heavy rain alert : ಭಾನುವಾರ ಹಾಗೂ ಸೋಮವಾರ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೇಂಜ್ ಅಲರ್ಟ್ ನೀಡಲಾಗಿದೆ. ಇದೇ ಜಿಲ್ಲೆಗಳಲ್ಲಿ ಸೋಮವಾರವು ಉತ್ತಮ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ಎಚ್ಚರಿಕೆ ನೀಡಲಾಗಿದೆ.
ಹೌದು, ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಮಳೆ ಚುರುಕುಗೊಂಡಿದ್ದು, ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ ವರೆಗೆ ಮಳೆಯಾಗುವ ಲಕ್ಷಣ ಇದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನು ಇಲಾಖೆ ಮುನ್ಸೂಚನೆ ನೀಡಿದೆ.
heavy rain alert ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ?
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಪ್ರೀಲ್ 22 ರಂದು ಸೋಮವಾರ ಸಹ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಮಗಳೂರು, ಯಾದಗಿರಿ, ಚಿತ್ರದುರ್ಗ, ಮಂಡ್ಯ, ಶಿವಮೊಗ್ಗ, ತುಮಕೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಗುಡುಗು ಸಿಡಿಲು, ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯಲ್ಲಿ ಗಾಳಿಯು 30 ರಿಂದ 40 ಕಿ. ಮೀ ವೇಗದಲ್ಲಿ ಬೀಸಲಿದೆ. ಉತ್ತರ ಒಳನಾಡಿನಲ್ಲಿ ಗಾಳಿಯು 50 ರಿಂದ 60 ಕಿ.ಮೀ ವೇಗದಲ್ಲಿ ಬೀಸಲಿದೆ.
heavy rain alert ಶನಿವಾರ ರಾಜ್ಯದ ವಿವಿಧೆಡೆ ಉತ್ತಮ ಮಳೆ
ಬಿರು ಬಿಸಿಲಿನ ನಡುವೆ ಕರಾವಳಿ, ಮಲೆನಾಡು ಸೇರಿ ರಾಜ್ಯದ15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರ ಸಹ ಉತ್ತಮ ಮಳೆಯಾಗಿದೆ. ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯದಲ್ಲಿ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ : Weather report ಐದು ದಿನ ಮೊದಲೇ ಮಳೆಯ ಮಾಹಿತಿ ಬೇಕೆ? ಇಲ್ಲಿದೆ ಮಾಹಿತಿ 2024
ಶನಿವಾರ ರಾಜ್ಯದ ದಾವಣಗೆರೆ, ಕಲಬುರಗಿ, ಗದಗ,ಹಾಸನ, ವಿಜಯನಗರ, ಬೆಂಗಳೂರು, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಕ್ಷೀಣ ಕನ್ನಡ, ಉಡುಪಿ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.
heavy rain alert ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ?
ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು, ನಿಮಗೆ ಹವಾಮಾನ ವರದಿ ಸಿಗುತ್ತದೆ. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ರೈತರು, ಸಾರ್ವಜನಿಕರು ಮನೆಯಿಂದಲೇ ಮಳೆಯ ಮಾಹಿತಿಯನ್ನು ಪಡೆದುಕೊಳ್ಳಬಹುದು. ಈ ಕರೆ ಸಂಪೂರ್ಣ ಉಚಿತವಾಗಿರುತ್ತದೆ. ಇದಕ್ಕಾಗಿ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.
heavy rain alert ಮಳೆಯ ಮಾಹಿತಿ ನೀಡಲು ಆ್ಯಪ್ ಗಳಿವೆ
ಹೌದು, ಮೂರ್ನಾಲ್ಕು ದಿನ ಮೊದಲೇ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ರಾಜ್ಯ ಕೇಂದ್ರ ಸರ್ಕಾರಗಳು ಆ್ಯಪ್ ನ್ನು ಅಭಿವೃದ್ಧಿಪಡಿಸಿದೆ. ಈ ಆ್ಯಪ್ ಸಹಾಯದಿಂದ ಸಾರ್ವಜನಿಕರು ಮಳೆಯ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ ಮಳೆಯ ಮಾಹಿತಿ ಪಡೆಯಿರಿ
ಮೇಘದೂತ್ ಎಂಬ ಆ್ಯಪ್ ನ್ನು ನೀವು ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಐದು ದಿನ ಮೊದಲು ನಿಮ್ಮ ಊರಿನ ಸುತ್ತಮುತ್ತ ಯಾವ ಪ್ರಮಾಣದಲ್ಲಿ ಮಳೆಯಾಗುತ್ತದೆ. ಗಾಳಿಯಾ ಯಾವ ದಿಕ್ಕಿನಿಂದ ಯಾವ ದಿಕ್ಕಿನ ಕಡೆ ಬೀಸುತ್ತದೆ? ಗಾಳಿಯ ವೇಗ ಎಷ್ಟಿದೆ ಎಂಬ ಮಾಹಿತಿಯೂ ಸಿಗುತ್ತದೆ? ನಿಮ್ಮ ಮೊಬೈಲ್ ನಲ್ಲಿ ಒಮ್ಮೆ ಆ್ಯಪ್ ಇನಸ್ಟಾಲ್ ಮಾಡಿಕೊಂಡರೆ ಸಾಕು, ನೀವು ಆಗಾಗ ಮಳೆಯ ಮಾಹಿತಿ ಪಡೆದುಕೊಳ್ಳಬಹುದು.