Heavy rain ಇಂದಿನಿಂದ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

Written by Admin

Updated on:

Spread the love

Heavy rain alert ರಾಜ್ಯದ ಮಲೆನಾಡು,ಕರಾವಳಿಹಾಗೂ ಉತ್ತರ ಒಳನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು,ಶುಕ್ರವಾರ ನಾಲ್ಕು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಹಾಗೂ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಅದೇ ರೀತಿ ಯಾದಗಿರಿ, ರಾಯಚೂರು, ಗದಗ, ಬಳ್ಳಾರಿ, ಕೊಪ್ಪಳ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಕೊಡಗು, ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕೊಡಗು, ಮೈಸೂರು, ಹಾಸನ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶನಿವಾರ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗಲು ವೇಳೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.ಸಂಜೆ ಅಥವಾ ರಾತ್ರಿ ವೇಳೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

Heavy rain alert ರೈತರು ಮೇಘದೂತ್ ಆ್ಯಪ್  ಇನಸ್ಟಾಲ್ ಮಾಡಿಕೊಳ್ಳುವುದು ಹೇಗೆ?

ಮೇಘದೂತ್ ಆ್ಯಪ್ ಮೊಬೈಲ್ ನಲ್ಲೇ ಇನಸ್ಟಾಲ್ ಮಾಡಲು ತಮ್ಮ ಫೋನ್ ನಲ್ಲಿರು ಗೂಗುಲ್ ಪ್ಲೇ ಸ್ಟೋರ್ ನಲ್ಲಿ Meghdoot ಎಂದು ಟೈಪ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ನಿಮಗೆ ಕಾಣಿಸುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಳ್ಳಬಹುದು. ಅಥವಾ ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ಈ ಆ್ಯಪ್ ಕನ್ನಡದಲ್ಲಿಯೂ ಲಭ್ಯವಿರುವುದರಿಂದ ನೀವು ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

Heavy rain alert ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಮಾಹಿತಿ ಬೇಕೆ? ಈ ನಂಬರಿಗೆ ಕರೆ ಮಾಡಿ

ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ಕೇಳಲು ಸಾರ್ವಜನಿಕರು 92433 45433 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, ರೈತರು ಈ ನಂಬರಿಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನ ಸುತ್ತಮುತ್ತಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ನಿಮಗೆ ಸಿಗುತ್ತದೆ. ಈ ಉಚಿತ ಸಹಾಯವಾಣಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ.

Heavy rain red alert

Heavy rain alert ಸಿಡಿಲು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಸಿಡಿಲು ಎಂಬ ಆ್ಯಪ್ ನ್ನು ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಳ್ಳಲು ಈ

https://play.google.com/store/apps/details?id=com.moserptech.sidilu&hl=en&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು  ಅಲ್ಲಿ ಕಾಣುವ install ಮೇಲೆ ಕ್ಲಿಕ್ ಮಾಡಬೇಕು.ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. Allow Sidilu to access this devices location  ಕೆಳಕಡೆ While using the App ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಇದ್ದ ಸ್ಥಳದ ಸುತ್ತಮುತ್ತ ಎಲ್ಲಲ್ಲಿ ಸಿಡಿಲು ಬಡಿಯುವ ಸಾಧ್ಯತೆಯಿದೆ ಎಂಬು ಕಾಣಿಸುತ್ತದೆ.

ಇದನ್ನೂ ಓದಿ Land Tippani ನಿಮ್ಮ ಜಮೀನಿನ ಹಳೆಯ ಟಿಪ್ಪಣಿ ಮೊಬೈಲ್ ನಲ್ಲಿ ಹೀಗೆ ಡೌನ್ಲೋಡ್ ಮಾಡಿ 2024

ಒಂದು ವೇಳೆ ನಿಮ್ಮ ಸುತ್ತಮುತ್ತ ಸಿಡಿಲು ಬಡಿಯುವ ಸಾಧ್ಯತೆಯಿಲ್ಲದಿದ್ದಲ್ಲಿ No lightning activity in your area  ಎಂಬ ಮೆಸೇಜ್ ಗೋಚರಿಸುತ್ತದೆ. ನೀವು ಇದ್ದ ಸ್ಥಳ ತೋರಿಸಲಾಗಿರುತ್ತದೆ. ನಿಮ್ಮ ಸುತ್ತಮುತ್ತ 1 ಕಿ.ಮೀ ದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಸಿಡುಲು ಬೀಳುವ ಸಾಧ್ಯತೆಯಿದ್ದರೆ ಅಲ್ಲಿ ನಿಮಗೆ ಮೆಸೇಜ್ ಗೋಚರಿಸುತ್ತದೆ.

Thunder (ಗುಡುಗು) ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಇರುತ್ತದೆಯೋ ಇಲ್ಲವೋ ಎಂಬ ಮೆಸೆಜ್ ಗೋಚರಿಸುತ್ತದೆ.

Leave a Comment