹಾವೇರಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024ರ ಜೂನ್ 15 ರಿಂದ 2025 ರ ಮಾರ್ಚ್ 31 ರವರೆಗೆ 9 ತಿಂಗಳುಗಳ ಕಾಲ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ತಂದೆ ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂಡೆ ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು.ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳು ತೋಟದ ಕೆಲಸ ಮಾಡುವಂತಿರಬೇಕು.
Free Horticulture training ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1750 ರೂಪಾಯಿಗಳ ಮಾಸಿಕ ಶಿಷ್ಯವೇತನ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 3 ರ ಸಂಜೆ 5.30 ರ ಒಳಗಾಗಿ ಸಲ್ಲಿಸಬೇಕು. ಜೂನ್ 6 ರಂದು ಆಯಾ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹಾವೇರಿ ಜಿಲ್ಲೆಯರೈತರು ಜೂನ್ 6 ರಂದು 11 ಗಂಟೆಗೆ ಹಾವೇರಿ ಜಿಲ್ಲೆಯ ರೈತರು ದೇವಗಿರಿಯ ಜಿಲ್ಲಾಡಳಿತ ಭವನದ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಕೊಪ್ಪಳ ಜಿಲ್ಲೆಯ ರೈತರು ಜೂನ್ 6 ರಂದು ಬೆಳಗ್ಗೆ 10 ಗಂಟೆಗೆ ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಕೊಪ್ಪಳ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ತಿಳಿಸಿದ್ದಾರೆ.ತಿಳಿಸಿದ್ದಾರೆ.
ಇದನ್ನೂ ಓದಿ : Belehani parihara ಈ ರೈತರ ಖಾತೆಗೆ 360 ಕೋಟಿ ಬರ ಪರಿಹಾರ ಜಮೆ ನಿಮಗೆಷ್ಟು ಜಮೆ? ಇಲ್ಲೇ ಚೆಕ್ ಮಾಡಿ
ಗದಗ ಜಿಲ್ಲೆಯ ರೈತರ ಮಕ್ಕಳು ತೋಟಗಾರಿಕೆ ಇಲಾಖೆ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ತಾಲೂಕುಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಜೂನ್ 10 ರಂದು ತರಬೇತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟಿಸಲಾಗುವುದು.
ಪರಿಶಿಷ್ಟಜಾತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಕನಿಷ್ಟ 18 ವರ್ಷ, ಗರಿಷ್ಠ 33, ಇತರ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷದೊಳಗಿರಬೇಕು. ಹಾಗೂ ಮಾಜಿ ಸೈನಿಕರು 33 ವರ್ಷದಿಂದ 65 ವರ್ಷದೊಳಗಿರಬೇಕು.
ಸಾಮಾನ್ಯ ಅಭ್ಯರ್ಥಿಗೆ 40 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರು 15 ರೂಪಾಯಿಗಳ ಪೋಸ್ಟಲ್ ಆರ್ಡರ್ ಅಥವಾ ಡಿಡಿಯನ್ನು ಅರ್ಜಿ ಶುಲ್ಕವಾಗಿ ಸಲ್ಲಿಸಬೇಕು.
Free Horticulture training ತರಬೇತಿಗೆ ಸಲ್ಲಿಸಲು ಅರ್ಜಿ ಬೇಕೆ?
10 ತಿಂಗಳ ತೋಟಗಾರಿಕೆ ತರಬೇತಿ ಪಡೆಯಲು ಅರ್ಜಿ ನಮೂನೆ ಪಡೆಯಲು ಈ
https://horticulturedir.karnataka.gov.in
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ತೋಟಗಾರಿಕೆ ಇಲಾಖೆಯ ಪೇಜ್ ತೆರೆದುಕೊಳ್ಳುತ್ತದೆ. ಅಥವಾ ಈ
https://horticulturedir.karnataka.gov.in/storage/pdf-files/Lalbagh/DDHHIC.pdf
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಡಿಎಫ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೆಳಗಡೆ ಅರ್ಜಿ ನಮೂನೆ ಪೇಜ್ ಕಾಣಿಸುತ್ತದೆ. ಅದನ್ನೂ ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.
ನಲ್ಲಿ ಪಡೆದುಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹಾವೇರಿ ಹಾಗೂ ತಾಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Free Horticulture training ತರಬೇತಿಯ ಸ್ಥಳ
ತರಬೇತಿಗೆ ಸೇರುವ ಪ್ರತಿ ಅಭ್ಯರ್ಥಿಯು ತರಬೇತಿ ಕೇಂದ್ರದ ವಸತಿ ಗೃಹದಲ್ಲಿ ತಂಗುವುದು ಕಡ್ಡಾಯವಾಗಿರುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಸುರಕ್ಷಿತ ವ್ಯವಸ್ಥೆ ಕಲ್ಪಿಸುವುದು ಆಯಾ ತರಬೇತಿ ಕೇಂದ್ರದ ಮುಖ್ಯಸ್ಥರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ತೋಟಗಾರಿಕೆ ಉಪ ನಿರ್ದೇಶಕರು ಜವಾಬ್ದಾರರಾಗಿರುತ್ತಾರೆ.
Free Horticulture training ಪರೀಕ್ಷೆಗೆ ಅರ್ಹತೆ
ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಶೇಕಡಾ 75ಕ್ಕಿಂತ ಕಡಿಮೆ ಹಾಜರಾತಿ ಇದ್ದಲ್ಲಿ ಪರೀಕ್ಷೆಗೆ ಹಾಜರಾಗಲು ಅರ್ಹತೆ ಇರುವುದಿಲ್ಲ.
Free Horticulture training ತರಬೇತಿ ಪರೀಕ್ಷೆಗಳು ಮತ್ತು ಮೌಲ್ಯಮಾಪನ
ತರಬೇತಿಯ ಅಂತ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುವುದು. ಪ್ರಾಯೋಗಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಕನಿಷ್ಠ 35 ಅಂಕಗಳನ್ನು ಪಡೆಯಬೇಕಾಗಿರುತ್ತದೆ. ಶೇ.50 ಅಂಕಗಳನ್ನು ಪಡೆದವರಿಗೆ ದ್ವಿತೀಯ ದರ್ಜೆ ಹಾಗೂ 60 ಕ್ಕಿಂತ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳಿಗೆ ಪ್ರಥಮ ದರ್ಜೆಯನ್ನು ನೀಡಲಾಗುವುದು.