Gruhalakshmi amount credited : ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿದ ಮಹಿಳೆಯರ ಖಾತೆಗೆ ಈಗಾಗಲೇ ಐದು ಕಂತುಗಳು ಜಮೆಯಾಗಿದೆ. ನಿಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆೆೆ ಕ್ ಮಾಡಬಹುದು.
ಹೌದು, ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಡಿರುವ ರಾಜ್ಯದ 1.21 ಕೋಟಿ ಮಹಿಳಾ ಫಲಾನುಭವಿಗಳಿಗೆ 1.12 ಕೋಟಿ ಫಲಾನುಭವಿಗಳಿಗೆ 2 ಸಾವಿರ ರೂಪಾಯಿ ನೇರ ನಗದು ವರ್ಗಾವಣೆಯಾಗುತ್ತಿದೆ. ಇನ್ನು 8.20 ಲಕ್ಷ ಮಹಿಳೆಯರ ಖಾತೆಗೆ ನಗದು ವರ್ಗಾವಣೆ ಬಾಕಿ ಇದೆ.
ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿರುವ ಲಿಖಿತ ಉತ್ತರದಲ್ಲಿ ಈ ಅಂಶ ತಿಳಿಸಿದ್ದಾರೆ.
ಪ್ರತಿ ತಿಂಗಳ 15ನೇ ತಾರೀಖಿನ ನಂತರ ಫಲಾನುಭವಿಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ. ಅನೇಕ ಜಿಲ್ಲೆಗಳಲ್ಲಿ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಫಲಾನುಭವಿಗಳಿಗೆ ಕೆವೈಸಿ ಅಪ್ಡೇಟ್, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದಿರುವುದು ಮತ್ತಿತರ ತಾಂತ್ರಿಕ ಕಾರಣಗಳಿಂದ ಖಾತೆಗೆ ಹಣ ಸಂದಾಯವಾಗಿಲ್ಲ. ಇಂತಹ ಸಮಸ್ಯೆಗಳನ್ನು ಪರಿಹರಿಸಿಕೊಂಡ ನಂತರ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣ ಜಮಾ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪಡಿತರ ಚೀಟಿಯಲ್ಲಿ ಮನೆಯ ಯಜಮಾನ ಇರುವುದನ್ನು ಬದಲಾಯಿಸಿ, ಮಹಿಳೆಯನ್ನು ಯಜಮಾನಿಯನ್ನಾಗಿ ತಿದ್ದುಪಡಿ ಮಾಡಿಸಿಕೊಂಡಿರುವ ಮಹಿಳೆಯರಿಗೂ ಸೌಲಭ್ಯ ದೊರೆಕಿಲ್ಲ. ಅಂತಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಿದ ತಿಂಗಳಿಂದಲೇ ಧನಸಹಾಯ ಪಾವತಿ ಮಾಡಲಾಗುತ್ತಿದೆ ಎಂದು ಹೆಬ್ಬಾಳಕರ್ ಉತ್ತರಿಸಿದ್ದಾರೆ.
ಯಾವ ಯಾವ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲಿದೆ?
ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆದಿರುವ ಮಹಿಳೆಯರ ಖಾತೆಗೆ ಯೋಜನೆಯ ಹಣ ಜಮೆಯಾಗಲಿದೆ. ಹೌದು, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯ ಖಾತೆಗೆ ಹಣ ಜಮೆಯಾಗಲಿದೆ. ಅಂದರೆ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಮಹಿಳಾ ಕುಟುಂಬದ ಮುಖ್ಯಸ್ಥರ ಖಾತೆಗೆ ಹಣ ಜಮೆಯಾಗಲಿದೆ.
ಇದನ್ನೂ ಓದಿ : Bargala parihara hana jame 2024 ಯಾರಿಗೆ ಎಷ್ಟು ಜಮೆ? ಚೆಕ್ ಮಾಡಿ
ರೇಶನ್ ಕಾರ್ಡ್ ನಲ್ಲಿ ಮಹಿಳೆಯೇ ಕುಟುಂಬದ ಮುಖ್ಯಸ್ಥರೆಂದು ನಮೂದಾಗಿರಬೇಕು. ಆಗ ಮಾತ್ರ ಅವರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲಿದೆ.
Gruhalakshmi amount credited ಗೃಹಲಕ್ಷ್ಮೀ ಯೋಜನೆಯ ಎಷ್ಟು ಕಂತುಗಳು ಜಮೆಯಾಗಿವೆ?
ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ಇಲ್ಲಿಯವರೆಗೆ ಐದು ಕಂತುಗಳು ಜಮೆಯಾಗಿವೆ. ನೋಂದಣಿ ಮಾಡಿಸಿದ ನಂತರ ಆರಂಭದಲ್ಲಿ ಒಂದೆರಡು ಕಂತುಗಳು ಜಮೆಯಾಗದ ಮಹಿಳೆಯರ ಖಾತೆಗೆ ನಂತರ ಉಳಿದ ಕಂತಿನಲ್ಲಿ ಹಣ ಜಮೆಯಾಗಿದೆ.
Gruhalakshmi amount credited ನಿಮಗೆಷ್ಟು ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆ? ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯರ ಖಾತೆಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನ ಚೆಕ್ ಮಾಡಲು ಈ
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
ಸ್ಟೇಪ್ 2
ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಪೇಜ್ ತೆರೆದುಕೊಂಡ ನಂತರ ಪೇಜ್ ನಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು.
ಸ್ಟೇಪ್ 3
ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದು ಕಾಣಿಸುತ್ತದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಎಂಬ ಮಾಹಿತಿಯೂ ಕಾಣಿಸುತ್ತದೆ. ಇದರೊಂದಿಗೆ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು.
ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಗೃಹಲಕ್ಷ್ಮೀ ಯೋಜನೆಯ ಮುಂದಿನ ಕಂತು ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿಸುತ್ತಿದ್ದರೂ ಸಹ ಅವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವುದಿಲ್ಲ.