Heavy rain alert now ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

Written by Admin

Published on:

Spread the love

Heavy rain alert now : ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕೆಲವು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುವ ಅಂದರೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಅಥವಾ ಅತೀ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣೆ ಕೇಂದ್ರ ನೀಡಿರುವ ಮುನ್ಸೂಚನೆ ಪ್ರಕಾರ ಚಿಕ್ಕಗಳೂರು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದೆ

Heavy rain alert now ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಕೋಲಾರ, ಮಂಡ್ಯ, ಹಾಸನ, ಕೊಡಗು , ದಾವಣಗೆರೆ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ 24 ಗಂಟೆಗಳ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಗಂಟೆಗ 30-40 ಕಿ.ಮೀ ವೇಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Heavy rain alert now ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

Heavy rain alert now ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಇದನ್ನೂ ಓದಿ  Crop insurance calculation check now ಬೆಳೆ ವಿಮೆ ಹೆಕ್ಟೇರಿಗೆ ಎಷ್ಟು ಕಟ್ಟಿದರೆ ಎಷ್ಟು ಜಮೆಯಾಗುತ್ತದೆ ? ಇಲ್ಲೇ ಚೆಕ್ ಮಾಡಿ- 2026

ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ  ಪಡೆಯಬಹುದು.

Leave a Comment