Guarantee scheme : ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಪಂಚ ಯೋಜನೆಗಳ ಅಂದರೆ ಗ್ಯಾರೆಂಟಿ ಯೋಜನೆಗಳಿಂದ ನಿಮಗೆ ಹಣ ಜಮೆಯಾಗುತ್ತಿಲ್ಲವೇ? ಎಲ್ಲಾ ಅರ್ಹತೆ ಹೊಂದಿದ್ದರೂ ಸಹ ನಿಮಗೆ ಗ್ಯಾರೆಂಟಿ ಯೋಜನೆಗಳಿಂದ ಹಣ ಜಮೆಯಾಗುತ್ತಿಲ್ಲವಾದರೆ ಕೂಡಲೇ ನೀವು ಕೆಳಗೆ ನೀಡಲಾದ ಸಹಾಯವಾಣಿ ನಂಬರಿಗೆ ಕರೆ ಮಾಡಿ ದೂರು ನೀಡಬಹುದು.
ಹಾಗಾದರೆ ಗ್ಯಾರೆಂಟಿ ಯೋಜನೆಯ ಸಹಾಯವಾಣಿ ನಂಬರ್ ಯಾವುದು? ಯಾವಾಗ ಕರೆ ಮಾಡಬೇಕು? ಕರೆ ಮಾಡಿದ ನಂತರ ಏನು ಮಾಡಲಾಗುವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Guarantee scheme : ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ದೂರುಗಳನ್ನು ಸಲ್ಲಿಸಲು ಸಹಾಯವಾಣಿ ಆರಂಭಿಸಲಾಗಿದೆ ಎಂದು ಬಿಬಿಎಂಪಿ ವ್ಯಾಪ್ತಿಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿನ ಜನರಿಗೆ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಕೆಗೆ ಸಹಾಯವಾಣಿ ಸಂಖ್ಯೆ ಆರಂಭಿಸಲಾಗುತ್ತಿದೆ. ಕಚೇರಿ ಅವಧಿಯಲ್ಲಿ 94806 83972 ಗೆ ಕರೆ ಮಾಡಿ ಸಮಸ್ಯೆ ದಾಖಲಿಸಬಹುದಾಗಿದೆ.
ಇದನ್ನೂ ಓದಿ : PM kisan list released ಪಿಎಂ ಕಿಸಾನ್ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ 2024
ಸಂಬಂಧಪಟ್ಟ ಅಧಿಕಾರಿಗೆ ಈ ಬಗ್ಗೆ ಮಾಹಿತಿ ನೀಡಿ ಪರಿಹಾರ ಮಾಡುವ ಕೆಲಸವನ್ನು ಮಾಡಲಾಗುವುದು ಎಂದು ತಿಳಿಸಿದರು.
ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಾರ್ವಜನಿಕರಿಂದ ಯಾವುದೇ ಅಹವಾಲು ಅಥವಾ ದೂರು ಬಂದರೆ ತಕ್ಷಣ ಸಂಬಂಧಪಟ್ಟಇಲಾಖೆಯ ನೋಡಲ್ ಅಧಿಕಾರಿಗಳಇಗೆ ಮಾಹಿತಿ ನೀಡಿ, ಕುಂದು ಕೊರತೆಗಳನ್ನು ಪರಿಶೀಲಿಸಿ ಯಾವುದೇ ಅರ್ಹ ಫಲಾನುಭವಿಗಳು ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮವಹಿಸಲು ಸೂಚಿಸಿದರು.
Guarantee scheme ಗೃಹಲಕ್ಷ್ಮೀ ಯೋಜನೆಯ ಅರ್ಹರು ಯಾರು ಎಂಬುದನ್ನು ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದವರೆಲ್ಲರಿಗೂ ಯೋಜನೆಯ ಹಣ ಜಮೆಯಾಗುವುದಿಲ್ಲ. ಈ ಪಟ್ಟಿಯಲ್ಲಿ ತಮ್ಮ ಹೆಸರಿದ್ದರೆ ಮಾತ್ರ ನಿಮಗೆ ಹಣ ಜಮೆಯಾಗುತ್ತದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಹಳ್ಳಿಪಟ್ಟಿ (village list) ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಜಿಲ್ಲೆಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.
ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪಡಿತರ ಚೀಟಿಯಲ್ಲಿ ಹೊಂದಿರುವವರ ಪಟ್ಟಿ ಕಾಣಿಸುತ್ತದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಹಾಗೂ ಪಡಿತರ ಲೀಸ್ಟ್ ನಲ್ಲಿ ಮಹಿಳೆಯ ಹೆಸರು ಮೊದಲು ಅಂದರೆ ಕುಟುಂಬದ ಯಜಮಾನಿ ಎಂದು ನಮೂದಾಗಿದ್ದರೆ ಅವರು ಗೃಹಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದಾರೆಂದರ್ಥ.
Guarantee scheme ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?
ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಇ ರೇಶನ್ ಕಾರ್ಡ್ ಮೇಲೆ ಕ್ಲಿಕ್ ಮಾಡಿ ಶೋ ವಿಲೇಜ್ ಲಿಸ್ಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್, ಗ್ರಾಮ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ರೇಶನ್ ಕಾರ್ಡ್ ಹೊಂದಿರುವವ ಪಟ್ಟಿಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು ಇರಬೇಕು.ಹಾಗೂ ಬಿಪಿಎಲ್ ಕಾರ್ಡ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಬಿಪಿಎಲ್ ಕಾರ್ಡ್ ಇದ್ದರೆ ಮಾತ್ರ ನಿಮಗೆ ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗುವುದು. ಇಲ್ಲದಿದ್ದರೆ ಜಮೆಯಾಗುವುದಿಲ್ಲ.