Gruhalakshmi money : ಕರ್ನಾಟಕ ಮಹಿಳೆಯರಿಗಿಲ್ಲಿದೆ ಗುಡ್ ನ್ಯೂಸ್. ಹೌದು, ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯರಿಗೆ ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ರಾಜ್ಯದ ಮಹಿಳೆಯರಿಗಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿಯಲ್ಲಿ ಈಗಾಗಲೇ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಜಮೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಇಲ್ಲಿ ಚೆಕ್ ಮಾಡಿ.
Gruhalakshmi money ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯರಿಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಮಾಹಿತಿ ಕಣಜದ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು.
ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ಗೃಹಲಕ್ಷ್ಮೀ ಯೋಜನೆಗೆ ನಿಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಹಾಗೂ ಯಾವ ದಿನಾಂಕದಂದು ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಕಂತುಗಳು ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಫಲಾನುಭವಿಗಳು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
Gruhalakshmi money ಗೃಹಲಕ್ಷ್ಮೀ ಯೋಜನೆಯನ್ನು ಏಕೆ ಜಾರಿಗೆ ತರಲಾಯಿತು?
ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಆರಂಭಿಸಲಾಗಿದೆ. ಹೌದು, ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಅವರ ಖಾತೆಗೆ ಜಮೆ ಮಾಡಿದರೆ ಅವರು ಆ ಹಣವನ್ನು ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿ ತಿಂಗಳು ನೀಡುವ ಹಣವನ್ನು ಮಹಿಳೆಯರು ಮನೆಗೆ ಬೇಕಾಗುವ ದಿನಿನಿತ್ಯ ವಸ್ತುಗಳನ್ನು ಖರೀದಿ ಮಾಡಿಕೊಳ್ಳಬಹುದು. ಪುರುಷರಿಗೆ ಹಣ ನೀಡಿದೆ ಮನೆಗೆ ಸದುಪಯೋಗವಾಗುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಈ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಇದನ್ನೂ ಓದಿ : Bara parihara status 2024 ಯಾವ ಬೆಳೆಗೆ ಎಷ್ಟು ಬರ ಪರಿಹಾರ ಇಲ್ಲಿದೆ ಮಾಹಿತಿ
ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಆರಂಭಿಸಿದಾಗಿನಿಂದ ಇಲ್ಲಿಯವರೆಗೆ ಮಹಿಳಾ ಫಲಾನುಭವಿಗಳ ಖಾತೆಗೆ 8 ಕಂತುಗಳು ಜಮೆಯಾಗಿವೆ. ತಡವಾಗಿ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯರ ಖಾತೆಗೂ ಹಣ ಜಮೆ ಮಾಡಲಾಗುತ್ತಿದೆ. ಆ ಮಹಿಳೆಯರ ಖಾತೆಗೂ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಒಟ್ಟಿನಲ್ಲಿ ಮಹಿಳೆಯರು ಯಾವ ತಿಂಗಳಲ್ಲಿ ನೋಂದಣಿ ಮಾಡಿಸಿದ್ದಾರೋ ಆ ನಂತರದ ತಿಂಗಳಿಂದ ಅವರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಹಾಗಾಗಿ ನಿಮಗೆ ಇಲ್ಲಿಯವರೆಗೆ ಯಾವ ಯಾವ ತಿಂಗಳು ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಮಾಡಲಾಗಿದೆ ಎಂಬುದನ್ನು ಚೆಕ್ ಮಾಡಬಹುದು.
Gruhalakshmi money ಯಾವ ಯಾವ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯರ ಖಾತೆಗೆ ಹಣ ಜಮೆ ಮಾಡಲಾಗುವುದು.