Gruhalakshmi helpline : ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ನಂತರ ನಿಮಗೆ ಯೋಜನೆಯ ಹಣ ಜಮೆಯಾಗುತ್ತಿಲ್ಲವೇ? ಯಾರಿಗೆ ಸಂಪರ್ಕಿಸಬೇಕೆಂದುಕೊಂಡಿದ್ದೀರಾ? ಇಲ್ಲಿ ಕೆಳಗೆ ನೀಡಲಾದ ಸಹಾಯವಾಣಿ ನಂಬರಿಗೆ ಕರೆ ಮಾಡಿ ವಿಚಾರಿಸಬಹುದು.ಯಾವ ಕಾರಣಕ್ಕಾಗಿ ಹಣ ಜಮೆಯಾಗಿಲ್ಲ ಎಂಬುದನ್ನು ತಿಳಿದುಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ ನೋಡಿ ಮಾಹಿತಿ.
ಕರ್ನಾಟಕ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಕುಂದುಕೊರತೆ ವಿಚಾರಿಸಲು ಸೋಮವಾರಪೇಟೆ ತಾಲೂಕಿಗೆ ಸಂಬಂಧಿಸಿದ ಫಲಾನುಭವಿಗಳು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿ ಸೋಮವಾರಪೇಟೆ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ಕುಶಾಲನಗರ ತಾಲೂಕಿಗೆ ಸಂಬಂಧಿಸಿದಂತೆ ಫಲಾನುಭವಿಗಳು ಪ್ರತಿ ಮಂಗಳವಾರ ಕಾರ್ಯ ನಿರ್ವಹಣಾಧಿಕಾರಿ ಅವರ ಕಚೇರಿ, ಮುಳ್ಳುಸೋಗೆ ಗ್ರಾಮ ಪಂಚಾಯತಿ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ಇದನ್ನೂ ಓದಿ : Pm kisan date announced ಪಿಎಂ ಕಿಸಾನ್ 19ನೇ ಕಂತು ಈ ದಿನ ಜಮೆ
ಹೊಸದಾಗಿ ಪಡಿತರ ಚೀಟಿಯನ್ನು ಪಡೆದವರು ಹತ್ತಿರದ ಗ್ರಾಮಒನ್ ಸೆಂಟರಗಳಿಗೆ ತೆರಳಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
Gruhalakshmi helpline ಗೃಹಲಕ್ಷ್ಮೀ ಸಹಾಯವಾಣಿ ನಂಬರಿಗೆ ಕರೆ ಮಾಡಿ
ದೂರವಾಣಿ ಸಂಖ್ಯೆ 08276 282281, 08276200023 ಗೆ ಸಂಪರ್ಕಿಸಬಹುದು ಎಂದು ಸೋಮವಾರಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
Gruhalakshmi helpline ಯಾವ ಉದ್ದೇಶಕ್ಕಾಗಿ ಈ ಯೋಜನೆ ಜಾರಿಗೆ ತರಲಾಗಿದೆ?
ಕುಟುಂಬ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಹಾಗಾಗಿ ಕುಟುಂಬದ ಯಜಮಾನಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ.
Gruhalakshmi helpline ಗೃಹಲಕ್ಷ್ಮೀ ಯೋಜನೆಗೆ ಯಾರು ಯಾರು ಅರ್ಹರಿದ್ದಾರೆ?
ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಕಾಂಗ್ರೆಸ್ ಗೃಹಲಕ್ಷ್ಮೀ ಯೋಜನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿರುವಂತಹ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತದೆ. ಒಂದು ವೇಳೆ ರೇಶನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿಎಂದು ನಮೂದಾಗಿಲ್ಲವಾದರೆ ಆ ಮಹಿಳೆ ಎಲ್ಲಾ ಅರ್ಹತೆ ಪಡೆದಿದ್ದರೂ ಸಹ ಅವರಿಗೆ ಜಮೆಯಾಗಲ್ಲ. ಹಾಗಾಗಿ ತಮ್ಮ ಅಗತ್ಯ ದಾಖಲೆಗಳನ್ನು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಲ್ಲಿಸಬಹುದು.
Gruhalakshmi helpline ಗೃಹಲಕ್ಷ್ಮೀ ಯೋಜನೆಗೆ ಯಾರು ಅನರ್ಹರಾಗಿದ್ದಾರೆ?
ಗೃಹಲಕ್ಷ್ಮೀ ಯೋಜನೆಗೆ ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಅರ್ಹರಾಗಿರುವುದಿಲ್ಲ ಎನ್ನಲಾಗುತ್ತಿದೆ. ಆದರೆ ಈ ಕುರಿತು ಸರ್ಕಾರ ಅದಿಸೂಚನೆಯಲ್ಲಿ ತಿಳಿಸಿಲ್ಲ. ಆದಾಯ ತೆರಿಗೆ ಪಾವತಿ ಮಾಡುವವರ ಕುಟುಂಬದವರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ, ಪೆನ್ಶನ್ ಪಡೆಯುವವರಿಗೆ ಯೋಜನೆಯ ಲಾಭ ಸಿಗುವುದಿಲ್ಲ.
ಜಿಎಸ್.ಟಿ ಪಾವತಿ ಮಾಡುತ್ತಿರುವ ಮಹಿಳೆಯರಿಗೆ ಯೋಜನೆಯ ಲಾಭ ಸಿಗುವುದಿಲ್ಲ. ವೃತ್ತಿ ತೆರಿಗೆ ಪಾವತಿ ಮಾಡುವವರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ.
Gruhalakshmi helpline ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆಷ್ಟು ಕಂತುಗಳು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ಇಲ್ಲಿಯವರೆಗೆನಿಮ್ಮ ಖಾತೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://mahitikanaja.karnataka.gov.in/home
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮಗೆ ತೆರೆದುಕೊಳ್ಳುವ ಪೇಜ್ ನಲ್ಲಿ Guaranteed schemes ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.
ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.