Heavy rain red alert ಇಂದಿನಿಂದ ಮತ್ತೆ ಭಾರಿ ಮಳೆ ಎಲ್ಲೆಲ್ಲಿ ರೆಡ್ ಅಲರ್ಟ್

Written by Admin

Published on:

Spread the love

Heavy rain red alert : ಪ್ರಸಕ್ತ ಸಾಲಿನಲ್ಲಿ ಮುಂಗಾರು ಪೂರ್ವ ಮಳೆ ಭರ್ಜರಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದೇ ರೀತಿ ಮುದಿನ ವಾರ ಸಹ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 22 ರಿಂದ 24 ರವರೆಗೆ ಮೂರು ದಿನಗಳಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೌದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೇ 22 ರಂದು ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮೇ 22 ರಂದು ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದ.  ಮೇ 23 ಹಾಗೂ 24 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇದೇ ಅವಧಿಯಲ್ಲಿ ಉಡುಪಿ ಜಿಲ್ಲೆಗೆ ಮೊದಲ ದಿನ ರೆಡ್  ಹಾಗೂ ಉಳಿದ  ಎರಡು ದಿನ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ಮೂರು ದಿನ ವ್ಯಾಪಕ ಮಳೆಯಾಗಲಿದೆ.. ಮೇ 22 ರಂದು ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ,ಬೀದರ್ , ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಿಗೆ ಮೇ 22 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : Gruhalakshmi helpline number ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವೇ ಇಲ್ಲಿ ನೀಡಲಾದ ನಂಬರಿಗೆ ಸಂಪರ್ಕಿಸಿ

ಮೇ 23 ರಂದು ಶಿವಮೊಗ್ಗ, ಧಾರವಾಡ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಮೇ 24 ರಂದು ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕಡಗು ಜಿಲ್ಲೆಗಳಿಗೆ ಆರೇಂಜ್ ಅಲರ್ಚ್ ಎಚ್ಚರಿಕೆ ನೀಡಲಾಗಿದೆ.

ಧಾರವಾಡ, ಗದಗ, ಹಾಸನ, ಮೈಸೂರು, ಚಾಮರಾಜನಗರ, ಬೆಳಗಾವಿ ಹಾಗೂ ಬಾಗಲಕೋಟೆ  ಜಿಲ್ಲೆಗಳಿಗೆ ಯೆಲ್ಲೋ ಅಲರ್ಚ್ ಎಚ್ಚರಿಕೆ ನೀಡಲಾಗಿದೆ.

Heavy rain red alert ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?

ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.

Heavy rain red alert ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment