Free Two wheeler distribution : ಯಂತ್ರಚಾಲಿತ ದ್ವಿಚಕ್ರ ವಾಹನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2024-25ನೇ ಸಾಲಿನ ತಾಲೂಕು ಪಂಚಾಯತಿಗಳ ಅನುದಾನದಡಿಯಲ್ಲಿ ನಗರ ಪ್ರದೇಶಗಳನ್ನು ಹೊರತುಪಡಿಸಿ ಗ್ರಾಮೀಣ ಭಾಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತಿಗಳ ಗ್ರಾಮೀಣ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿ-ಚಕ್ರ ವಾಹನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿ
Free Two wheeler distribution ಯಾರಿಗೆ ದ್ವಿ ಚಕ್ರ ವಾಹನ ನೀಡಲಾಗುವುದು?
ಗ್ರಾಮೀಣ ಭಾಗದಲ್ಲಿ ಶೇ. 75 ಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿದ ವಿಕಲಚೇತನರು ಎರಡು ಕಾಲುಗಳಲ್ಲಿ ಸ್ವಾಧೀನ ಕಳೆದುಕೊಂಡಿರುವ ಎರಡು ಕೈಗಳು ಸ್ವಾಧೀನದಲ್ಲಿರುವ ಹಾಗೂ ಇತರೆ ಎಲ್ಲಾ ರೀತಿಯಲ್ಲಿ ಸದೃಢವಾಗಿರುವವರಿಗೆ ಯಂತ್ರಚಾಲಿತ ದ್ವಿ ಚಕ್ರ ವಾಹನ ನೀಡಲಾಗುವುದು.ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ವರಮಾನ 2 ಲಕ್ಷ ರೂಪಾಯಿ ಒಳಗಿರಬೇಕು ಹಾಗೂ 20 ರಿಂದ 60 ವರ್ಷ ಇರಬೇಕು. ಯುಡಿಐಡಿ ಕಾರ್ಡ್ , ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಇರಬೇಕು.
Free Two wheeler distribution ನಾಲ್ಕು ಫೋಟೋ ಹೊಂದಿರಬೇಕು. ಜನ್ಮ ದಿನಾಂಕದ ದಾಖಲೆ, ಯಂತ್ರಚಾಲಿತ ದ್ವಿ ಚಕ್ರ ವಾಹನ ಪಡೆದಿಲ್ಲವೆಂದು 100 ರೂಪಾಯಿಯ ಬಾಂಡ್ ಪೇಪರ್ ಮೇಲೆ ದೃಢೀಕರಣ ಪ್ರಮಾಣ ಪತ್ರ ಹೊಂದಿರಬೇಕು. ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್ ಹಾಗೂ ಚಾಲನಾ ಪರವಾನಗಿ ಪತ್ರವನ್ನು ಮಾರ್ಚ್ 10 ರೊಳಗಾಗಿ ಜಿಲ್ಲೆಯ ಆಯಾ ತಾಲೂಕು ಪಂಚಾಯತಿಗಳಲ್ಲಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : Pm kisan status check ಪಿಎಂ ಕಿಸಾನ್ ಹಣ ಯಾರಿಗೆ ಜಮೆ ಇಲ್ಲೇ ಸ್ಟೇಟಸ್ ಚೆಕ್ ಮಾಡಿ 2025
ಹೆಚ್ಚಿನ ಮಾಹಿತಿಗೆ ಕೊಪ್ಪಳ ತಾಲೂಕು 9980126391, ಯಲಬುರ್ಗ ತಾಲೂಕು 8147749523, ಕುಷ್ಟಗಿ 9916308585 ಹಾಗೂ ಗಂಗಾವತಿ ತಾಲೂಕಿನ ಫಲಾನುಭವಿಗಳು 7975398202 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Free Two wheeler distribution ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ ನೋಡಿ
ಹೌದು,ರೈತರು ಪಿಎಂ ಕಿಸಾನ್ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ
https://pmkisan.gov.in/BeneficiaryStatus_New.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ Enter Registration No ನಲ್ಲಿ ರೈತರು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ Captcha Code ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಸಂದೇಶ ಬರುತ್ತದೆ. ಆ ಓಟಿಪಿ ನಮೂದಿಸಿ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.
ಬಹುತೇಕ ರೈತರಿಗೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ನೆನಪಿರುವುದಿಲ್ಲ. ಯಾರಿಗೆ ನೋಂದಣಿ ಸಂಖ್ಯೆ ನೆನಪಿಲ್ಲವೋ ಆ ರೈತರು ಅಲ್ಲಿ ಕಾಣುವ Know your Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ನಂಬರ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಿಮ್ಮ ಓಟಿಪಿ ನಮೂದಿಸಿ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನಿಮಗೆ ಹಣ ಜಮಯಾಗಿರುವುದನ್ನು ಚೆಕ್ ಮಾಡಬಹುದು.