Heavy rain red alert ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಶಾಲಾ ಕಾಲೇಜು ರಜೆ

Written by Admin

Published on:

Spread the love

Heavy rain red alert : ರಾಜ್ಯದ ಅರ್ಧದಷ್ಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಆತಂಕ ಸೃಷ್ಟಿಯಾಗುತ್ತಿದೆ. ಜೀವನದಿಗಳು ಅಪಾಯದ ಮಟ್ಟದತ್ತ ಸಾಗುತ್ತಿವೆ. ಜಲಾಶಯಗಳು ಭರ್ತಿಯಾಗುತ್ತಿವೆ. ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ.

ಇತ್ತ ಭಾರಿ ಮಳೆಯಿಂದಾಗಿ ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗುತ್ತಿರುವುದು ಸಂತಸದ ಸಂಗತಿಯಾದರೂ ಇದೇ ರೀತಿ ಮಳೆ ಮುಂದುವರೆದರೆ ಅಪಾಯ ತಪ್ಪಿದ್ದಲ್ಲ, ಒಂದೆಡೆ ಪ್ರವಾಹದ ಆಂತಕ ಮತ್ತೊಂದೆಡೆ ನಳನಳಿಸುತ್ತಿರುವ ರೈತರ ಬೆಳೆಗಳ ಹಾನಿಯ ಚಿಂತೆ ಎದುರಾಗಿದೆ.

ಕಳೆದ ವರ್ಷ ಮಳೆಯಿಲ್ಲದೆ ಬೆಳೆಗಳು ಹಾನಿಯಾಗಿದ್ದರಿಂದ ಬರಗಾಲ ಉಂಟಾಗಿತ್ತು.ಈ ವರ್ಷ ಅಪಾರ ಮಳೆಯಿಂದಾಗಿ ಅತೀವೃಷ್ಟಿಯ ಆತಂಕ ಉಂಟಾಗಿದೆ.

Heavy rain red alert ಯಾವ ಯಾವ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ?

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಚಾಮರಾಜನಗರ ಜಿಲ್ಲೆಗಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರಿ ಮಳೆಯಾಗುತ್ತಿದ್ದರಿಂದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ.

ಇದನ್ನೂ ಓದಿ Property documents ನಿಮ್ಮ ಆಸ್ತಿಗಳ ಫಾರ್ಮ್ 9 ಮತ್ತು 11ಬಿ ಮೊಬೈಲ್ ನಲ್ಲಿ ಹೀಗೆ ಡೌನ್ಲೋಡ್ ಮಾಡಿ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದರಿಂದ ಇಂದೂ ಸಹ ಈ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.  ಕರಾವಳಿ ಜಿಲ್ಲೆಗಳಲ್ಲಿ ಜುಲೈ 21 ಹಾಗೂ 22 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬೇಕು ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ಅಲ್ಲಿ ನಿಮಗೆ ಹವಾಮಾನ ವರದಿ ಕಾಣಿಸುತ್ತದೆ.

Heavy rain red alert ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು. ಇನ್ನೇಕೆ ತಡ ಕೂಡಲೇ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ನಿಮ್ಮೂರಿನ ಸುತ್ತಮುತ್ತ ಮಳೆ ಯಾವಾಗ ಬರುತ್ತದೆ ಎಂಬುದನ್ನು ಈಗಲೇ ತಿಳಿದುಕೊಳ್ಳಬಹುದು.

Heavy rain red alert ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ

ಮಳೆರಾಯ ಬಿಡುವು ನೀಡದೆ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಕರಾವಳಿ ಮತ್ತು ಮಲನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಅಬ್ಬರಿಸುತ್ತಿದ್ದರಿಂದ ಎಲ್ಲೆಲ್ಲೂ ಬರೀ ನೀರೇ ನೀರು ಕಾಣಿಸುತ್ತಿದೆ.

Heavy rain red alert ರೈತರ ಜಮೀನುಗಳಲ್ಲಿ ನಿಂತ ನೀರು

ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಜಮೀನುಗಳಲ್ಲಿ ಮಳೆ ನೀರು ನಿಂತಿದೆ. ಹೀಗಾಗಿ ಬೆಳೆ ಹಾಳಾಗುವ ಆಂತಕ ಎದುರಾಗಿದೆ. ಒಂದು ವೇಳೆ ಇದೇ ರೀತಿ ಮಳೆ ಮುಂದುವರೆದರೆ ರೈತರ ಅಪಾರ ಬೆಳೆ ಹಾನಿಯಾಗುವ ಸಾಧ್ಯತೆಯಿದೆ.

Leave a Comment