Gruhalakshmi and annbhagya amount credit ಇವರ ಖಾತೆಗೆ ಅನ್ನಭಾಗ್ಯ ಗೃಹಲಕ್ಷ್ಮೀಹಣ ಜಮೆ ಸಿದ್ದರಾಮಯ್ಯ 2025

Written by Admin

Published on:

Spread the love

Gruhalakshmi and annbhagya amount credit: ಮಹಿಳೆಯರಿಗೆ ಮಾಸಿಕ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಗೆ ನೀಡಲಾಗುವ ಅನುದಾನ ಬಿಡುಗಡೆ ವಿಳಂಬವಾಗಿದ್ದರೆ ಪರಿಶೀಲಿಸಿ ಕೂಡಲೇ ಹಣ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Gruhalakshmi and annbhagya amount credit ಯಾವಾಗ ಹಣ ಬಿಡುಗಡೆ

ಗೃಹಲಕ್ಷ್ಮೀ, ಅನ್ನಭಾಗ್ಯ ಹಣ ಬಿಡುಗಡೆ ವಿಳಂಬದ ಕುರಿತು ಪ್ರತಿಕ್ರಿಯಿಸಿದ ಅವರು, ಹಣ ಬಿಡುಗಡೆ ವಿಳಂಬವಾಗಿದೆ ಎಂದು ಯಾರು ಹೇಳಿದರು? ಆ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ಪರಿಶೀಲಿಸಿ ವಿಳಂಬವಾಗಿದ್ದರೆ ಕೂಡಲೇ ಹಣ ಬಿಡುಗಡೆ ಮಾಡುತ್ತೇವೆ. ಯಾವ ಗ್ಯಾರೆಂಟಿ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಇಲ್ಲಿಯವರೆಗೆ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ ಎಂದು ಹೇಳಿದರು.

DBT Karnataka  ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು.  ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

Gruhalakshmi and annbhagya amount credit

Gruhalakshmi and annbhagya amount credit ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ  ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.

Gruhalakshmi and annbhagya amount credit ಕೇಂದ್ರ ಸರ್ಕಾರದಿಂದ ಕೆಜಿಗೆ 22.50 ರೂಪಾಯಿ ಅಕ್ಕಿ ದರ

ಕೇಂದ್ರ ಸರ್ಕಾರ ಭಾರತೀಯ ಆಹಾರ ನಿಗಮದ (ಎಫ್.ಸಿ.ಐ) ಮೂಲಕ ರಾಜ್ಯ ಸರ್ಕಾರಗಳಿಗೆ ಸರ್ಕಾರದ ಅಧೀನದ ನಿಗಮಗಳಿಗೆಪ್ರತಿ ಕೆಜಿ ಅಕ್ಕಿಗೆ ಕೇವಲ 22.50 ರೂಪಾಯಿಗಳಂತೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

2024ರ ಜೂನ್ ನಿಂದ ಡಿಸೆಂಬರ್ ವರೆಗೆ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದ ಪರಿಣಾಮ ಅಕ್ಕಿ, ಗೋಧಿ ಉತ್ಪಾದನೆ ಹೆಚ್ಚಳವಾಗಿದ್ದು, ದೇಶಾದ್ಯಂತ 556 ಲಕ್ಷ ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಇದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಪ್ರತಿ ಕೆಜಿಗೆ 5.50 ರೂಪಾಯಿ ಕಡಿಮೆ ದರದಲ್ಲಿ(ಕಳೆದ ಬಾರಿ ಕೆಜಿ ಅಕ್ಕಿಗೆ28 ರೂಪಾಯಿಗಳಂತೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಮಾರಾಟ) ಹೊಸ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಿದೆ.

ಇದನ್ನೂ ಓದಿ Pm kisan new list ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ 2024

ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಇ ಹರಾಜು ಮೂಲಕ ವ್ಯಾಪಾರಿಗಳು ತಯಾರಕರು ಮತ್ತುಚಿಲ್ಲರೆ ವ್ಯಾಪಾರಿಗಳು ಸೇರಿ ಖಾಸಗಿಯವರೂ ಒಂದು ಟನ್ ನಿಂದ 5 ಸಾವಿರ ಟನ್ ವರೆಗೆ ಖರೀದಿಸಲು ಅವಕಾಶ ನೀಡಿದೆ.

Gruhalakshmi and annbhagya amount credit ಹರಾಜು ಇಲ್ಲದೆ ಮಾರಾಟ

ಕಮ್ಯೂನಿಟಿ ಕಿಚನ್ಸ್ ಗೆ ಪ್ರತಿ ಕೆಜಿ ಅಕ್ಕಿಯನ್ನು 22.50 ರೂಪಾಯಿ ನಂತೆ ಮಾರಾಟ ಮಾಡಿದರೆ, ಕೇಂದ್ರ ಸಹಕಾರಿ ಸಂಸ್ಥೆಗಳಾದ ನೆಡ್, ಎನ್.ಸಿಸಿಎಫ್, ಕೇಂದ್ರೀಯ ಭಂಡಾರ್ ಗಳಿಗೆ ಕೆಜಿ ಅಕ್ಕಿಗೆ 24 ರೂಪಾಯಿನಂತೆ ಮಾರಾಟ ಮಾಡಲಾಗುತ್ತಿದೆ. ಸಣ್ಣ ಖಾಸಗಿ ವ್ಯಾಪಾರಗಳಿಗೆ, ಉದ್ಯಮಿಗಳಿಗೆ, ವ್ಯಕ್ತಿಗಳಿಗೆ ಪ್ರತಿ ಕೆಜಿಗೆ 28 ರೂಪಾಯಿಯಂತೆ ಮಾರಾಟ ಮಾಡುತ್ತಿದ್ದು, ಖಾಸಗಿವ್ಯಕ್ತಿ, ಸಹಕಾರ ಸಂಸ್ಥೆಗಳಿಗೆ ಸಹಕಾರ ಒಕ್ಕೂಟಗಳಿಗೆ ಇ- ಹರಾಜಿನಮೂಲಕ ಕೆಜಿಗೆ 28 ರೂಪಾಯಿಯಂತೆ ಮಾರಾಟ ಮಾಡಲು ಸೂಚನೆ ನೀಡಲಾಗಿದೆ.

ಅಕ್ಕಿ ಕೊರತೆಯಿರುವ ಪ್ರದೇಶಗಳಲ್ಲಿ ಇ ಹರಾಜು ಇಲ್ಲವೇ ನೇರವಾಗಿ ಮಾರಾಟ ಮಾಡಲು ಆದೇಶಿಸಲಾಗಿದೆ ಎಂದು ಎಫ್.ಸಿಐ ಮೂಲಗಳು ತಿಳಿಸಿವೆ. ಹಣ ಜಮೆ ಮಾಡುವಾಾಗಲೇ ಗೊತ್ತಾಗುವುದು.

Leave a Comment