Gruhalakshmi eligible non eligible list : ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ.
ಹೌದು ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಐದು ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ.
ಯಾವ ಯಾವ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಹಣ ಜಮೆಯಾಗಲಿದೆ? ಯಾರು ಈ ಯೋಜನೆಯ ಅರ್ಹತೆ ಪಡೆದಿದ್ದಾರೆ? ಈ ಯೋಜನೆಯ ಹಣ ಯಾವ ಯಾವ ಮಹಿಳೆಯರಿಗೆ ಜಮೆಯಾಗಿದೆ ಎಂಬುದನ್ನು ಫಲಾನುಭವಿಗಳು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ತಮ್ಮಬಳಿಯಿರುವ ಮೊಬೈಲ್ ನಲ್ಲೇ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ ಮಾಹಿತಿ.
ಗೃಹಲಕ್ಷ್ಮೀ ಯೋಜನೆಯ ಸ್ಟೇಸ್ ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಸ್ಟೇಟಸ್ ಚೆಕ್ ಮಾಡಲು ಈ
https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
Gruhalakshmi eligible non eligible list ಗೃಹಲಕ್ಷ್ಮೀ ಯೋಜನೆಗೆ ಯಾವ ಯಾವ ಮಹಿಳೆಯರು ಅರ್ಹತೆ ಪಡೆದಿದ್ದಾರೆ?
ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆಯಲು ಮಹಿಳೆಯು ಕರ್ನಾಟಕದ ನಿವಾಸಿಯಾಗಿರಬೇಕು. ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರಬೇಕು.ಈ ಕಾರ್ಡ್ ನಲ್ಲಿ ಮಹಿಳೆಯ ಹೆಸರು ಕುಟುಂಬದ ಮುಖ್ಯಸ್ಥರೆಂದು ನಮೂದಾಗಿರಬೇಕು.
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದರೂ ನಿಮಗೇಕೆ ಹಣ ಜಮೆಯಾಗುತ್ತಿಲ್ಲ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದರೂ ಕೆಲವರಿಗೆಯೋಜನೆ ಹಣ ಜಮೆಯಾಗುತ್ತಿಲ್ಲ. ಏಕೆಂದರೆ ಅರ್ಜಿ ಸಲ್ಲಿಸುವಾಗ ನೀವು ನಮೂದಿಸಿದ ಹೆಸರು ಪತಿಯ ಹೆಸರು ಆಧಾರ್ ಕಾರ್ಡ್, ರೇಶನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಲ್ಲಿ ಹೋಲಿಕೆಯಾಗುತ್ತಿರಲಿಕ್ಕಿಲ್ಲ. ಹಾಗಾಗಿ ನಿಮಗೆ ಆಗಸ್ಟ್ ತಿಂಗಳಲ್ಲಿ ಹಣ ಜಮೆಯಾಗಿರಿಲಿಕ್ಕಿಲ್ಲ.
Gruhalakshmi eligible non eligible list ಗೃಹಲಕ್ಷ್ಮೀ ಯೋಜನೆಯ ನಿಯಮಗಳು ಹಾಗೂ ಷರತ್ತುಗಳು
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಮಹಿಳಾ ಯಜಮಾನಿಯ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಹೌದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
ಇದನ್ನೂ ಓದಿ : Annabhagya yojaneya status – 2024 ಮೊಬೈಲ್ ನಲ್ಲೇ ಚೆಕ್ ಮಾಡಿ
ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯವಾಗುತ್ತದೆ. ಫಲಾನುಭವಿಯು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರಬೇಕು. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯು ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಿರಬೇಕು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಒಂದು ವೇಳೆ ಆದಾಯ ತೆರಿಗೆ ಪಾವತಿರಾಗಿದ್ದಲ್ಲಿ ಆ ಮಹಿಳೆಯ 2 ಸಾವಿರ ರೂಪಾಯಿ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.ಏಕೆಂದರೆ ಆದಾಯಪಾವತಿ ದಾರರಾಗಿದ್ದಲ್ಲಿ ಆ ಮಹಿಳೆ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಪತಿ ಜಿಎಸ್ಟಿ ರಿಟರ್ನ್ಲ್ ಪಾವತಿದಾರರಾಗಿದ್ದರೂ ಆ ಮಹಿಳಾ ಯಜಮಾನಿಗೆ ಹಣ ಬರುವ ಸಾಧ್ಯತೆ ಕಡಿಮೆಯಿದೆ.
ಯಾವ ಉದ್ದೇಶಕ್ಕಾಗಿ ಈ ಯೋಜನೆ ಜಾರಿಗೆ ತರಲಾಗಿದೆ?
ಕುಟುಂಬ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಹಾಗಾಗಿ ಕುಟುಂಬದ ಯಜಮಾನಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ.