Gruhalakshmi amount credited today ಮಹಿಳೆಯರ ಖಾತೆಗೆ ಇಂದು ಜಮೆಯಾಯಿತು ಗೃಹಲಕ್ಷ್ಮೀ ಹಣ 2025

Written by Admin

Updated on:

Spread the love

Gruhalakshmi amount credited today : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್. ಹೌದು, , ಇಂದು ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಯಾಗಿದೆ. ಯಾವ ಯಾವ ಮಹಿಳೆಯರ ಖಾತೆಗೆ ಜಮೆಯಾಗಿದೆ? ಯಾವ ಜಿಲ್ಲೆಯ ಮಹಿಳೆಯರಖಾತೆಗೆ ಹಣ ಜಮೆಯಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

ಮೂರು ಕಂತಿನ ಪೆಂಡಿಂಗ್ ಹಣವನ್ನು ಇದೇ ಮೇ ತಿಂಗಳಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ಈಗಾಗಲೇಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದರು. ಮೇ ತಿಂಗಳ ಮೊದಲ ವಾರದಿಂದ ಜಮೆ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಎರಡು ವಾರ ತಡವಾದರೂ ಹಣ ಜಮೆಯಾಗಿದ್ದಕ್ಕೆ ಮಹಿಳೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಸೋಮವಾರ ಕಲಬುರಗಿ ಜಿಲ್ಲೆಯ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆ. ಅತೀ ಶೀಘ್ರದಲ್ಲಿ ಇತರ ಜಿಲ್ಲೆಯ ಮಹಿಳೆಯರ ಖಾತೆಗೂ ಹಣ ಜಮೆಯಾಗಲಿದೆ. ಹಾಗಾಗಿ ಮಹಿಳೆಯರು ಆತಂಕಪಡಬೇಕಿಲ್ಲ. ಅತೀ ಶೀಘ್ರದಲ್ಲಿಉಳಿದ ಕಂತಿನ ಹಣವೂ ಜಮೆಯಾಗಲಿದೆ.

ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಈಗ ಕೆಲವು ಕಾರಣಗಳಿಂದ ಪ್ರತಿ ತಿಂಗಳು ಜಮೆಯಾಗುತ್ತಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ತಡವಾಗುತ್ತಿರುವ ಹಣವನ್ನು ಮೇ ತಿಂಗಳಿನಲ್ಲಿ  ಉಳಿದ ಮೂರು ಕಂತಿನ ಹಣವನ್ನು ಜಮೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.

Gruhalakshmi amount credited today ಡಿಬಿಟಿ ಆ್ಯಪ್ ನಲ್ಲಿ ಸಿಗಲಿದೆ ಗೃಹಲಕ್ಷ್ಮೀ ಹಣ ಜಮೆ

ಸರ್ಕಾರದ ವಿವಿಧ ಯೋಜನೆಗಳಿಂದ ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ

DBT Karnataka  ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು.  ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ  ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.

Gruhalakshmi amount credited today ಗೃಹಲಕ್ಷ್ಮೀ ಫಲಾನುಭವಿಗಳ ಅರ್ಹತೆ

ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯಲು ಯಾರು ಯಾರು ಅರ್ಹತೆ ಪಡೆದಿದ್ದಾರೆ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲು  ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಹೊಂದಿರಬೇಕು.  ಈ ರೇಶನ್ ಕಾರ್ಡ್ ನಲ್ಲಿ  ಮಹಿಳೆಯ ಹೆಸರು ಕುಟುಂಬದ ಯಜಮಾನಿ ಎಂದು ಬರೆದಿರಬೇಕು.

ಇದನ್ನೂ ಓದಿ :  Monsoon rain 2025 ರೈತರಿಗೆ ಗುಡ್ ನ್ಯೂಸ್ ಮೇ 27 ಮುಂಗಾರು ಪ್ರವೇಶ

ತಮಗೆಲ್ಲಾ ಗೊತ್ತಿದ್ದ ಹಾಗೆ  ಯುಗಾದಿ ಹಬ್ಬದ ಮರುದಿನ ಜನವರಿ ತಿಂಗಳ ಹಣ ಫಲಾನಭವಿಗಳ ಖಾತೆಗೆ ಜಮೆಯಾಗಿತ್ತು. ಈಗ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಒಟ್ಟಿಗೆ ಜಮೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ

ಗೃಹಲಕ್ಷ್ಮೀ  ಗ್ಯಾರೆಂಟಿ ಹಣವನ್ನು ಪಾವತಿ ಮಾಡದೆ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡ ಬಗ್ಗೆ ಹಲವಾರು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ರಾಜ್ಯ ಸರ್ಕಾರ ಈಗ ಹಂತ ಹಂತವಾಗಿ ಗ್ಯಾರೆಂಟಿ ಯೋಜನೆಯ ಹಣ ಬಿಡುಗಡೆ ಮಾಡಲು ಮುಂದಾಗಿದೆ.

Leave a Comment